Kannada Prerane - ಕನ್ನಡ ಪ್ರೇರಣೆ

Kannada Prerane - ಕನ್ನಡ ಪ್ರೇರಣೆ ಕನ್ನಡ ಪ್ರೇರಣೆ - Kannada Motivation
ಸಂಪೂರ್ಣ ವಿಡಿಯೋಗಳನ್ನು ನೋಡಲು ನಮ್ಮ ಯುಟ್ಯೂಬ್ ಚಾನೆಲ್ ನೋಡಿ.. 🙏

Happy follow-versary to my awesome followers. Thanks for all of your support! Brahmanand P Badiger, P K Guptha Guptha, N...
20/03/2024

Happy follow-versary to my awesome followers. Thanks for all of your support! Brahmanand P Badiger, P K Guptha Guptha, Nagraju M Patel

ಗೀತೆ 10.34[ಸಾಯಿಸುವವನಾದ್ದರಿಂದ ‘ಮೃತ್ಯು’ನಾಮಕನಾಗಿ, ಯಮನ ಪರಿವಾರ ದೇವತೆಯಾದ ಮೃತ್ಯುವಿನಲ್ಲಿದ್ದು ಅವನಿಗೆ ಎಲ್ಲವನ್ನು ಕಬಳಿಸುವ ಶಕ್ತಿಯಿತ್ತ...
10/02/2024

ಗೀತೆ 10.34
[ಸಾಯಿಸುವವನಾದ್ದರಿಂದ ‘ಮೃತ್ಯು’ನಾಮಕನಾಗಿ, ಯಮನ ಪರಿವಾರ ದೇವತೆಯಾದ ಮೃತ್ಯುವಿನಲ್ಲಿದ್ದು ಅವನಿಗೆ ಎಲ್ಲವನ್ನು ಕಬಳಿಸುವ ಶಕ್ತಿಯಿತ್ತವನು] ನಾನು. ಮುಂದೆ ಆಗುವವರನ್ನು ಹುಟ್ಟಿಸುವವನೂ ನಾನು. ಹೆಂಗಸರಲ್ಲಿ ಕೀರ್ತಿಯ ದೇವತೆ ನಾನು; ಶ್ರೀದೇವಿ ನಾನು; ವಾಗ್ದೇವಿ ನಾನು. ಸ್ಮರಣಶಕ್ತಿಯ ದೇವತೆ ನಾನು; ಧಾರಣಶಕ್ತಿಯ ದೇವತೆ ನಾನು; ಸಹನೆಯ ದೇವತೆ ನಾನು; ಕ್ಷಮಾ ದೇವಿ ನಾನು.[ಕೀರ್ತನೀಯವಾಗಿ ‘ಕೀರ್ತಿ’ ಎನ್ನಿಸಿ ಕೀರ್ತಿದೇವಿಯಲ್ಲಿದ್ದೇನೆ; ಆಶ್ರಯನಾಗಿ ‘ಶ್ರೀ’ ಎನ್ನಿಸಿ ಶ್ರೀದೇವಿಯಲ್ಲಿದ್ದೇನೆ; ವಕ್ತಾರನಾಗಿ ‘ವಾಕ್’ ಎನ್ನಿಸಿ ವಾಗ್ದೇವಿಯಲ್ಲಿದ್ದೇನೆ; ಸ್ಮರಣೀಯನಾಗಿ ‘ಸ್ಮೃತಿ’ ಎನ್ನಿಸಿ ಸ್ಮೃತಿದೇವಿಯಲ್ಲಿದ್ದೇನೆ; ಅರಿವಿನ ಮೂರ್ತಿಯಾಗಿ ‘ಧೃತಿ’ ಎನ್ನಿಸಿ ಧೃತಿದೇವಿಯಲ್ಲಿದ್ದೇನೆ; ತಪ್ಪುಗಳನ್ನು ಮನ್ನಿಸುವವನಾಗಿ ‘ಕ್ಷಮಾ’ ಎನ್ನಿಸಿ ಕ್ಷಮಾದೇವಿಯಲ್ಲಿದ್ದೇನೆ.]

Watch Complete Video on YouTube Channel 🙏











#ಕನ್ನಡ_ಪ್ರೇರಣೆ


ಭಗವದ್ಗೀತೆ ಅಧ್ಯಾಯ-10 (ಶ್ಲೋಕ 21 & 22)ತನ್ನ ವಿಭೂತಿಗಳ ಬಗ್ಗೆ ಹೇಳುತ್ತ ಕೃಷ್ಣ ಮೊಟ್ಟಮೊದಲು ನಿತ್ಯ ಉಪಾಸನೆಯಲ್ಲಿ ಬಹಳ ಮುಖ್ಯವಾದ ತನ್ನ ಸ್ವರ...
30/01/2024

ಭಗವದ್ಗೀತೆ ಅಧ್ಯಾಯ-10 (ಶ್ಲೋಕ 21 & 22)
ತನ್ನ ವಿಭೂತಿಗಳ ಬಗ್ಗೆ ಹೇಳುತ್ತ ಕೃಷ್ಣ ಮೊಟ್ಟಮೊದಲು ನಿತ್ಯ ಉಪಾಸನೆಯಲ್ಲಿ ಬಹಳ ಮುಖ್ಯವಾದ ತನ್ನ ಸ್ವರೂಪ ವಿಭೂತಿಯನ್ನು ಹೇಳುತ್ತಾನೆ. ಅದಿತಿಯ ಹನ್ನೆರಡು ಮಂದಿ ಪುತ್ರರಲ್ಲಿ (ದ್ವಾದಶಾದಿತ್ಯರು-ವಿವಸ್ವಾನ್(ಸೂರ್ಯ), ಅರ್ಯಮಾ, ಪೂಷಾ, ತ್ವಷ್ಟಾ, ಸವಿತಾ, ಭಗ, ಧಾತಾ, ವಿಧಾತ, ವರುಣ, ಮಿತ್ರ, ಇಂದ್ರ, ಮತ್ತು ವಾಮನರೂಪಿ ವಿಷ್ಣು ) ಒಬ್ಬ ಭಗವಂತನ ಸಾಕ್ಷಾತ್ ವಿಭೂತಿ. ಆತನೇ ವಾಮನ ರೂಪಿ ವಿಷ್ಣು. ಆದ್ದರಿಂದ ಕೃಷ್ಣ ಹೇಳುತ್ತಾನೆ “ದ್ವಾದಶಾದಿತ್ಯರಲ್ಲಿ ವಿಷ್ಣು ನಾನು” ಎಂದು. ಇನ್ನು ಆದಿತ್ಯರು ಎಂದರೆ ಸಮಸ್ತ ದೇವತೆಗಳು ಎನ್ನುವ ಅರ್ಥವಿದೆ. ಸರ್ವ ದೇವತೆಗಳಲ್ಲಿ ದೇವೋತ್ತಮ ‘ವಿಷ್ಣು’ ಆ ಭಗವಂತ.

Watch Complete Video on YouTube Channel 🙏

ಅಧ್ಯಾಯ 10 ಶ್ಲೋಕ - 15 & 16  ಓ ಎಲ್ಲಾ ಜೀವಿಗಳ ಸ್ರಷ್ಟಾರನೆ, ಎಲ್ಲ ಜೀವಿಗಳ ದೊರೆಯೆ, ದೇವತೆಗಳಿಗೂ ಹಿರಿಯ ದೈವತವೆ, ಜಗದೊಡೆಯನೆ, ಯಾವ ರೂಪಗಳಿ...
19/01/2024

ಅಧ್ಯಾಯ 10 ಶ್ಲೋಕ - 15 & 16 ಓ ಎಲ್ಲಾ ಜೀವಿಗಳ ಸ್ರಷ್ಟಾರನೆ, ಎಲ್ಲ ಜೀವಿಗಳ ದೊರೆಯೆ, ದೇವತೆಗಳಿಗೂ ಹಿರಿಯ ದೈವತವೆ, ಜಗದೊಡೆಯನೆ, ಯಾವ ರೂಪಗಳಿಂದ ನೀನು ಈ ಲೋಕಗಳನ್ನೆಲ್ಲ ತುಂಬಿ ನಿಂತಿರುವೆಯೋ ಅಂಥ ಅಲೌಕಿಕವಾದ ನಿನ್ನ ಬಗೆಬಗೆಯ ರೂಪಗಳ ಹಿರಿಮೆಗಳನ್ನು ಬಿಡದೆ ತಿಳಿಹೇಳಬೇಕು ನೀನೆ.
ಅರ್ಜುನ ಹೇಳುತ್ತಾನೆ: “ನಿನ್ನ ಗುಣಪ್ರಮಾಣವನ್ನು ದೇವತೆಗಳಿಂದಲೂ ಅಳೆಯಲು ಸಾಧ್ಯವಿಲ್ಲ. ಆದ್ದರಿಂದ ನಿನ್ನ ಬಗೆಗೆ ತಿಳಿದಿರುವುದು ನೀನೊಬ್ಬನೆ. ಅದನ್ನು ನೀನು ನೀನಾಗಿಯೇ ಹೇಳಬೇಕು ಹೊರತು ಇನ್ನೊಬ್ಬರಿಂದ ಹೇಳಲು ಸಾಧ್ಯವಿಲ್ಲ. ಏಕೆಂದರೆ ನೀನು ಪುರುಷೋತ್ತಮ” ಎಂದು.
ಸಂಪೂರ್ಣ ಅಧ್ಯಾಯ ನಮ್ಮ ಯೂಟ್ಯೂಬ್ ಚಾನೆಲ್ ಈಗಲೇ ನೋಡಿ 🙏










#ಕನ್ನಡ_ಪ್ರೇರಣೆ


ಶ್ಲೋಕ - 12 & 13 : ಇಲ್ಲಿ ಅರ್ಜುನ ಕೃಷ್ಣನನ್ನು “ಪರಂಬ್ರಹ್ಮ, ಪರಂಧಾಮ, ಪರಮಪವಿತ್ರ ನೀನು” ಎಂದು ಸಂಬೋಧಿಸುತ್ತಾನೆ. ಯಾವುದು ಎಲ್ಲವುದಕ್ಕಿಂತ ...
18/01/2024

ಶ್ಲೋಕ - 12 & 13 : ಇಲ್ಲಿ ಅರ್ಜುನ ಕೃಷ್ಣನನ್ನು “ಪರಂಬ್ರಹ್ಮ, ಪರಂಧಾಮ, ಪರಮಪವಿತ್ರ ನೀನು” ಎಂದು ಸಂಬೋಧಿಸುತ್ತಾನೆ. ಯಾವುದು ಎಲ್ಲವುದಕ್ಕಿಂತ ದೊಡ್ಡದೋ ಅದು ಬ್ರಹ್ಮ. ಬ್ರಹ್ಮ ಅನ್ನುವ ಪದವನ್ನು ಇನ್ನೂ ಅನೇಕ ಅರ್ಥದಲ್ಲಿ ಬಳಸುತ್ತಾರೆ. ಅದಕ್ಕಾಗಿ ಇಲ್ಲಿ ಸ್ಪಷ್ಟತೆಗಾಗಿ ‘ಪರಂ ಬ್ರಹ್ಮ’ ಎಂದಿದ್ದಾರೆ. “ಎಲ್ಲಕ್ಕಿಂತ ದೊಡ್ಡವ ಮತ್ತು ನಂಬಿದವರನ್ನು ಎತ್ತರಕ್ಕೇರಿಸುವ ನೀನು ಪರಿಪೂರ್ಣ. ನಾನು ನನ್ನ ವ್ಯಕ್ತಿತ್ವದ ಪೂರ್ಣತೆಯನ್ನು ಕಾಣಲು ನಿನ್ನ ಅನುಗ್ರಹ ಬೇಕು” ಎನ್ನುವ ಧ್ವನಿ ಈ ಸಂಬೋಧನೆಯಲ್ಲಿದೆ. ಇನ್ನು ಪರಂ ಧಾಮ: ‘ಧಾಮ’ ಅಂದರೆ ಆಶ್ರಯ. ಭಗವಂತನನ್ನು ಆಶ್ರಯಿಸದೆ ಇರುವ ಒಂದು ವಸ್ತು ಈ ಜಗತ್ತಿನಲ್ಲಿಲ್ಲ. “ನೀನು ಸರ್ವಸ್ವತಂತ್ರ, ಮತ್ತು ನಾವೆಲ್ಲರೂ ನಿನ್ನ ಅಧೀನ, ನೀನು ಆಶ್ರಯಧಾತ ಮತ್ತು ನಾವು ಆಶ್ರಿತರು” ಎನ್ನುವ ಅರ್ಥದಲ್ಲಿ ಅರ್ಜುನ ಕೃಷ್ಣನನ್ನು ‘ಪರಂ ಧಾಮ’ ಎಂದಿದ್ದಾನೆ.
ಸಂಪೂರ್ಣ ವಿಡಿಯೋ ನಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ಈಗಲೇ ನೋಡಿ










#ಕನ್ನಡ_ಪ್ರೇರಣೆ


ಗೀತೆ 9.17ಪ್ರತಿಯೊಂದು ಸಂಬಂಧದ ಹಿಂದೆ ಭಗವಂತನ ಸಂಬಂಧವಿದೆ. ಆದರೆ ನಮಗೆ ಆ ಕಲ್ಪನೆ ಇರುವುದಿಲ್ಲ. ಆಯಾ ಜೀವದ ಪ್ರಾರಾಬ್ಧ ಕರ್ಮಕ್ಕನುಗುಣವಾಗಿ ಸಂ...
05/01/2024

ಗೀತೆ 9.17
ಪ್ರತಿಯೊಂದು ಸಂಬಂಧದ ಹಿಂದೆ ಭಗವಂತನ ಸಂಬಂಧವಿದೆ. ಆದರೆ ನಮಗೆ ಆ ಕಲ್ಪನೆ ಇರುವುದಿಲ್ಲ. ಆಯಾ ಜೀವದ ಪ್ರಾರಾಬ್ಧ ಕರ್ಮಕ್ಕನುಗುಣವಾಗಿ ಸಂಬಂಧಗಳು. ಅಲ್ಲಿರುವ ಪ್ರೀತಿ, ಮಮತೆ, ಶತ್ರುತ್ವ ಎಲ್ಲವೂ ಭಗವಂತನ ಕಾರ್ಯಕ್ರಮ. ಇದನ್ನು ನಾವು ತಿಳಿದಾಗ ನಮ್ಮ ಜೀವನ ಸುಗಮ. ಒಬ್ಬರು ನಮ್ಮನ್ನು ದ್ವೇಷಿಸಿದಾಗ ಕುಗ್ಗುವ ಅಗತ್ಯವಾಗಲೀ, ಒಬ್ಬರು ನಮ್ಮನ್ನು ಪ್ರೀತಿಸಿದಾಗ ಹಿಗ್ಗುವ ಅಗತ್ಯವಾಗಲೀ ಇಲ್ಲ. ಎಲ್ಲವೂ ನಮ್ಮ ಜೀವಸ್ವಭಾವ ಮತ್ತು ಪ್ರರಾಬ್ಧಕರ್ಮಕ್ಕನುಗುಣವಾಗಿ ಭಗವಂತನ ಲೀಲೆ ಎನ್ನುವ ಎಚ್ಚರ ಇಲ್ಲಿ ಬಹಳ ಮುಖ್ಯ
Watch Complete Video on YouTube Channel
Link in Bio 🙏

ಭಗವದ್ಗೀತೆ ಅಧ್ಯಾಯ 9 ಶ್ಲೋಕ 16ಭಗವಂತನನ್ನು ಹೇಗೆ ಅನುಸಂಧಾನ ಮಾಡಬೇಕು, ಹೇಗೆ ಮಾಡಬಾರದು ಎನ್ನುವ ಅರಿವನ್ನು ಕೊಟ್ಟ ಕೃಷ್ಣ, ಮುಂದೆ ಭಗವಂತನ ವಿಭ...
04/01/2024

ಭಗವದ್ಗೀತೆ ಅಧ್ಯಾಯ 9 ಶ್ಲೋಕ 16
ಭಗವಂತನನ್ನು ಹೇಗೆ ಅನುಸಂಧಾನ ಮಾಡಬೇಕು, ಹೇಗೆ ಮಾಡಬಾರದು ಎನ್ನುವ ಅರಿವನ್ನು ಕೊಟ್ಟ ಕೃಷ್ಣ, ಮುಂದೆ ಭಗವಂತನ ವಿಭೂತಿಯನ್ನು ಬೇರೆ ಬೇರೆ ಪ್ರತೀಕಗಳಲ್ಲಿ ಹೇಗೆ ಅನುಸಂಧಾನ ಮಾಡಬೇಕು ಎನ್ನುವುದನ್ನು ವಿವರಿಸುತ್ತಾನೆ. ಇಡೀ ವಿಶ್ವದ ಅಣು ಕಣಗಳಲ್ಲಿ ತುಂಬಿರುವ ಭಗವಂತನ ಅನುಸಂಧಾನ ಹಾಗು ಅದರ ವಿಶಿಷ್ಟ ಉಪಾಸನೆಯ ವಿವರವನ್ನು ಈ ಅಧ್ಯಾಯದ ಮುಂದಿನ ಭಾಗದಲ್ಲಿ ಕೃಷ್ಣ ವಿವರಿಸಿದ್ದಾನೆ. ಬನ್ನಿ ಈ ಅಪೂರ್ವ ವಿಶಿಷ್ಟ ಜ್ಞಾನವನ್ನು ಭಗವಂತನಿಂದಲೇ ಕೇಳಿ ತಿಳಿದು ಕೃತಾರ್ಥರಾಗೋಣ.

ಸಂಪೂರ್ಣ ಶ್ಲೋಕ - ಶ್ಲೋಕದ ಅರ್ಥ - ಶ್ಲೋಕದ ಸಂಪೂರ್ಣ ವಿವರಣೆಯನ್ನು ನಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ನೋಡಿ.
Link in Bio 🙏🪔













28/12/2023

Chapter 9: Rāja Vidyā Yog
Yog through the King of Sciences

In the two previous chapters, the Supreme Lord Shree Krishna declared that among all, bhakti is the highest, yet the simplest path of attaining Yog, or union with the Supreme. In this chapter, He reveals His supreme glories that inspire reverence, devotion, and awe. Although Shree Krishna stands in front of Arjun in His personal form, it should not be mistaken to possess human personality.

At the beginning of creation, the Supreme Lord creates innumerable life-forms with His material energy. And at dissolution, He absorbs them back into Himself, and in the next cycle of creation, He manifests them again. Similar to the mighty winds that blow everywhere yet always stay within the sky, all living beings’ dwell within God. However, He remains ever aloof and detached from all these activities as a neutral observer by His divine Yogmaya power.

ಗೀತೆ 8.11 ಕೃಷ್ಣ ಹೇಳುತ್ತಾನೆ “ಯೋಗ ಸಾಧನೆಯಿಂದ ಭ್ರುಮಧ್ಯೆ ತಂದು ನಿಲ್ಲಿಸಿದ ಜೀವವನ್ನು ಅಲ್ಲಿಂದ ಧ್ಯಾನ ಮಾಡುತ್ತಾ ಮೇಲಕ್ಕೆ ಸಹಸ್ರಾರದತ್ತ ತ...
25/12/2023

ಗೀತೆ 8.11 ಕೃಷ್ಣ ಹೇಳುತ್ತಾನೆ “ಯೋಗ ಸಾಧನೆಯಿಂದ ಭ್ರುಮಧ್ಯೆ ತಂದು ನಿಲ್ಲಿಸಿದ ಜೀವವನ್ನು ಅಲ್ಲಿಂದ ಧ್ಯಾನ ಮಾಡುತ್ತಾ ಮೇಲಕ್ಕೆ ಸಹಸ್ರಾರದತ್ತ ತೆಗೆದುಕೊಂಡು ಹೋಗಬೇಕು” ಎಂದು. ಈ ಕಾಲದಲ್ಲಿ ಧ್ಯಾನ ಮಾಡಬೇಕಾದ ರೂಪದ ಬಗ್ಗೆ ಹೇಳುತ್ತಾ ಕೃಷ್ಣ ಹೇಳುತ್ತಾನೆ “ವೇದವನ್ನು ಬಲ್ಲವರು ಅದನ್ನು ಅಳಿವಿರದ ‘ಅಕ್ಷರ’(ಓಂಕಾರ ಎನ್ನುವ ಅಕ್ಷರದಿಂದ ಪ್ರತಿಪಾಧ್ಯನಾದ ಸರ್ವಶಬ್ದ ವಾಚ್ಯ) ಎನ್ನುತ್ತಾರೆ” ಎಂದು.
Watch Complete Chapter On YouTube channel
Link in Bio 🙏













Chanakya NitiWatch it on YouTube ChannelLink in Bio
23/12/2023

Chanakya Niti
Watch it on YouTube Channel
Link in Bio













23/12/2023

See Instagram '💯✅Chapter 7' highlights from Kannada Prerane - ಕನ್ನಡ ಪ್ರೇರಣೆ ()

ಭಗವದ್ಗೀತೆ : ಅಧ್ಯಾಯ 8 (ಅಕ್ಷರ ಬ್ರಹ್ಮ ಯೋಗ) ಇಂದಿನಿಂದ ಪ್ರಾರಂಭ..ಭಗವದ್ಗೀತೆಯ ಎಲ್ಲಾ ಅಧ್ಯಾಯಗಳನ್ನು (ಶ್ಲೋಕ - ಅನುವಾದ - ಭಾವಾರ್ಥ)ನಮ್ಮ ಯ...
19/12/2023

ಭಗವದ್ಗೀತೆ : ಅಧ್ಯಾಯ 8 (ಅಕ್ಷರ ಬ್ರಹ್ಮ ಯೋಗ) ಇಂದಿನಿಂದ ಪ್ರಾರಂಭ..
ಭಗವದ್ಗೀತೆಯ ಎಲ್ಲಾ ಅಧ್ಯಾಯಗಳನ್ನು (ಶ್ಲೋಕ - ಅನುವಾದ - ಭಾವಾರ್ಥ)ನಮ್ಮ ಯುಟ್ಯೂಬ್ ಚಾನೆಲ್ ನಲ್ಲಿ ನೋಡಿ.
ನಿರಂತರ ಅಪ್ಡೇಟ್ಗಳನ್ನು ನೋಡಲು ನಮ್ಮ ವಾಟ್ಸಾಪ್ ಚಾನೆಲ್ ಗೆ ಚಂದದಾರರಾಗಿ
ಎಲ್ಲಾ ಲಿಂಕ್ ಗಳನ್ನು ಪ್ರೊಫೈಲ್ ನಲ್ಲಿ ನೀಡಲಾಗಿದೆ

ಅಧ್ಯಾಯ 8: ಪ್ರಯತ್ನ ಬಿಡಬೇಡ
ದೇವರ ಧ್ಯಾನದಲ್ಲಿ ಪ್ರಾಮಾಣಿಕವಾಗಿ ತೊಡಗಿರುವವನಿಗೆ ದೇವರು ಸಿಕ್ಕೇ ಸಿಗುತ್ತಾನೆ. ಪ್ರಯತ್ನ ಬಿಡಕೂಡದು ಎಂದು ಹೇಳುತ್ತಾನೆ.

Watch Complete Video on YouTube Channel
Link in Bio 🙏













ಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ...
18/12/2023

ಅಧ್ಯಾಯ 1: ತಪ್ಪಾಗಿ ಯೋಚಿಸುವುದೇ ಜೀವನದ ಸಮಸ್ಯೆ
ಅರ್ಜುನನ ದುಃಖ ಇಲ್ಲಿ ಮುಖ್ಯ ವಿಷಯ. ಯುದ್ಧಕ್ಕಾಗಿ ಬಂಧುಗಳನ್ನೇ ಕೊಲ್ಲಬೇಕಾದ ದುಗುಡ ಹಾಗೂ ಖಿನ್ನತೆ. ಧರ್ಮ ಹಾಳುಗೆಡವಿದ್ದನ್ನು ನೋಡುವುದಕ್ಕಿಂತ ಅವರೆಲ್ಲ ತನ್ನ ಬಂಧುಗಳೇ. ಅವರನ್ನು ಹೇಗೆ ಕೊಲ್ಲುವುದು ಎಂದು ಅರ್ಜುನ ಯೋಚಿಸುತ್ತಿರುತ್ತಾನೆ. ಆದರೆ, ಈ ಯೋಚನೆ ತಪ್ಪು. ಧರ್ಮವು ಈ ಭವಬಂಧನಗಳಿಗಿಂತ ಹೆಚ್ಚು. ತಪ್ಪಾಗಿ ಯೋಚಿಸುವುದರಿಂದ ತಪ್ಪಾದ ತೀರ್ಪು ಹೊರಬರುತ್ತದೆ ಎಂಬುದನ್ನು ಶ್ರೀಕೃಷ್ಣ ವಿವರಿಸುತ್ತಾನೆ. ಆದರೆ, ಅರ್ಜುನನಿಗೆ ಸಮಧಾನವಾಗುವುದಿಲ್ಲ. ಆತ ಗೊಂದಲ ಹಾಗೂ ದುಃಖದಿಂದ ಕುಳಿತುಕೊಳ್ಳುತ್ತಾನೆ.

ಅಧ್ಯಾಯ 2: ಸರಿಯಾದ ಜ್ಞಾನವೇ ಎಲ್ಲ ಸಮಸ್ಯೆಗಳಿಗೆ ಅಂತಿಮ ಪರಿಹಾರ
ಕೃಷ್ಣನು ಅರ್ಜುನನಿಗೆ ಅವನೆಲ್ಲ ದುಃಖದುಮ್ಮಾನ, ಸಮಸ್ಯೆಗಳಿಗೆ ಅಜ್ಞಾನವೇ ಕಾರಣ ಎಂಬುದನ್ನು ತಿಳಿಸುತ್ತಾನೆ. ಭೀಷ್ಮನಿಂದ ಹಿಡಿದು ಯಾರೊಬ್ಬರ ಆತ್ಮಗಳನ್ನೂ ನಾಶಪಡಿಸಲಾಗುವುದಿಲ್ಲ. ಹಾಗಾಗಿ ಅವರೆಲ್ಲ ಶಾಶ್ವತವಾಗಿರುತ್ತಾರೆ. ಯುದ್ಧವನ್ನು ದೂರವಿಡುವುದರಿಂದ ನಿನ್ನ ಧರ್ಮವನ್ನೇ ದೂರವಿಟ್ಟಂತಾಗುತ್ತದೆ. ಅದು ಪಾಪಕಾರ್ಯ. ಹೋರಾಡದಿದ್ದರೆ ಆತನೊಬ್ಬ ಹೇಡಿ ಎನಿಸಿಕೊಳ್ಳುತ್ತಾನೆ ಎಂದು ಎಚ್ಚರಿಸುತ್ತಾನೆ ಕೃಷ್ಣ.

ಅಧ್ಯಾಯ 3: ಅಭಿವೃದ್ಧಿ ಹಾಗೂ ಬೆಳವಣಿಗೆಗೆ ನಿಸ್ವಾರ್ಥವೊಂದೇ ದಾರಿ
ಕೃಷ್ಣ ಇಲ್ಲಿ ನಿಸ್ವಾರ್ಥ ಸೇವೆಯಾದ ಕರ್ಮಯೋಗದ ಕುರಿತು ಮಾತನಾಡುತ್ತಾನೆ. ಕರ್ಮಯೋಗಿಯು ಧರ್ಮದ ಆಧ್ಯಾತ್ಮಕ್ಕೆ ಬೆಲೆ ಕೊಟ್ಟು ತನ್ನೆಲ್ಲ ಕೆಲಸಗಳನ್ನು ದೇವರಿಗೆ ಸಮರ್ಪಿಸುತ್ತಾನೆ. ಫಲಿತಾಂಶದ ಬಗ್ಗೆ ಯೋಚಿಸದೆ ತನ್ನ ಪಾಡಿಗೆ ತಾನು ಶಾಂತಚಿತ್ತದಿಂದ ಕೆಲಸ ಮಾಡಿಕೊಂಡು ಹೋಗುತ್ತಾನೆ. ನಮ್ಮ ಆಸೆ, ಸಿಟ್ಟು, ಅತಿಯಾದ ಪ್ರೀತಿಯೇ ನಮ್ಮ ನಿಜವಾದ ಶತ್ರುಗಳು. ಇವು ನಮ್ಮನ್ನು ಸ್ವಾರ್ಥಿಗಳಾಗಿಸಿ ಶಾಂತಿಯನ್ನು ಕಸಿದುಕೊಳ್ಳುತ್ತದೆ ಎಂದು ತಿಳಿಸುತ್ತಾನೆ.

ಅಧ್ಯಾಯ 4: ಧರ್ಮಸಂಸ್ಥಾಪನೆಗೆ ಭಗವಂತ ಅವತಾರ ಎತ್ತುತ್ತಾನೆ
ಧರ್ಮಕ್ಕೆ ಹಾನಿಯಾದಾಗ ಭಗವಂತನು ಸಜ್ಜನರನ್ನು ಕಾಪಾಡಿ, ದುರ್ಜನರನ್ನು ನಾಶ ಮಾಡಲು, ಪ್ರತಿ ಯುಗದಲ್ಲಿ ಭೂಮಿಯಲ್ಲಿ ಅವತರಿಸುತ್ತಾನೆ ಎಂದು ಕೃಷ್ಣ ವಿವರಿಸುತ್ತಾನೆ. ಅಷ್ಟೇ ಅಲ್ಲ, ಭಗವಂತನ ಈ ಜನ್ಮ ರಹಸ್ಯವನ್ನು ಅರಿತವರು ಮೋಕ್ಷ ಪ್ರದರು ಎಂದು ತಿಳಿಸುತ್ತಾನೆ.

ಅಧ್ಯಾಯ 5: ಅಹಂಕಾರದಿಂದ ಹೊರ ಬಂದು ಫಲದಾಸೆ ಇಲ್ಲದೆ ಕರ್ಮ ಮಾಡು
ಹೇಗೆ ಕರ್ತವ್ಯ ನಿಭಾಯಿಸುತ್ತಲೇ ಫಲದಾಸೆಯಿಲ್ಲದೆ ಸನ್ಯಾಸಿಯಂತಿರುವುದು ಎಂದು ಅರ್ಜುನ ಪ್ರಶ್ನಿಸುತ್ತಾನೆ. ಇದಕ್ಕೆ ಕೃಷ್ಣನು ನಿಜವಾದದ ಕರ್ಮಯೋಗಿಯು ಫಲಿತಾಂಶದ ಬಗ್ಗೆ ಯೋಚಿಸದೆ ಫಲವನ್ನು ದೇವರಿಗೆ ಬಿಟ್ಟು ತಾನು ಕರ್ತವ್ಯ ನಿಭಾಯಿಸುತ್ತಾನೆ. ಈ ಮನಸ್ಥಿತಿಯಿಂದಾಗಿ ಆತ ಸ್ವಯಂ ನಿಯಂತ್ರಣ ಸಾಧಿಸಿ ಅಹಂಕಾರದಿಂದ ಹೊರಬರಬಲ್ಲ ಎಂದು ಹೇಳುತ್ತಾನೆ.

ಅಧ್ಯಾಯ 6: ಧ್ಯಾನಸಾಧಕನಿಗೆ ಕರ್ಮ ಸಾಧನೆ ಸಾಧ್ಯ
ಧ್ಯಾನದ ಕುರಿತು ಇಲ್ಲಿ ಕೃಷ್ಣ ಹೇಳುತ್ತಾನೆ. ಧ್ಯಾನವನ್ನು ಅಭ್ಯಾಸ ಮಾಡುವವನು ಏಕಾಂಗಿಯಾಗಿ, ದೇಹವನ್ನೂ ಮನಸ್ಸನ್ನೂ ಬಿಗಿಹಿಡಿದು, ಮನಸ್ಸನ್ನು ಪರಮಾತ್ಮನಲ್ಲಿ ಕೂಡಿಸಿಕೊಂಡಿರಬೇಕು. ಪ್ರಯತ್ನದಿಂದಲೇ ಇಂದ್ರಿಯಗಳನ್ನೂ, ಮನಸ್ಸನ್ನು ಗೆಲ್ಲಬೇಕು ಎನ್ನುತ್ತಾನೆ.

ಅಧ್ಯಾಯ 7: ನೀನಾರು ಎಂದು ತಿಳಿದುಕೋ.
ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು.

ಭಗವದ್ಗೀತಾ ಅಧ್ಯಾಯ 7: ಜ್ಞಾನ ವಿಜ್ಞಾನ ಯೋಗ .ಅಧ್ಯಾಯ 7ರ ಸಾರಾಂಶ : ನೀನಾರು ಎಂದು ತಿಳಿದುಕೋ. ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂ...
18/12/2023

ಭಗವದ್ಗೀತಾ ಅಧ್ಯಾಯ 7: ಜ್ಞಾನ ವಿಜ್ಞಾನ ಯೋಗ .

ಅಧ್ಯಾಯ 7ರ ಸಾರಾಂಶ : ನೀನಾರು ಎಂದು ತಿಳಿದುಕೋ.
ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು. ಜ್ಞಾನಿಯು ನನ್ನಲ್ಲಿ ಲೀನನಾಗುತ್ತಾನೆ ಎಂಬ ತತ್ವ ಕೃಷ್ಣ ಬೋಧಿಸುತ್ತಾನೆ.
Watch Complete Video on YouTube
Channel Link in Bio/story/highlights














ಭಗವದ್ಗೀತಾ 7.20ಕೃಷ್ಣ ಹಿಂದಿನ ಅಧ್ಯಾಯಗಳಲ್ಲಿ ಹೇಳಿರುವ ವಿಚಾರವನ್ನು ಮತ್ತೆ ಒತ್ತು ಕೊಟ್ಟು ಇಲ್ಲಿ ವಿವರಿಸುತ್ತಾನೆ. ಮನುಷ್ಯ ಅಧ್ಯಾತ್ಮ ಮಾರ್ಗ...
14/12/2023

ಭಗವದ್ಗೀತಾ 7.20
ಕೃಷ್ಣ ಹಿಂದಿನ ಅಧ್ಯಾಯಗಳಲ್ಲಿ ಹೇಳಿರುವ ವಿಚಾರವನ್ನು ಮತ್ತೆ ಒತ್ತು ಕೊಟ್ಟು ಇಲ್ಲಿ ವಿವರಿಸುತ್ತಾನೆ. ಮನುಷ್ಯ ಅಧ್ಯಾತ್ಮ ಮಾರ್ಗದಿಂದ ದೂರ ಸರಿಯಲು ಮೂಲ ಕಾರಣ ಅವನ ಹುಚ್ಚು ಬಯಕೆಗಳು. ಇದು ನಮ್ಮ ಅರಿವಿಗೆ ದೊಡ್ಡ ಅಡ್ಡಗೋಡೆ. ಬಯಕೆಗಳನ್ನು ನಿಯಂತ್ರಿಸಲು ಸಾಧ್ಯವಾಗದೇ ಇದ್ದಾಗ, ಮನುಷ್ಯ ಅಧ್ಯಾತ್ಮದ ಬೆನ್ನುಹತ್ತುವ ಬದಲು ಬಯಕೆಗಳ ಬೆನ್ನು ಹತ್ತುತ್ತಾನೆ.

Watch Complete Video on YouTube
Link in Bio 🙏













Watch Bagavad Gita Chapter 7Watch complete chapter on our YouTube Channel.ಲಿಂಕ್ ಇನ್ ಬಯೋ.                                ...
11/12/2023

Watch Bagavad Gita Chapter 7
Watch complete chapter on our YouTube Channel.
ಲಿಂಕ್ ಇನ್ ಬಯೋ.













ಭಗವದ್ಗೀತೆ ಅಧ್ಯಾಯ ೭ ರ ಪ್ರಾರಂಭ.ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು. ಜ್ಞಾನಿಯು ನನ್ನಲ್ಲಿ ಲೀನನಾಗುತ್ತಾನೆ ಎಂ...
08/12/2023

ಭಗವದ್ಗೀತೆ ಅಧ್ಯಾಯ ೭ ರ ಪ್ರಾರಂಭ.
ಧ್ಯಾನ ಮಾಡುತ್ತಿರುವುದರಿಂದ ನಿನಗೆ ನೀನು ಯಾರೆಂಬುದು ಅರಿವಾಗಬೇಕು. ಜ್ಞಾನಿಯು ನನ್ನಲ್ಲಿ ಲೀನನಾಗುತ್ತಾನೆ ಎಂಬ ತತ್ವ ಬೋಧಿಸುತ್ತಾನೆ.ಎಲ್ಲರೂ ಮಾಡುವಂತಿಲ್ಲ..

ಶ್ಲೋಕ : ಅನುವಾದ : ಭಾವಾರ್ಥ:
Verse : Translation : Commentary

ಸಂಪೂರ್ಣ ವೀಡಿಯೊ ನಮ್ಮ ಯೂಟ್ಯೂಬ್ ನಲ್ಲಿ ನೋಡಿ.
Watch Now













Address

Bangalore

Alerts

Be the first to know and let us send you an email when Kannada Prerane - ಕನ್ನಡ ಪ್ರೇರಣೆ posts news and promotions. Your email address will not be used for any other purpose, and you can unsubscribe at any time.

Videos

Share