
24/09/2025
ಕನ್ನಡ ಸಾಹಿತ್ಯ ಕ್ಷೇತ್ರದ ಮೇರು ಸಾಹಿತಿ, ಪದ್ಮಭೂಷಣ ಶ್ರೀ ಡಾ. ಎಸ್.ಎಲ್. ಭೈರಪ್ಪನವರ ನಿಧನಕ್ಕೆ ತೀವ್ರ ಸಂತಾಪಗಳು.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಸಂತೇಶಿವರ ಗ್ರಾಮದವರಾದ ಭೈರಪ್ಪನವರು ವೈವಿಧ್ಯಮಯ ಕಥೆ, ಕಥಾವಸ್ತುಗಳುಳ್ಳ ಕಾದಂಬರಿಗಳ ಮೂಲಕ ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.
"ಪರ್ವ, ಆವರಣ, ಗೃಹಭಂಗ, ವಂಶವೃಕ್ಷ, ದಾಟು, ನಾಯಿ ನೆರಳು" ಧರ್ಮಶ್ರೀ ಸೇರಿದಂತೆ ಹಲವು ಕಾದಂಬರಿಗಳು ಕನ್ನಡ, ಇಂಗ್ಲಿಷ್ ಸೇರಿದಂತೆ ಹಲವು ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಸುಪ್ರಸಿದ್ಧರಾಗಿದ್ದರು. ಪ್ರತಿಷ್ಠಿತ ಸರಸ್ವತಿ ಸಮ್ಮಾನ್, ಪದ್ಮಶ್ರೀ, ಕೇಂದ್ರ ಮತ್ತು ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.
ಎಸ್.ಎಲ್. ಭೈರಪ್ಪನವರ ನಿಧನ ಭಾರತೀಯ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ, ಕುಟುಂಬದವರು ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ.
#ಓಂಶಾಂತಿ🙏
ೈರಪ್ಪ