Jdsnewz

Jdsnewz ಜನರಿಂದ ಜನರಿಗಾಗಿ ಜನರಿಗೋಸ್ಕರ ಜೆಡಿಎಸ್ ನ್ಯೂಸ್

23/04/2023

ಶ್ರೀ ಆದಿಚುಂಚನಗಿರಿ ಮಹಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಗಳವರು ಇಂದು ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರ ಆರೋಗ್ಯ ವಿಚಾರಿಸಿದರು.

https://m.dailyhunt.in/news/india/kannada/kannada+prabha-epaper-kprabha/pradhaani+modi+hech+di+devegouda+bheti+antar+raa...
13/12/2022

https://m.dailyhunt.in/news/india/kannada/kannada+prabha-epaper-kprabha/pradhaani+modi+hech+di+devegouda+bheti+antar+raajya+nadi+niru+hanchike+seri+halavu+vichaaragala+charche-newsid-n451591838?s=a&uu=0x763c05634e85e23d&ss=wsp

ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗ....

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ದೇವನಹಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವೇಣುಗೋಪಾಲ ಸ್ವಾಮಿ ದೇವರ ಲಕ್ಷದೀಪೋತ್...
08/12/2022

ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ದೇವನಹಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀ ವೇಣುಗೋಪಾಲ ಸ್ವಾಮಿ ದೇವರ ಲಕ್ಷದೀಪೋತ್ಸವದಲ್ಲಿ ಭಾಗಿಯಾಗಿ ಭಗವಂತನ ದರ್ಶನ ಪಡೆದರು.

07/12/2022

ಸಂಸತ್ತಿನಲ್ಲಿ ಮಣ್ಣಿನ ಮಗ ಮಾಜಿ ಪ್ರಧಾನಿಗಳಾದ ಅಪ್ಪಾಜಿ ಹೆಚ್.ಡಿ.ದೇವೇಗೌಡರವರ ಮಾತು, 90 ರ ವಯಸ್ಸಿನಲ್ಲೂ ರಾಜ್ಯದ ಸಮಸ್ಯೆಗಳ ಬಗ್ಗೆ ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕು ಎನ್ನುವ ಅವರ ಹಂಬಲ, ಕಳಕಳಿ ಮತ್ತು ಉತ್ಸಾಹ ಇತರ ಸಂಸದರಿಗೆ ಮಾದರಿಯಾಗಿದೆಯೋ ಅಥವ ನಾಚಿಸುವಂತಿದೆಯೋ ನಿಮ್ಮಿಷ್ಟಕ್ಕೆ ಬಿಟ್ಟದ್ದು.

ಸಂಸತ್ತಿನಲ್ಲಿ ನೀಡುವ ಕಾಲಾವಕಾಶ, ರಾಜ್ಯದ ರೈತರ ಸಮಸ್ಯೆಗಳನ್ನು ಮತ್ತು ಗ್ರಾಮೀಣಾಭಿವೃದ್ದಿಯ ವಿಚಾರಗಳನ್ನು ಪ್ರಸ್ತಾಪಿಸಲು ಸಾಕಾಗುವುದಿಲ್ಲ ಎಂದು ದೇವೇಗೌಡರು ಅಸಮಾಧಾನ ತೋಡಿಕೊಂಡ ಪರಿ.

#ಕೋಲಾರ

20/10/2022

*ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಅಧಿಕಾರಕ್ಕೆ: ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ*

*ಶಾಸಕರು, ಭಾವೀ ಅಭ್ಯರ್ಥಿಗಳ ಜತೆ ತೆರಳಿ ನಾಡದೇವತೆ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ*

***

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ ಎಂದರು.

ಉಚಿತವಾದ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು, ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನು ಸ್ವೀಕರಿಸಿದ್ದೇನೆ. ಜನರಿಗೆ ಉತ್ತಮ ಬದುಕು ಕಟ್ಟಿಕೊಡುತ್ತೇನೆ. ಅಂತಹ ಸರ್ಕಾರ ಅಧಿಕಾರಕ್ಕೆ ತರುತ್ತೇವೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ ಎಂದು ಹೇಳಿದರು.

ಒಂದು ವೇಳೆ ಈ ಯೋಜನೆ ಅನುಷ್ಠಾನ ಮಾಡದಿದ್ದರೆ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ. ಕಳೆದ ಬಾರಿ ಸಿಎಂ ಆಗಿದ್ದಾಗ ಬಹುಮತ ಬರದಿದ್ದರೂ ರೈತರ ಸಾಲ ಮನ್ನಾ ಮಾಡಿ ನುಡಿದಂತೆ ನಡೆದಿದ್ದೇನೆ. ಸಂಪೂರ್ಣ ಒಂದು ಸರ್ಕಾರ ಹೇಗೆ ನಡೆಸಬಹುದು ಅಂತ ತೋರಿಸುವ ಸವಾಲು ಸ್ವೀಕರಿಸಿದ್ದೇನೆ. ಹೊಂದಾಣಿಕೆ ಅಥವಾ ಮೈತ್ರಿ ಸರ್ಕಾರ ಮಾಡಿದರೆ ಜನಪರ ಯೋಜನೆ ಅನುಷ್ಠಾನ ಮಾಡಲು ಆಗಲ್ಲ. ಆ ಕಾರಣ ಪಕ್ಷ ವಿಸರ್ಜನೆ ಬಗ್ಗೆ ಹೇಳಿದೆ ಎಂದು ಅವರು ಹೇಳಿದರು.

ಜನಪರ ಯೋಜನೆ ಚಾಚೂ ತಪ್ಪದೆ ಜಾರಿಗೊಳಿಸಲು 123 ಸ್ಥಾನ ಪಡೆಯುವುದು ನನ್ನ ಗುರಿ. ಇಂದಿನ ಜೆಡಿಎಸ್ ರಾಜ್ಯ ಮಟ್ಟದ ಕಾರ್ಯಾಗಾರದಲ್ಲಿ ಪಂಚರತ್ನ ಕಾರ್ಯಕ್ರಮದ ಬಗ್ಗೆ ಚರ್ಚೆ ಮಾಡುತ್ತೇನೆ, ಎಲ್ಲರಿಂದ ಮಾಹಿತಿ ಪಡೆಯುತ್ತೇನೆ ಎಂದರು ಅವರು.

ನಮ್ಮ ಪಕ್ಷದವರೇ ಅಲ್ಲ ಎಲ್ಲಾ ಪಕ್ಷದವರಲ್ಲಿ ಮೈತ್ರಿ ಸರ್ಕಾರ ಬರುತ್ತೆ ಎಂಬ ನಿಲುವು ಇದೆ. ಆದರೆ ಜೆಡಿಎಸ್ ಪೂರ್ಣ ಪ್ರಮಾಣದ ಸರ್ಕಾರ ರಚಿಸಲಿದೆ. ಕಾಂಗ್ರೆಸ್ ಮತ್ತು ಬಿಜೆಪಿಯವರು ಕೆಸರೆರಚಾಟ ತೊಡಗಿದ್ದಾರೆ. ಆದರೆ ಜೆಡಿಎಸ್ ಬಗ್ಗೆ ಎರಡು ಪಕ್ಷದವರು ಚಕಾರ ಎತ್ತುತ್ತಿಲ್ಲ ಏಕೆಂದರೆ ಮುಂದೆ ಮೈತ್ರಿ ಸರ್ಕಾರದ ಅನಿವಾರ್ಯ ಪರಿಸ್ಥಿತಿ ಬಂದರೆ ಅನುಕೂಲ ಆಗುತ್ತದೆಂದು ಜೆಡಿಎಸ್ ಬಗ್ಗೆ ಯಾರೂ ಟೀಕೆ ಮಾಡುತ್ತಿಲ್ಲ ಎಂದು ಹೇಳಿದರು.

*ಖರ್ಗೆ ಆಯ್ಕೆ ಬಗ್ಗೆ ಅಸೂಯೆ ಬೇಡ*

ಕನ್ನಡಿಗರಾದ ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಕನ್ನಡಿಗರಾದ ನಮಗೆ ಸಂತೋಷದ ಸಂಗತಿ, ಅಸೂಯೆ ಪಡಬಾರದು. ಆದರೆ ಈ ಮೂಲಕ ಮತ್ತೊಂದು ಪವರ್ ಸೆಂಟರ್ ಆಗುತ್ತದೆ, ಈಗ ಖರ್ಗೆ ಅವರಿಗೆ ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರ ಚಲಾಯಿಸಲು ಬಿಟ್ಟು ಅವರನ್ನು ಹೇಗೆ ನಡೆಸಿಕೊಳ್ಳುತ್ತದೆ ಅನ್ನುವ ಕುತೂಹಲ ಇದೆ ಎಂದರು.

*ನಿಖಿಲ್ ಸ್ಪರ್ಧೆ ಬಗ್ಗೆ:*

ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ಪಕ್ಷದ ಶಾಸಕರ 126 ಸ್ಥಾನ ಗೆಲ್ಲಿಸಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ರಾಜ್ಯಾದ್ಯಂತ ಪ್ರವಾಸ ಮಾಡುತ್ತಾರೆ. ಆದರೆ 126 ರಲ್ಲಿ ನಿಖಿಲ್ ಅವರು ಇರಬಹುದು ಎಂದು ವಿಧಾನಸಭೆ ಚುನಾವಣೆಗೆ ನಿಖಿಲ್ ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಕುಮಾರಸ್ವಾಮಿ ಹೇಳಿದರು.

****

*ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ ಎಂದ ಹೆಚ್ ಡಿಕೆ*

ಮೈಸೂರು: ಜೆಡಿಎಸ್ ಪಕ್ಷ ಬೆಳೆದು ಬದುಕಿರುವುದು ರೈತರು ಹಾಗೂ ದೀನ ದಲಿತರಿಗಾಗಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ‌.ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

ಮೈಸೂರಿನಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಜೆಡಿಎಸ್ ಕಾರ್ಯಗಾರದಲ್ಲಿ ಮಾತನಾಡಿದ ಅವರು, ತಳ ಸಮುದಾಯದರಿಗೂ ರಾಜಕೀಯ ಮೀಸಲಾತಿ ದೊರಕಿಸಿಕೊಟ್ಟಿರುವುದು ದೇವೇಗೌಡರು ಮಾತ್ರ. ಈಗಲೂ ಬಹಳಷ್ಟು ಜನರು ಇದರ ಉಪಯೋಗ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಕಿತ್ತೂರು, ಕಲ್ಯಾಣ ಕರ್ನಾಟಕ ಸೇರಿ ಇಡೀ ಉತ್ತರ ಕರ್ನಾಟಕದಿಂದ ಕನಿಷ್ಠ 35 ಸ್ಥಾನ ಗೆಲ್ಲುತ್ತೇವೆ ಎಂದು ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣಾ ಪ್ರಚಾರಕ್ಕೆ ಸಾಗಲು ವಾಹನ ಸಿದ್ದವಾಗಿದೆಯಾ ಎಂಬುದಾಗಿ ನಮ್ಮ ಕಾರ್ಯಕರ್ತರು ಉತ್ಸಾಹದಿಂದ ಕೇಳುತ್ತಿದ್ದಾರೆ. ಪಕ್ಷವೂ ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಸ್ವತಂತ್ರ ಸರ್ಕಾರ ರಚನೆ ಮಾಡಬೇಕು ಎಂಬುವುದು ಎಲ್ಲರ ಬಯಕೆ, ಅವರ ಕನಸು ನನಸು ಮಾಡಬೇಕು ಎಂಬುದೇ ನಮ್ಮ ಗುರಿ ಎಂದು ಎಚ್ ಡಿ ಕೆ ಅವರು ತಿಳಿಸಿದರು.

20/10/2022

*ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಾತ್ಸಲ್ಯಕ್ಕೆ ಕರಗಿದ ಜಿ.ಟಿ.ದೇವೇಗೌಡ*
*
*ಹೆಚ್.ಡಿ.ದೇವೇಗೌಡರ ಮುಂದೆ ಗಳಗಳನೆ ಕಣ್ಣೀರಿಟ್ಟ ಜಿಟಿಡಿ*
*
*ಯಾವುದೇ ಕಾರಣಕ್ಕೂ ಜೆಡಿಎಸ್ ಬಿಡುವುದಿಲ್ಲ*
*ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಿಎಂ ಮಾಡಲು ದುಡಿಯುತ್ತೇನೆ ಎಂದ ಚಾಮುಂಡೇಶ್ವರಿ ಶಾಸಕ*

***

ಮೈಸೂರು: ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಇಂದು ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮನೆಗೆ ಭೇಟಿ ನೀಡಿದರು.

ಇಲ್ಲಿ ನಡೆಯುತ್ತಿರುವ ಜೆಡಿಎಸ್ ಪಂಚರತ್ನ ರಥಯಾತ್ರೆ ಕಾರ್ಯಗಾರದಲ್ಲಿ ಪಾಲ್ಗೊಂಡ ನಂತರ ನೇರವಾಗಿ ಒಂಟಿಕೊಪ್ಪಲ್ ನಲ್ಲಿರುವ ಜಿ.ಟಿ.ದೇವೇಗೌಡರ ಮನೆಗೆ ಆಗಮಿಸಿದರು ಮಾಜಿ ಪ್ರಧಾನಿಗಳು.

ಮನೆಗೆ ಬಂದ ಮಾಜಿ ಪ್ರಧಾನಿಗಳನ್ನು ಜಿ.ಟಿ.ದೇವೇಗೌಡರು ಕುಟುಂಬ ಸಮೇತರಾಗಿ ಆತ್ಮೀಯವಾಗಿ ಬರ ಮಾಡಿಕೊಂಡರು. ಬಳಿಕ ಕೆಲ ಹೊತ್ತು ಅವರ ಮನೆಯಲ್ಲೇ ಇದ್ದ ಹೆಚ್.ಡಿ.ದೇವೇಗೌಡರು, ಜಿಟಿ ದೇವೇಗೌಡರು, ಮತ್ತವರ ಕುಟುಂಬ ಸದಸ್ಯರ ಜತೆ ಕುಶಲೋಪರಿ ನಡೆಸಿದರು.

ಈ ಸಂದರ್ಭದಲ್ಲಿ ತೀವ್ರ ಭಾವೋದ್ವೇಗಕ್ಕೆ ಒಳಗಾದ ಜಿಟಿ ದೇವೇಗೌಡರು, ಗಳಗಳನೆ ಕಣ್ಣೀರಿಟ್ಟರು.

ಈ ಸಂದರ್ಭದಲ್ಲಿ ಜಿಟಿ ದೇವೇಗೌಡರನ್ನು ಪಕ್ಕದಲ್ಲೇ ಕೂರಿಸಿಕೊಂಡು ಮಾಧ್ಯಮಗಳ ಜತೆ ಮಾತನಾಡಿದರು.

ಜಿ.ಟಿ.ದೇವೇಗೌಡರನ್ನು ಮರಿ ದೇವೇಗೌಡ ಎಂದು ಕರೆಯುತ್ತೇನೆ. ನಾನು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದೇನೆ. ಸಾ.ರಾ.ಮಹೇಶ್ ಬರುವ ಮೊದಲು ಜಿ.ಟಿ‌.ದೇವೇಗೌಡರ ನಮ್ಮ ಜತೆಯಲ್ಲಿ ಇದ್ದರು. ಜಿಟಿಡಿ ಬೆಳೆಯಲು ಬಿಡಬಾರದು ಎಂದು ಎಂಪಿ ಚುನಾವಣೆಯಲ್ಲಿ ಸೋಲಿಸಿದರು. ಹಾಗೆ ಸೋಲಿಗೆ ಕಾರಣರಾದವರು ಈಗ ನಮ್ಮ ಜತೆಯಲ್ಲಿ ಇಲ್ಲ ಎಂದು ಮಾಜಿ ಪ್ರಧಾನಿಗಳು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಚಾಟಿ ಬೀಸಿದರು.

ಜಿಟಿಡಿ ಬೆಳೆಯಲು ಬಿಟ್ಟರೆ ಆಕ್ರಮಣ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿ ಅವರ ಬೆಳವಣಿಗೆಯನ್ನು ತಡೆಯಲು ಪ್ರಯತ್ನ ಮಾಡಿದರು. ಎಲ್ಲವನ್ನೂ ತಿಳಿದುಕೊಂಡೆ ಜಿಟಿಡಿ ಮನೆಗೆ ಬಂದಿದ್ದೇನೆ. ಇವತ್ತು ನನಗೆ ಸಂತೋಷವಾಗಿದೆ. ಒಗ್ಗಟ್ಟಾಗಿ ಇರಬೇಕು. ಸಮಯ ಬಂದಿದೆ, ಎಲ್ಲಾ ಒಗ್ಗಟ್ಟಾಗಿ ಸೇರಿದ್ದೇವೆ, ತುಂಬಾ ಸಂತೋಷದ ವಿಷಯ ಇದು ಎಂದರು ಮಾಜಿ ಪ್ರಧಾನಿಗಳು.

ಪಾರ್ಲಿಮೆಂಟ್ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಎದುರಾಳಿಯನ್ನು ಎದುರಿಸುವ ಶಕ್ತಿ ಇದೆ. ಆ ಶಕ್ತಿಯನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಅವರು ಮಾರ್ಮಿಕವಾಗಿ ಹೇಳಿದರು.

ಬಳಿಕ ಮಾತನಾಡಿದ ಜಿಟಿ ದೇವೇಗೌಡರು; ಹೆಚ್‌.ಡಿ.ದೇವೇಗೌಡರಿಗೆ ನನ್ನ ಬಗ್ಗೆ ಪ್ರೀತಿ ಇದೆ, ಮರಿ ದೇವೇಗೌಡ ಎಂದು ನನ್ನನ್ನು ಕರೆಯುತ್ತಿದ್ದರು. ಜಿಟಿಡಿ ಬಿಟ್ಟು ಹೋಗಲ್ಲ ಜೆಡಿಎಸ್ ಪಕ್ಷದಲ್ಲೆ ಇರುತ್ತಾನೆ ಎಂದು ಹೆಚ್.ಡಿ.ದೇವೇಗೌಡರು ಹೇಳಿದರು. ಅವರಿಗೆ ನನ್ನ ಮೇಲೆ ಇರುವ ವಿಶ್ವಾಸಕ್ಕೆ ಮನಸ್ಸು ತುಂಬಿ ಬಂದಿದೆ ಎಂದರು.

ಹಿಂದೆ ಹಲವು ಸ್ಥಾನಮನವನ್ನು ಮಾಜಿ ಪ್ರಧಾನಿಗಳು ನನಗೆ ನೀಡಿದ್ದರು. ಮೂರು ವರ್ಷ ದೂರ ಇದ್ದರೂ ನನ್ನ ಬಗ್ಗೆ ಅವರಲ್ಲಿನ ಪ್ರೀತಿ ಕಡಿಮೆ ಆಗಿರಲಿಲ್ಲ. ಎಂದೂ ನನ್ನ ಬಗ್ಗೆ ಲಘುವಾಗಿ ಒಂದು ಮಾತನ್ನೂ ಆಡಲಿಲ್ಲ. ಅವರು, ಪ್ರಾದೇಶಿಕ ಪಕ್ಷ ಕಟ್ಟಿ ಉಳಿಸಿ ಬೆಳೆಸಿದರು. ಹೆಚ್.ಡಿ.ದೇವೇಗೌಡರು ಕಂಡ ಕನಸನ್ನು ನನಸು ಮಾಡುತ್ತೇನೆ. ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರುತ್ತೇನೆ ಎಂದು ಮಾತನಾಡುತ್ತಲೇ ಭಾವುಕರಾದ ಜಿಟಿ ದೇವೇಗೌಡರು ಬಿಕ್ಕಿಬಿಕ್ಕಿ ಕಣ್ಣೀರಿಟ್ಟರು.

ದೊಡ್ಡವರು ನನ್ನನ್ನು ಪ್ರೀತಿಯ ಹಗ್ಗದಿಂದ ಕಟ್ಟಿ ಹಾಕಿದ್ದಾರೆ. ನಾನು ಜೆಡಿಎಸ್ ನಲ್ಲಿ ಉಳಿಯುತ್ತೇನೆ. ಯಾವುದೇ ತ್ಯಾಗ ಮಾಡಲು ಸಿದ್ದ ಇದ್ದೇನೆ, ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇನೆ. ಅದಕ್ಕಾಗಿ ದುಡಿಯುತ್ತೇನೆ. ಈಗ ನಮ್ಮಲ್ಲಿ ಯಾವುದೇ ಮುನಿಸು ಇಲ್ಲ, ಒಂದೇ ಒಂದು ದಿನ ಪಕ್ಷಕ್ಕೆ ಕಳಂಕ ಅಥವಾ ಧಕ್ಕೆ ತರುವ ಕೆಲಸ ಮಾಡಿಲ್ಲ ಎಂದರು ಜಿಟಿ ದೇವೇಗೌಡರು

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಸೇರುವಂತೆ ಕರೆದಿದ್ದರು. ಬಿಜೆಪಿಯವರೂ ಕರೆದಿದ್ದಾರೆ. ಆದರೆ ನಾನು ಜೆಡಿಎಸ್ ಬಿಟ್ಟು ಹೋಗಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಸಾ.ರಾ.ಮಹೇಶ್, ಸಿ ಎಸ್ ಪುಟ್ಟರಾಜು ಸೇರಿದಂತೆ ಪಕ್ಷದ ಶಾಸಕರು, ಮುಖಂಡರು ಹಾಜರಿದ್ದರು.

ಜಿಟಿ ದೇವೇಗೌಡರ ಪತ್ನಿ ಲಲಿತಾ ಅವರು, ಅವರ ಪುತ್ರ ಜಿ.ಡಿ. ಹರೀಶ್ ಅವರು ಇದ್ದರು.

07/09/2022

ದೇವೇಗೌಡರೆಂಬ ರಾಜಕೀಯ ಭೀಷ್ಮ...
ಆದರೆ ನೀವು ವೀಡಿಯೋದಲ್ಲಿ ದೇವೇಗೌಡರ ಮುಖಚರ್ಯೆ ಗಮನಿಸಿ ಅದೆಂತಾ ಧೃಡತೆಯಿದೆ ಅವರ ಮಾತಿನಲ್ಲಿ.

https://twitter.com/hd_kumaraswamy/status/1564467834750922752?t=hfGa3a5SUVYFLUTZD7oUsQ&s=08||ಓಂ ಹೇ ಗೌರಿ ಶಂಕರಾರ್ಧಾಂಗಿ ಯಥಾ...
30/08/2022

https://twitter.com/hd_kumaraswamy/status/1564467834750922752?t=hfGa3a5SUVYFLUTZD7oUsQ&s=08

||ಓಂ ಹೇ ಗೌರಿ ಶಂಕರಾರ್ಧಾಂಗಿ ಯಥಾ ತ್ವಂ ಶಂಕರಪ್ರಿಯೇ||
ತಥಾ ಮಾಂ ಕುರು ಕಲ್ಯಾಣಿ ಕಾಂತಕಾಂತಂ ಸುದುರ್ಲಭಾಂ||

ನಾಡಿನ ಸಮಸ್ತ ಜನತೆಗೆ ಗೌರಿಹಬ್ಬದ ಶುಭಾಶಯಗಳು. ಆ ತಾಯಿ ಗೌರಿ ಸರ್ವರ ದುಃಖದುಮ್ಮಾನಗಳನ್ನು ನಿವಾರಿಸಿ ಸಿರಿಸಂಪತ್ತು, ಆಯುರಾರೋಗ್ಯ, ಸುಖಶಾಂತಿ ದಯಪಾಲಿಸಲಿ ಎಂದು ಬೇಡಿಕೊಳ್ಳುತ್ತೇನೆ.
#ಗೌರಿಹಬ್ಬ

Like n Share

30/08/2022

👆ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ಚನ್ನಪಟ್ಟಣದಲ್ಲಿ ಮಳೆ ಸಂತ್ರಸ್ತರ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲನವರ ಸಮಸ್ಯೆಗಳನ್ನು ಆಲಿಸಿದರು.

Like n Share

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶನಿನ್ನೆ ಬಂದಿದ್ದರೆ ಹೆದ್ದಾರಿಯಲ್ಲೇ ಸ್ವಿಮ್ಮಿಂಗ್‌ ಮಾಡಬಹುದಿತ್ತು ಎಂದು ಕುಟುಕಿ...
30/08/2022

ಸಂಸದ ಪ್ರತಾಪ್ ಸಿಂಹ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ನಿನ್ನೆ ಬಂದಿದ್ದರೆ ಹೆದ್ದಾರಿಯಲ್ಲೇ ಸ್ವಿಮ್ಮಿಂಗ್‌ ಮಾಡಬಹುದಿತ್ತು ಎಂದು ಕುಟುಕಿದ ಮಾಜಿ ಸಿಎಂ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿ ಅತ್ಯುತ್ತಮವಾಗಿದೆ ಎಂದು ಹೇಳಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕಾರು ಚಲಿಸುವಾಗ ಆಲದ ಮರ ಉಳುಳಿಬಿದ್ದು ಸಾವನ್ನಪ್ಪಿದ್ದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಬೆಳಗ್ಗೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂಚತ್ವನ ಹೇಳಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು ಎಂದು ಮಾಜಿ ಮುಖ್ಯಮಂತ್ರಿಗಳು ಹರಿಹಾಯ್ದರು.

ನಿನ್ನೆ ಅವರೇ ಅವರೇ ಸಂಗಬಸಪ್ಪನದೊಡ್ಡಿ ಹೈವೆಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.

ಕೆರೆ ಒಡೆದಿದ್ದರಿಂದ ಈ ರೀತಿ ಪ್ರವಾಹ ಆಗಿದೆ ಎಂದು ಅವರು ಹೇಳಿದ್ದಾರೆ. ಒಬ್ಬ ಜವಾಬ್ದಾರಿಯುತ ವ್ಯಕ್ತಿ ಹೀಗೆ ಮಾತನಾಡುವುದಲ್ಲ. ಶಾಶ್ವತವಾದ ಕೆಲಸ ಆಗಬೇಕು. ಸರ್ಟಿಫಿಕೇಟ್ ಕೊಡೋದಕ್ಕಲ್ಲ ಇವರು ಇರುವುದು. ಕಾಮಗಾರಿ ತಪ್ಪಾಗಿದ್ದರೆ ಸರಿಪಡಿಸಬೇಕು. ಪ್ರತಾಪ್ ಸಿಂಹ ಬರೀ ಪ್ರಚಾರ ತೆಗೆದುಕೊಳ್ಳೋದು ನಿಲ್ಲಿಸಲಿ. ಮೊದಲು ಜನರ ಕೆಲಸ ಮಾಡಲಿ ಎಂದು ಅವರು ಟಾಂಗ್ ಕೊಟ್ಟರು.

ಮಾಗಡಿ ಶಾಸಕ ಮಂಜುನಾಥ್ ಅವರು, ಮತ್ತಿತರರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.

Like n Share

*ಕಾರಿನ ಮೇಲೆ ಆಲದಮರ ಬಿದ್ದು ಅಸುನೀಗಿದ ಬೋರೇಗೌಡರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಹೆಚ್.ಡಿ.ಕುಮಾರಸ್ವಾಮಿ**** ರಾಮನಗರ: ಚಲಿಸುತ್ತಿದ್ದ ಕಾ...
30/08/2022

*ಕಾರಿನ ಮೇಲೆ ಆಲದಮರ ಬಿದ್ದು ಅಸುನೀಗಿದ ಬೋರೇಗೌಡರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಹೆಚ್.ಡಿ.ಕುಮಾರಸ್ವಾಮಿ*

***
ರಾಮನಗರ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ಬೆಳಗ್ಗೆಯೇ ಮಾಗಡಿ ಶಾಸಕ ಮಂಜುನಾಥ್‌ ಅವರೊಂದಿಗೆ ಬೋರೇಗೌಡರ ನಿವಾಸಕ್ಕೆ ಧಾವಿಸಿದ ಮಾಜಿ ಮುಖ್ಯಮಂತ್ರಿಗಳು; ಕುಟುಂಬ ಸದಸ್ಯರಿಗೆ ಧೈರ್ಯ ತುಂಬಿದರಲ್ಲದೆ, ಅವರಿಗೆ 5 ಲಕ್ಷ ರೂಪಾಯಿಯ ನೆರವಿನ ಚೆಕ್‌ ಹಸ್ತಾಂತರ ಮಾಡಿದರು.

ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮನೆಯವರಿಗೆ ಧೈರ್ಯ ತುಂಬಿದ ಅವರು, ಕುಟುಂಬದ ಸ್ಥಿತಿಗತಿಗಳನ್ನು ಕೇಳಿ ತಿಳಿದುಕೊಂಡರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ನಿನ್ನೆಯ ದಿನ ಅವಘಡದಲ್ಲಿ ಬೋರೆಗೌಡರು ನಿಧನ ಹೊಂದಿದ್ದರು. ಅವರದ್ದು ಕಷ್ಟಪಟ್ಟು ಜೀವನ ಮಾಡುತ್ತಿರುವ ಕುಟುಂಬ. ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಮ್ಮ ಒಡನಾಟದಲ್ಲಿ ಬೋರೇಗೌಡರು ಇದ್ದರು. ನಮ್ಮ ಜತೆಗೂಡಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.

Like n Share

29/08/2022

ಮುರುಘಾ ಶರಣರ ಪ್ರಕರಣದ ಬಗ್ಗೆ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಹೆಚ್.‌ಡಿ.ಕುಮಾರಸ್ವಾಮಿ ಅವರ ಪ್ರತಿಕ್ರಿಯೆ.


Like n Share

https://twitter.com/hd_kumaraswamy/status/1564110830974615552?t=44FvrCgVavANcoS3ROUUmg&s=19ಸಾರ್ವಜನಿಕರಲ್ಲಿ ನನ್ನ ವಿನಂತಿ;ವಿ...
29/08/2022

https://twitter.com/hd_kumaraswamy/status/1564110830974615552?t=44FvrCgVavANcoS3ROUUmg&s=19

ಸಾರ್ವಜನಿಕರಲ್ಲಿ ನನ್ನ ವಿನಂತಿ;

ವಿಪರೀತ ಮಳೆಯಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪ್ರವಾಹಸದೃಶ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ಜನರು ಇಂದು ಈ ಹೆದ್ದಾರಿಗೆ ಬರದೇ ಇರುವುದು ಒಳಿತು. ಅನಿವಾರ್ಯವಾಗಿ ಸಂಚರಿಸಲೇಬೇಕಾದರೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಿ. 1/2

https://twitter.com/hd_kumaraswamy/status/1564110833386303489?t=SDint0DEzOSBZvHmP0c0YQ&s=19

ಬೆಂಗಳೂರು-ಬೆಂಗಳೂರು ಹೆದ್ದಾರಿಯ ವಿವಿಧ ಭಾಗಗಳಲ್ಲಿ ಮಳೆನೀರು ತುಂಬಿದೆ. ಅನೇಕ ಕಡೆ ಹೆದ್ದಾರಿ ಜಲಾವೃತವಾಗಿದೆ. ಅಲ್ಲಲ್ಲಿ ವಾಹನಗಳು ನೀರಿನಲ್ಲಿ ಸಿಲುಕಿವೆ. ಹೀಗಾಗಿ ವಾಹನ ಸಂಚಾರ ಮಾಡುವುದು ಅಪಾಯಕಾರಿ. 2/2

Like n Share

29/08/2022

*ಹೆಚ್‌ ಡಿ ಕುಮಾರಸ್ವಾಮಿ ಬ್ರೇಕಿಂಗ್*‌

ರಾಮನಗರ ಮತ್ತು ಚನ್ನಪಟ್ಟಣ ಮಳೆ ಅವಾಂತರ
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವರ ಜತೆ ಹೆಚ್‌ ಡಿಕೆ ಚರ್ಚೆ*
*ಹೆಚ್‌ಡಿಕೆ ಅವರ ಜತೆ ಚರ್ಚೆ ನಂತರ ರಾಮನಗರ ಜಿಲ್ಲೆ ಭೇಟಿಗೆ ಹೊರಟ ಮುಖ್ಯಮಂತ್ರಿ*
*ನೀವು ರಾಮನಗರದಲ್ಲೇ ಇರಿ, ನಾನು ಅಲ್ಲಿಗೆ ಬರುತ್ತೇನೆ ಎಂದು ಹೆಚ್‌ ಡಿಕೆಗೆ ತಿಳಿಸಿದ ಸಿಎಂ*
ಇನ್ನು ಕೆಲಹೊತ್ತಿನಲ್ಲೇ ರಾಮನಗರಕ್ಕೆ ಹೆಲಿಕಾಪ್ಟರ್‌ʼನಲ್ಲಿ ಹೊರಡಲಿರುವ ಬೊಮ್ಮಾಯಿ
*ಸಿಎಂಗಾಗಿ ರಾಮನಗರದಲ್ಲಿಯೇ ಕಾದಿರುವ ಕುಮಾರಸ್ವಾಮಿ*
ಬೆಳಗ್ಗೆಯಿಂದಲೇ ರಾಮನಗರ, ಚನ್ನಪಟ್ಟಣದಲ್ಲಿ ಹೆಚ್‌ ಡಿಕೆ ಸಂಚಾರ.

Like n Share

Address

JP Bhavan, 19/1, Platform Road, Seshadripuram
Bangalore
560020

Telephone

+918023564858

Alerts

Be the first to know and let us send you an email when Jdsnewz posts news and promotions. Your email address will not be used for any other purpose, and you can unsubscribe at any time.

Contact The Business

Send a message to Jdsnewz:

Share