05/09/2026
ಕನ್ನಡ ಸಿನಿಮಾದಲ್ಲಿ ನಟಿಸಿದ್ದ ವ್ಯಕ್ತಿ ಈಗ ಕರ್ನಾಟಕ ಹೈಕೋರ್ಟ್ ಜಡ್ಜ್..!
ಚಿತ್ರರಂಗದಿಂದ ನ್ಯಾಯಾಂಗ ಕ್ಷೇತ್ರದವರೆಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಅಪರೂಪದ ಪಯಣ
ಒಂದು ಕಾಲದಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ನಟಿಸಿದ್ದ ವ್ಯಕ್ತಿಯೊಬ್ಬರು ಇಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂಬುದು ಅನೇಕರಿಗೆ ಅಚ್ಚರಿ ಮೂಡಿಸಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಹೂಮಳೆ’ ಸಿನಿಮಾದಲ್ಲಿ ನಟಿಸಿದ್ದರು ಎನ್ನಲಾಗಿದ್ದು, ಇದೀಗ ಅವರ ಸಿನಿಮಾದಲ್ಲಿನ ಹಳೆಯ ಕ್ಲಿಪ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ಇತ್ತೀಚೆಗೆ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಒಂದೇ ದಿನ 550ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಸಿದ ಹಿನ್ನೆಲೆಯಲ್ಲಿ ಸುದ್ದಿಯಾಗಿದ್ದರು. ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥದ ನಿಟ್ಟಿನಲ್ಲಿ ಅವರ ಕಾರ್ಯವೈಖರಿ ಗಮನ ಸೆಳೆದಿದೆ.
ನ್ಯಾಯಾಂಗ ಕ್ಷೇತ್ರದಲ್ಲಿ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಅವರ ಹಳೆಯ ಸಿನಿಮಾ ಬದುಕಿನ ವಿಚಾರ ಇದೀಗ ಮತ್ತೊಮ್ಮೆ ಚರ್ಚೆಗೆ ಬಂದಿದೆ.
ಹೀರೋ ಆಗುವ ಅವಕಾಶವಿದ್ದ ವ್ಯಕ್ತಿ ಇಂದು ಹೈಕೋರ್ಟ್ ಜಡ್ಜ್..!
ನ್ಯಾಯಮೂರ್ತಿ ನಾಗಪ್ರಸನ್ನ ಅವರ ಅಪರೂಪದ ಪಯಣಕ್ಕೆ ನೆಟ್ಟಿಗರ ಮೆಚ್ಚುಗೆ..!