VartaGuru

VartaGuru ವಿಶ್ವಗುರು ಅಲ್ಲ ವಿಶ್ವಮಾನವ
☎ 7760194015

08/09/2026

#ದೊಡ್ಡಬಳ್ಳಾಪುರ
ಗೌರಿ ಗಣೇಶ ಹಬ್ಬವನ್ನ ಸಂಭ್ರಮದಿಂದ ಶಾಂತ ರೀತಿಯಲ್ಲಿ ಆಚರಿಸೋಣ,
ಸಂಭ್ರಮ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡದಂತಿರಲಿ,
ತಹಶೀಲ್ದಾರ್ ಡಾ.ಮಲ್ಲಪ್ಪ.ಕೆ.ಯರಗೋಳರವರಿಂದ ಯುವಕರಿಗೆ ಕಿವಿಮಾತು

08/09/2026

#ದೊಡ್ಡಬಳ್ಳಾಪುರ
ಗೌರಿ ಗಣೇಶ ಹಬ್ಬದ ಆಚರಣೆಯಲ್ಲಿ ದೊಡ್ಡಬಳ್ಳಾಪುರ ಪೊಲೀಸರಿಂದ ಕಟ್ಟು ನಿಟ್ಟಿನ ಷರತ್ತುಗಳು.

ಡಿ.ಜೆಗೆ ಇಲ್ಲ ಅವಕಾಶ, 5 ದಿನಗಳಿಗೆ ಹೆಚ್ಚು ದಿನ ಆಚರಿಸುವಂತಿಲ್ಲ, 4 ಅಡಿ ಎತ್ತರ ಮೀರದಂತೆ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಮಾಡಬೇಕು.

 #ದೊಡ್ಡಬಳ್ಳಾಪುರಆತ್ರೇಯ ಆರ್ಯುವೇದ ಕಾಲೇಜ್ ಗೆ ಬೀಗ,400 ವಿದ್ಯಾರ್ಥಿಗಳ ವೈದ್ಯರಾಗುವ ಕನಸ್ಸಿಗೆ ಭಂಗದೊಡ್ಡಬಳ್ಳಾಪುರ :  ತಾಲೂಕಿನ ಕೋಡಿಗೆಹಳ್ಳ...
08/09/2026

#ದೊಡ್ಡಬಳ್ಳಾಪುರ
ಆತ್ರೇಯ ಆರ್ಯುವೇದ ಕಾಲೇಜ್ ಗೆ ಬೀಗ,
400 ವಿದ್ಯಾರ್ಥಿಗಳ ವೈದ್ಯರಾಗುವ ಕನಸ್ಸಿಗೆ ಭಂಗ

ದೊಡ್ಡಬಳ್ಳಾಪುರ : ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆರ್ಯುವೇದ ಕಾಲೇಜ್ ಆಡಳಿತ ಮಂಡಳಿ ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನಲೆ ಕಾಲೇಜ್ ಬಂದ್ ಮಾಡಲಾಗಿದೆ, ಕಳೆದ ಎರಡು ತಿಂಗಳಿಂದ ಕಾಲೇಜ್ ನಲ್ಲಿ ತರಗತಿಗಳು ಮತ್ತು ಪರೀಕ್ಷೆ ನಡೆಯದ ಹಿನ್ನಲೆ 400 ವಿದ್ಯಾರ್ಥಿಗಳು ವೈದ್ಯರಾಗುವ ಆಸೆ ಕಮರುವಂತಾಗಿದೆ.

ಆತ್ರೇಯ ಆರ್ಯುವೇದ ಕಾಲೇಜ್ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ವ್ಯಾಸಂಗಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು, ಪೋಷಕರು ಮತ್ತು ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನಾ ಮೆರಣಿಗೆಯನ್ನ ನಡೆಸಿದರು.

ನಗರದ ಸೋಮೇಶ್ವರ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅವರು ಅನಂತರ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನ ನಡೆಸಿದರು.

ಇದೇ ವೇಳೆ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಚಂದ್ರಶೇಖರ್, ಆತ್ರೇಯ ಆರ್ಯುವೇದ ಕಾಲೇಜ್ ಗೆ ಬೀಗ ಹಾಕಿ ಎರಡು ತಿಂಗಳಾಗಿದೆ, ಲಕ್ಷಾಂತರ ರೂಪಾಯಿ ಫೀಸು ಕಟ್ಟಿದ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಯಾರು ತಲೆಕೆಡಿಸಿಕೊಂಡಿಲ್ಲ, ಒಂದು ತಿಂಗಳ ಹಿಂದೆಯೇ ನಾವು ಸಂಬಂಧಪಟ್ಟ ಕೇಂದ್ರ ಮತ್ತು ರಾಜ್ಯ ಆಯುಷ್ ಇಲಾಖೆಗೆ ದೂರು ನೀಡಲಾಗಿದೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ಮಹಾವಿದ್ಯಾಲಯದ ಕುಲಪತಿ ಮತ್ತು ಜಿಲ್ಲಾಧಿಕಾರಿಗಳಿಗೂ ಮನವಿ ಮಾಡಲಾಗಿದೆ ಇಲ್ಲಿವರೆಗೂ ಯಾರಿಂದಲೂ ಸ್ಪಂದನೆ ಸಿಗದ ಹಿನ್ನಲೆ ಇಂದು ನಾವು ಪ್ರತಿಭಟನಾ ಮೆರಣಿಗೆಯನ್ನ ಮಾಡುತ್ತಿದ್ದೇವೆ.

ವೈದ್ಯರಾಗುವ ಕನಸ್ಸು ಕಂಡಿದ್ದ 400 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ ಅವರ ವ್ಯಾಸಂಗಕ್ಕೆ ಬದಲಿ ವ್ಯವಸ್ಥೆ ಮಾಡಬೇಕು, ಬೇರೆ ಆಡಳಿತ ಮಂಡಳಿಗೆ ಜವಾಬ್ದಾರಿ ನೀಡಿ ವಿದ್ಯಾರ್ಥಿಗಳ ಹಿತ ಕಾಯಬೇಕೆಂದು ಒತ್ತಾಯಿಸಿದರು.

 #ಬೆಂಗಳೂರುಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.ಬೆಂಗಳೂರು :  ಇಂದು ಬೆಳಗ್ಗೆ ಯಶವಂತಪುರದ ಎಪಿಎಂಸಿ ...
08/09/2026

#ಬೆಂಗಳೂರು
ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.

ಬೆಂಗಳೂರು : ಇಂದು ಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಮುಖ್ಯಮಂತ್ರಿ ರೈತರು ವ್ಯಾಪಾರಿಗಳು ಮತ್ತು ಕೂಲಿ ಕಾರ್ಮಿಕರ ಜೊತೆ ಮಾತುಕಥೆ ನಡೆಸಿದರು.

ಈ ವೇಳೆ ಮಾರುಕಟ್ಟೆಗೆ ಯಾವ್ಯಾವ ರಾಜ್ಯಗಳಿಂದ ಪದಾರ್ಥಗಳನ್ನು ಆಮದು ಮಾಡಿಕೊಳ್ಳಲಾಗುತ್ತದೆ, ಅವುಗಳ ದರ ಸೇರಿದಂತೆ ಹಲವು ವಿಷಯಗಳ ಕುರಿತು ವ್ಯಾಪಾರಸ್ಥರಿಂದ ಮಾಹಿತಿ ಪಡೆದುಕೊಳ್ಳಲಾಯಿತು. ಬಳಿಕ ರೈತರು ಹಾಗೂ ವ್ಯಾಪಾರಸ್ಥರ ಹಿತಾಸಕ್ತಿಗೆ ಸರ್ಕಾರ ಸದಾ ಬದ್ಧವಾಗಿದ್ದು, ಅವರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದ್ದಾಗಿ ಭರವಸೆ ನೀಡಿದರು.

 #ಬೆಂಗಳೂರುಎಸ್ .ಸಿ .ಎಸ್. ಪಿ /ಟಿ.ಎಸ್ ಪಿ .ಅಡಿ ವಿವಿಧ ಇಲಾಖೆಗಳಿಗೆ ಒದಗಿಸುವ ಅನುದಾನ ಕುರಿತು ಪರಿಶೀಲನೆ ಸಭೆ ಅನುದಾನವು ಇಲಾಖೆಗಳಲ್ಲಿ  ಪರಿ...
07/09/2026

#ಬೆಂಗಳೂರು
ಎಸ್ .ಸಿ .ಎಸ್. ಪಿ /ಟಿ.ಎಸ್ ಪಿ .ಅಡಿ ವಿವಿಧ ಇಲಾಖೆಗಳಿಗೆ ಒದಗಿಸುವ ಅನುದಾನ ಕುರಿತು ಪರಿಶೀಲನೆ ಸಭೆ

ಅನುದಾನವು ಇಲಾಖೆಗಳಲ್ಲಿ ಪರಿಣಾಮಾಕಾರಿಯಾಗಿ ಸದ್ಬಳಕೆಯಾಗಬೇಕು
- ಸಮಾಜ ಕಲ್ಯಾಣ ಸಚಿವ ಕೆ.ಹೆಚ್. ಮುನಿಯಪ್ಪ

ಬೆಂಗಳೂರು :2026-27 ನೇ ಸಾಲಿನಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳಿಗೆ ಎಸ್ ಸಿಎಸ್ ಪಿ /ಟಿಎಸ್ ಪಿ ರಡಿ ಒದಗಿಸಿದ ಅನುದಾನಕ್ಕೆ ತಯಾರಿಸಲಾದ ಕ್ರಿಯಾ ಯೋಜನೆಯನ್ನು ಪರಿಶೀಲಿಸಿ ರಾಜ್ಯ ಅಭಿವೃದ್ಧಿ ಪರಿಷತ್‌ಗೆ ಶಿಫಾರಸ್ಸು ಮಾಡುವ ಬಗ್ಗೆ ಮಾನ್ಯ ಸಮಾಜ ಕಾಲ್ಯಾಣ ಸಚಿವರಾದ ಕೆಹೆಚ್. ಮುನಿಯಪ್ಪ ರವರ ನೇತೃತ್ವದಲ್ಲಿ ನೋಡಲ್ ಏಜೆನ್ಸಿ ಸಭೆಯನ್ನು ನಡೆಸಿದರು.

ಇಂದು ಒಟ್ಟು 17ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು
ವಸತಿ ಶಾಲೆಗಳ ನಿರ್ಮಾಣ ,ಗುಣಮಟ್ಟದ ಆಹಾರ ವಿತರಣೆ ವಸತಿ ಶಾಲೆಗಳ ಸ್ವಚ್ಚತೆ ಹಾಗೂ ಮೂಲಭೂತ ಸೌಕರ್ಯಗಳನ್ನು ಕಟ್ಟು‌ನಿಟ್ಟಾಗಿ ಪಾಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆ ವತಿಯಿಂದ ನಿರ್ಮಾಣ ವಾಗಬೇಕುರುವ ಕಟ್ಟಡಗಳು ವಿಳಂಬಮಾಡುತ್ತಿರುವುದು ಯಾಕೆ ಅದು ನಿಗದಿ ನಿಗದಿಪಡಿಸಿರುವ ಸಮಯಕ್ಕೆ ನಿರ್ಮಾಣ ಮಾಡಬೇಕು ಯಾವುದೇ ಕಾರಣಕ್ಕೂ ವಿಲಂಬವಾಗಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು

ಲೋಕೋಪಯೋಗಿ ಇಲಾಖೆಯಲ್ಲಿ ನಿರ್ಮಾಣ ವಾಗುತ್ತಿರುವ ಕಟ್ಟಡಗಳು ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಒಂದು ವರ್ಷದಲ್ಲಿ ಮುಗಿಯುವ ಹಾಗೆ ನೊಡಿಕೊಳ್ಳಬೇಕು ಯಾವುದೇ ಕಾರಣಕ್ಕೆ ವಿಲಂಭವನ್ನು ಸಹಿಸುವುದಿಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯಡಿ ಗ್ರಾಮಗಳ ರಸ್ತೆಗಳಿಗೆ ಸರಿಯಾದ ರೀತಿಯಲ್ಲಿ ನೀಲ ನಕ್ಷೆಯನ್ನು ಸಿದ್ದಪಡಿಸಿ ಇನ್ನೂ ಉತಗತರ ಕರ್ನಾಟಕದ ಭಾಗದಲ್ಲಿ ಸರಿಯಾದ ಕಾಲೋನಿಗಳಲ್ಲಿ ರಸ್ತೆ ಗಳು ಮಾಡಿಲ್ಲಾ ಅದು ಸರಿಯಾದ ರೀತಿಯಲ್ಲಿ ಮಾಡಬೇಕು

ಕೃಷಿ ಇಲಾಖೆಯಲ್ಲಿ ರೈತರಿಗೆ ಭೂಮಿಯ ಉಳಿಮೆಗಾಗಿ ಟ್ಯ್ರಾಕಟರ್ ನೀಡುತ್ತಿದ್ದು ರೈತರ ಜಮೀನಿಗಳಿಗೆ ಉಳಿಮೆ ಮಾಡಿಕೊಳ್ಳಲು ಸಹಕಾರಿಯಾಗಲಿದೆ ಬೇಸಾಯದ ಅವಶ್ಯಕತೆ ಗಾಗಿ ಬೇಕಾದ ಸಲಕರಣೆಗಳನ್ನು ವಿತರಿಸಲು ಹಣಕಾಸು ಒದಗಿಸಿದ್ದು ಅದು ಪರಿಣಾಮಕಾರಿಯಾಗಿ ಸದ್ಬಳಕೆಯಾಗಬೇಕು ಎಂದರು
ರೈತರಿಗೆ ಅನುಕೂಲವಾಗುವ ಯೋಜನೆಗಳಿಗೆ ಹಣಕಾಸು ಬಳಕೆಯಾಗಬೇಕು

ಕೌಶಲ್ಯಾಭಿವೃದ್ದಿ ಇಲಾಖೆಯಡಿ ನಿರುದ್ಯೋಗ ಯುವಕರಿಗೆ ಸೂಕ್ತ ತರಬೇತಿ ನೀಡಿದಾಗ ಅವರು ತಮ್ಮ ತಮ್ಮ ಬದುಕಿಗಾಗಿ ಉದ್ಯೋಗ ಪಡೆಯಲು ಸಹಕಾರಿಯಾಗುತ್ತದೆ ಇದರಲ್ಲಿ ಬಹು ಮುಖ್ಯವಾಗಿ ತರಬೇತಿ ಯೊಂದಿಗೆ ಉದ್ಯೋಗ ಪಡೆಯುವ ಕೆಲಸ ಆಗಬೇಕು
ಪಾಕಸ್ಕಾನ್ ಅಂತಹ ಸಂಸ್ಥೆ ಯಲ್ಲಿ ತರಬೇತಿಯ ಪಡೆದವರನ್ನು ಕಲುಹಿಸಿದಾಗ ಉದ್ಯೋಗ ಪಡೆಯಲು ಸಹಕಾರಿಯಾಗಲಿದ್ದು ಇದನ್ನು ಮಾಡಬೇಕು

ವಸತಿ ಇಲಾಖೆಯ ಅಂಬೇಡ್ಕರ್ ನಿವಾಸ್ ಯೋಜನೆಯಡಿ ವಸತಿ ರಹಿತ ಬಡವರಿಗೆ ಸೂರು ಕಲ್ಪಿಸುವುದರೊಂದಿಗೆ ಜನರಿಗೆ ಸಹಾಕಾರಿಯಾಗಲಿದ್ದು ಅರ್ಹರಿಗೆ ಈ ಸೌಲಭ್ಯ ದೊರೆಯುವಂತೆ ಮಾಡಬೇಕು

ರಾಜ್ಯದಲ್ಲಿ ಬಹಲು ಮುಕ್ತ ಶೌಚಾಲಯ ನಿರ್ಮಾಣ ಮಾಡಬೇಕು ಜಿಲ್ಲಾ ಬಸ್ ನಿಲ್ದಾಣ ತಾಲ್ಲೂಕು ಬಸ್ ನಿಲ್ದಾಣಗಳಲ್ಲಿ ನಿರ್ವಹಣೆ ಮಾಡುವ ಹಾಗೆ ಹಳ್ಳಿಗಳಲ್ಲಿ ಕಮ್ಯೂನಿಕೇಟ್ ಹಾಗುವ ಹಾಗೆ ಶೌಚಾಲಯ ನಿರ್ಮಾಣ ಮಾಡಿದಾಗ ಬಯಲು ಮುಕ್ತ ಶೌಚಾಲಯ ವಾಗಲಿದೆ ಇದರ ಬಗ್ಗೆ ಗಮನವಹಿಸಲು ಅಧಿಕಾರಿಗಳಿಗೆ ಸೂಚಿಸಿದರು

ಸಭೆಯಲ್ಲಿ ಲೋಕೋಪ ಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೋಳಿ , ಕೃಷಿ ಸಚಿವರಾದ ನರೇಂದ್ರ ಸ್ವಾಮಿ, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕಾರ್ಯದರ್ಶಿ ಅಂಜುಮ್ ಪರ್ವೇಜ್, ಸರ್ಕಾರದ ಕಾರ್ಯದರ್ಶಿ ಮೋಹನ್ ರಾಜ್ ,ಆಯುಕ್ತರಾದ ರಾಕೇಶ್ ಕುಮಾರ್, ಆರ್ಥಿಕ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ಇಲಾಖೆಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು

ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ.-ಸಿಎಂ ಡಿ.ಕೆ.ಶಿವಕುಮಾರ್ದೇವನಹಳ್ಳಿ :  ದೇವ...
07/09/2026

ನೈಸ್ ಯೋಜನೆ ಕುರಿತಂತೆ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ.
-ಸಿಎಂ ಡಿ.ಕೆ.ಶಿವಕುಮಾರ್

ದೇವನಹಳ್ಳಿ : ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂದು ಬಹಿರಂಗ ಪತ್ರ ಬರೆದಿರುವ ಬಗ್ಗೆ ಗಮನ ಸೆಳೆದಾಗ, "ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್ ಇದೆ, ಹೋರಾಟ ಮಾಡಲಿ" ಎಂದು ತೀಕ್ಷ್ಣವಾಗಿ ಹೇಳಿದರು.

ಆಸ್ತಿ ಕಳೆದುಕೊಂಡ ರೈತರ ರಕ್ಷಣೆ ಸರ್ಕಾರದ ಜವಾಬ್ದಾರಿ:

"ರೈತರು ಆಸ್ತಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ. ಹಿಂದಿನ ಸರ್ಕಾರಗಳು ಒಪ್ಪಂದಗಳಿಗೆ ಸಹಿ ಮಾಡಿ ಕೊಟ್ಟಿವೆ. ರೈತರು ಆಸ್ತಿ ಕಳೆದುಕೊಂಡಿದ್ದಾರೆ, ಅವರನ್ನು ರಕ್ಷಣೆ ಮಾಡಬೇಕು. ನನಗೂ ಪ್ರಜ್ಞೆ ಇದೆ. ಮನುಷ್ಯ ವಿದ್ಯಾವಂತನಾಗಿರದಿದ್ದರೂ ಬುದ್ಧಿವಂತನಾಗಿರಬೇಕು, ಸಾಮಾನ್ಯ ಪ್ರಜ್ಞೆ ಇರಬೇಕು” ಎಂದು ತಿರುಗೇಟು ನೀಡಿದರು.

ಇನ್ನಷ್ಟು ತಾಲ್ಲೂಕುಗಳಲ್ಲಿ ಬರ ಘೋಷಣೆ: ವೈಜ್ಞಾನಿಕ ವರದಿ ಆಧರಿಸಿ ಕ್ರಮ

ಬರ ವೀಕ್ಷಣೆಯ ಬಗ್ಗೆ ಕೇಳಿದಾಗ, "ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದ್ದು, ಬರ ಘೋಷಣೆ ವಿಚಾರದಲ್ಲಿ ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳನ್ನು ಆಧರಿಸಿ 2–3 ಹಂತಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಹಾಗೂ ಇನ್ನೂ ಹಲವು ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು" ಎಂದು ಹೇಳಿದರು.

"ಹಲವು ತಾಲ್ಲೂಕಿನಿಂದ ಬರದ ವರದಿಗಳು ಬರುತ್ತಿವೆ. ಇನ್ನೂ ಬಹಳ ತಾಲೂಕುಗಳು ಘೋಷಣೆಯಾಗುತ್ತವೆ. ಬಹಳ ಕಡೆ ಭೀಕರ ಬರ ಇದೆ. 21 ದಿನ ಮಳೆಯಾಗದ ಸ್ಥಳಗಳನ್ನು ಗುರುತಿಸಿ ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಮಾಡಲಾಗುವುದು” ಎಂದರು.

ಶಾಸಕರು ಆತಂಕ ಪಡಬೇಡಿ: ಸಿಎಂ ಅಭಯ

“ಶಾಸಕರು ಯಾರೂ ಆತಂಕ ಪಡಬೇಡಿ. ಎಲ್ಲೆಲ್ಲಿ ಬರ ಇದೆ ಎಂಬುದನ್ನು ವೈಜ್ಞಾನಿಕವಾಗಿ ನಿರ್ಧರಿಸಬೇಕು. ಉಪಮುಖ್ಯಮಂತ್ರಿ ವರದಿಗಳನ್ನು ತರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ್ದೇವೆ. ಒಂದೇ ಸಲ ಎಲ್ಲವನ್ನೂ ಮಾಡಲು ಆಗುವುದಿಲ್ಲ. ಹಂತಗಳಲ್ಲಿ ಪ್ರಕ್ರಿಯೆ ನಡೆಯುತ್ತಿದೆ” ಎಂದು ಹೇಳಿದರು.

ರೈತರ ಸಮಸ್ಯೆಗೆ ವಿಶೇಷ ಅಧಿವೇಶನ

"ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆದಿರುವುದಾಗಿ. ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ" ಎಂದರು.

07/09/2026

#ದೇವನಹಳ್ಳಿ
ಬೆಂಗಳೂರು ವಿದೇಶಿ ಉದ್ಯಮಿಗಳ ನೆಚ್ಚಿನ ಆಯ್ಕೆ
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ

"ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾಗ ಅಮೆರಿಕ ರಾಯಭಾರಿಯವರು ಹೇಳಿದಂತೆ, ಅಮೆರಿಕಾದ 9/11 ರ ದುರಂತದ ನಂತರ, ಸುರಕ್ಷಿತ ಸ್ಥಳಕ್ಕಾಗಿ ಅಮೆರಿಕವು ದೆಹಲಿ, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಗರಗಳ ಸಮೀಕ್ಷೆ ನಡೆಸಿತ್ತು. ಚೆನ್ನೈನ ಹವಾಮಾನ, ಮುಂಬೈ-ಪುಣೆಗಳ ಜನದಟ್ಟಣೆ ಹಾಗೂ ಹೈದರಾಬಾದ್‌ನ ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ, ಕೇವಲ ಜ್ಞಾನ, ಸಂಸ್ಕೃತಿ ಮತ್ತು ಪ್ರತಿಭೆ ಹೆಚ್ಚಿರುವ ಬೆಂಗಳೂರನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು" ಎಂದರು.

 #ದೇವನಹಳ್ಳಿಯಾವುದೇ ಮಗು ಹಸಿವಿನಿಂದ ಶಾಲೆಗೆ ಹೊಗಬಾರದು  -ಸಚಿವ ಕೆಹೆಚ್. ಮುನಿಯಪ್ಪ ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...
07/09/2026

#ದೇವನಹಳ್ಳಿ
ಯಾವುದೇ ಮಗು ಹಸಿವಿನಿಂದ ಶಾಲೆಗೆ ಹೊಗಬಾರದು
-ಸಚಿವ ಕೆಹೆಚ್. ಮುನಿಯಪ್ಪ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಬಾಲಕರ ಶಾಲೆಯಲ್ಲಿ, ವೋಲ್ವೋ ಗ್ರೂಪ್ CSR ಟ್ರಸ್ಟ್ ಇಂಡಿಯಾ ಸಹಭಾಗಿತ್ವದಲ್ಲಿ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ನ ‘ಅನ್ನಪೂರ್ಣ ಬೆಳಗಿನ ಪೌಷ್ಟಿಕ ಆಹಾರ ಕಾರ್ಯಕ್ರಮ’ಕ್ಕೆ ಮಾನ್ಯ ಸಮಾಜ ಕಲ್ಯಾಣ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದರು

ಶಾಲಾ ಮಕ್ಕಳಿಗೆ ಪ್ರತಿದಿನ ಬೆಳಗಿನ ಜಾವ ಪೌಷ್ಟಿಕ ಆಹಾರ ಒದಗಿಸುವ ಮೂಲಕ, ಮಕ್ಕಳು ಹಸಿವಿನಿಂದ ಶಾಲೆಗೆ ಬರದಂತೆ ನೋಡಿಕೊಳ್ಳುವುದು, ಅವರ ಆರೋಗ್ಯ, ಬೆಳವಣಿಗೆ ಹಾಗೂ ಕಲಿಕೆಯ ಸಾಮರ್ಥ್ಯವನ್ನು ಉತ್ತೇಜಿಸುವುದು ಈ ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಮಕ್ಕಳ ಆರೋಗ್ಯಕರ ಬೆಳವಣಿಗೆ ಮತ್ತು ಉತ್ತಮ ಶಿಕ್ಷಣಕ್ಕೆ ಪೌಷ್ಟಿಕ ಆಹಾರ ಅತ್ಯಂತ ಅಗತ್ಯ. ಸರ್ಕಾರ, ಸಂಘ-ಸಂಸ್ಥೆಗಳು ಹಾಗೂ CSR ಸಂಸ್ಥೆಗಳ ಸಹಭಾಗಿತ್ವದ ಇಂತಹ ಜನಪರ ಕಾರ್ಯಕ್ರಮಗಳು ಮಕ್ಕಳ ಭವಿಷ್ಯವನ್ನು ಮತ್ತಷ್ಟು ಸದೃಢಗೊಳಿಸಲಿವೆ.

‘ಯಾವುದೇ ಮಗು ಹಸಿವಿನಿಂದ ಶಾಲೆಗೆ ಹೋಗಬಾರದು’ ಎಂಬ ಆಶಯದೊಂದಿಗೆ ನಡೆಯುತ್ತಿರುವ ಈ ಮಹತ್ವದ ಕಾರ್ಯಕ್ರಮಕ್ಕೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದರು.

 #ದೊಡ್ಡಬಳ್ಳಾಪುರದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆರ್.ಲಕ್ಷ್ಮೀಪತಿ  ಅವಿರೋಧ ಆಯ್ಕೆ.ದೊಡ್ಡಬಳ್ಳಾಪುರ : ನಗರಸಭೆಯ ನೂತನ ಸ...
07/09/2026

#ದೊಡ್ಡಬಳ್ಳಾಪುರ
ದೊಡ್ಡಬಳ್ಳಾಪುರ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆರ್.ಲಕ್ಷ್ಮೀಪತಿ ಅವಿರೋಧ ಆಯ್ಕೆ.

ದೊಡ್ಡಬಳ್ಳಾಪುರ : ನಗರಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆರ್.ಲಕ್ಷ್ಮೀಪತಿ ಆಯ್ಕೆಯಾಗಿದ್ದಾರೆ, ನೂತನ ಅಧ್ಯಕ್ಷರಿಗೆ ನಗರಸಭಾ ಸದಸ್ಯರು, ಪೌರಾಯುಕ್ತರು ಮತ್ತು ಸಿಬ್ಬಂದಿ ವರ್ಗ ಅಭಿನಂಧನೆ ಸಲ್ಲಿಸಿದೆ.

ದೊಡ್ಡಬಳ್ಳಾಪುರ ನಗರಸಭೆ 15ನೇ ವಾರ್ಡ್ ಸದಸ್ಯರಾದ ಆರ್.ಲಕ್ಷ್ಮೀಪತಿಯವರು ಇಂದು ನಡೆದ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಎರಡು ತಿಂಗಳಲ್ಲಿ ನಗರಸಭೆ ಸದಸ್ಯರ ಅವಧಿಯ ಮುಕ್ತಾಯವಾಗಲಿದೆ. 2 ತಿಂಗಳ ಕಾಲಾವಧಿಯಲ್ಲಿ ಲಕ್ಷ್ಮೀಪತಿಯವರ ಕಾರ್ಯವೈಖರಿ ಸಾರ್ವಜನಿಕರ ಕುತೂಹಲಕ್ಕೆ ಕಾರಣಾಗಿದೆ.

ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಮೈತ್ರಿಕೂಟ ಅಧಿಕಾರದಲ್ಲಿದ್ದು, ಅಧ್ಯಕ್ಷರಾಗಿ ಜೆಡಿಎಸ್ ನಿಂದ ಆರ್.ಪ್ರಭಾನಾಗರಾಜು, ಉಪಾಧ್ಯಕ್ಷರಾಗಿ ಬಂತಿ ವೆಂಕಟೇಶ್ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಾದಿ ಬಿಜೆಪಿಯ ಆರ್.ಲಕ್ಷ್ಮೀಪತಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ 2ನೇ ವಾರ್ಡ್ ಸದಸ್ಯರಾದ ಪದ್ಮನಾಬ ಮತ್ತು ಆರ್.ಲಕ್ಷ್ಮೀಪತಿ ನಡುವೆ ಸ್ವರ್ಥೆ ಇದ್ದು, ಅಂತಿಮವಾಗಿ ಶಾಸಕ ಧೀರಜ್ ಮುನಿರಾಜು ಮತ್ತು ಪಕ್ಷದ ತೀರ್ಮಾನದಂತೆ ಆರ್,ಲಕ್ಷ್ಮೀಪತಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು, ಅಂತಿಮವಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆರ್.ಲಕ್ಷ್ಮೀಪತಿಯ ಆಯ್ಕೆಗೆ ಪಕ್ಷದಲ್ಲಿನ ಕೆಲವು ಸದಸ್ಯರು ಅಸಮಾಧನ ಮತ್ತು ವಿರೋಧವನ್ನ ವ್ಯಕ್ತಪಡಿಸಿದ್ದರು. ಶಾಸಕರ ತಿರ್ಮಾನಕ್ಕೆ ಎಲ್ಲರು ಒಪ್ಪಿಗೆ ಸೂಚಿಸಿರುವ ಲಕ್ಷಣ ಕಂಡು ಬಂದಿದೆ.

 #ದೇವನಹಳ್ಳಿಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ,ಬೆಂಗಳೂರು ವಿದೇಶಿ ಉದ್ಯಮಿಗಳ ನೆಚ್ಚಿನ ಆಯ್ಕೆ,ವಿದೇಶಿ ವಿವಿಗಳು ಕರ್ನಾಟಕದ ...
07/09/2026

#ದೇವನಹಳ್ಳಿ
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ,
ಬೆಂಗಳೂರು ವಿದೇಶಿ ಉದ್ಯಮಿಗಳ ನೆಚ್ಚಿನ ಆಯ್ಕೆ,
ವಿದೇಶಿ ವಿವಿಗಳು ಕರ್ನಾಟಕದ ಪ್ರತಿಭೆಗಳ ಮೇಲೆ ಆಸಕ್ತಿ
-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ

"ನವ ಯುವ ಪೀಳಿಗೆಯ ಅಗತ್ಯ,‌ ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್ ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

"ಶಿಕ್ಷಣ ನೀತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಆಡಳಿತವಿರುವ 4 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ದೆಹಲಿಯಲ್ಲಿ ನಿಗದಿಯಾಗಿತ್ತು, ಆದರೆ ಕೊನೆ ಕ್ಷಣದಲ್ಲಿ ಅದು ರದ್ದಾಯಿತು. ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗದೆ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು. ವಿಶ್ವದ 80ಕ್ಕೂ ಹೆಚ್ಚು ಪ್ರಸಿದ್ಧ ವಿಶ್ವವಿದ್ಯಾಲಯಗಳು ಕರ್ನಾಟಕದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಆಸಕ್ತಿ ತೋರುತ್ತಿವೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದ ವೇಳೆ ಭಾರತವನ್ನು ಅಭಿವೃದ್ಧಿಪಡಿಸಬೇಕಾದರೆ ಅದು ಬೆಂಗಳೂರು ಮತ್ತು ಕರ್ನಾಟಕದ ಮೂಲಕವೇ ಸಾಧ್ಯ ಎಂದು ಹೇಳಿದ್ದೆ" ಎಂದು ತಿಳಿಸಿದರು.

ಜಯರಾಂ ಅವರು ಗುರು ಸಮಾನರು

"ಶಿಕ್ಷಣ ಕ್ಷೇತ್ರಕ್ಕೆ ಎಂ ಎಸ್ ರಾಮಯ್ಯ ಕುಟುಂಬದ ಕೊಡುಗೆ ತುಂಬಾ ದೊಡ್ಡದು. ರಾಮಯ್ಯ ಅವರು ಬೆಂಗಳೂರು ಮತ್ತು ಕರ್ನಾಟಕ ಬೆಳೆಯಲು ಕೊಡುಗೆ ನೀಡಿದ್ದಾರೆ. ಜಯರಾಂ ಅವರ ಹಾಗೂ ನನ್ನ ಪರಿಚಯ 40 ವರ್ಷಗಳಷ್ಟು ಹಳೆಯದು. ಜಯರಾಂ ಅವರನ್ನು ನಾನು ಗುರು ಎಂದು ಗೌರವಿಸುತ್ತೇನೆ. ಅವರಿಂದ ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ" ಎಂದರು.

"ಎಂ.ಎಸ್. ರಾಮಯ್ಯ ಸಂಸ್ಥೆಯು ಜೆಎಸ್‌ಡಬ್ಲ್ಯೂ ಸಮೂಹದ ಸಜ್ಜನ್ ಜಿಂದಾಲ್ ಅವರಂತಹ ಹಲವು ಬೃಹತ್ ಉದ್ಯಮಿಗಳನ್ನು ಮತ್ತು ನಾಯಕರನ್ನು ಸೃಷ್ಟಿಸಿದೆ. ಇಲ್ಲಿನ ಹಳೆಯ ವಿದ್ಯಾರ್ಥಿಗಳ ಸಮೂಹ ತುಂಬಾ ದೊಡ್ಡದು. ರಾಮಯ್ಯ ಸಂಸ್ಥೆಯ ಪಕ್ಕದಲ್ಲೇ ಇರುವ ಭಾರತೀಯ ವಿಜ್ಞಾನ ಸಂಸ್ಥೆ ಆರಂಭವಾಗಲು ಸ್ವಾಮಿ ವಿವೇಕಾನಂದ, ಜಮ್‌ಶೆಟ್‌ಜಿ ಟಾಟಾ ಹಾಗೂ ಮೈಸೂರು ಮಹಾರಾಜರ ದೂರದೃಷ್ಟಿ ಕಾರಣ. ವಿವೇಕಾನಂದ ಹಾಗೂ ಜಮ್‌ಶೆಟ್‌ಜಿ ಟಾಟಾ ಅವರ ನಡುವಿನ ಸಂವಾದದ ಕಾರಣಕ್ಕೆ ಮಹತ್ವದ ಸಂಸ್ಥೆಗೆ ಮೈಸೂರು ಮಹಾರಾಜರು ಜಾಗ ನೀಡಿದರು" ಎಂದರು.

"ಪರೋಪಕಾರಾಯ ಫಲಂತಿ ವೃಕ್ಷಾಃ ಶ್ಲೋಕದಂತೆ ಮರ, ನದಿ ಮತ್ತು ಹಸುಗಳು ಹೇಗೆ ತಮಗಾಗಿ ಅಲ್ಲದೆ ಸಮಾಜಕ್ಕಾಗಿ ಬಾಳುತ್ತವೆಯೋ, ಹಾಗೆಯೇ ರಾಮಯ್ಯ ಅವರ ಕುಟುಂಬದ ಆಸ್ತಿ ಮತ್ತು ಜ್ಞಾನವಂತ ಸಮಾಜ ನಿರ್ಮಾಣಕ್ಕೆ ಮುಡಿಪಾಗಿದೆ" ಎಂದರು.

ಬೆಂಗಳೂರು ವಿದೇಶಿ ಉದ್ಯಮಿಗಳ ನೆಚ್ಚಿನ ಆಯ್ಕೆ

"ಎಸ್.ಎಂ. ಕೃಷ್ಣ ಸರ್ಕಾರದ ಅವಧಿಯಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾಗ ಅಮೆರಿಕ ರಾಯಭಾರಿಯವರು ಹೇಳಿದಂತೆ, ಅಮೆರಿಕಾದ 9/11 ರ ದುರಂತದ ನಂತರ, ಸುರಕ್ಷಿತ ಸ್ಥಳಕ್ಕಾಗಿ ಅಮೆರಿಕವು ದೆಹಲಿ, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್ ಮತ್ತು ಬೆಂಗಳೂರು ನಗರಗಳ ಸಮೀಕ್ಷೆ ನಡೆಸಿತ್ತು. ಚೆನ್ನೈನ ಹವಾಮಾನ, ಮುಂಬೈ-ಪುಣೆಗಳ ಜನದಟ್ಟಣೆ ಹಾಗೂ ಹೈದರಾಬಾದ್‌ನ ಪರಿಸ್ಥಿತಿಗಳನ್ನು ಪರಿಶೀಲಿಸಿದ ನಂತರ, ಕೇವಲ ಜ್ಞಾನ, ಸಂಸ್ಕೃತಿ ಮತ್ತು ಪ್ರತಿಭೆ ಹೆಚ್ಚಿರುವ ಬೆಂಗಳೂರನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು" ಎಂದರು.

"ದಾವೋಸ್ ಗೆ ತೆರಳಿದಾಗ ಹೆಚ್ಚಿನ ಉದ್ಯಮಿಗಳು ಬೆಂಗಳೂರಿನ ಬಗ್ಗೆ ಹೆಚ್ಚಿನ ಆಸಕ್ತಿವಹಿಸುತ್ತಿದ್ದರು. ಏಕೆಂದರೆ ಬೆಂಗಳೂರಲ್ಲಿ 1 ಡಾಲರ್ ವೆಚ್ಚಕ್ಕೆ ಮುಂಬೈನಲ್ಲಿ ಮೂರುವರೆ ಡಾಲರ್ ಗೆ ಸಮ. ಅಷ್ಟು ವೆಚ್ಚ ಹೆಚ್ಚಳವಾಗಿದೆ ಅಲ್ಲಿ. ಎಲ್ಲರೂ ಬೆಂಗಳೂರನ್ನು ಮೊದಲ ಆಯ್ಕೆಯನ್ನಾಗಿ ನೋಡುತ್ತಿದ್ದಾರೆ. ಅಂತರರಾಷ್ಟ್ರೀಯ ನಾಯಕರೂ ಬೆಂಗಳೂರನ್ನು ಮೆಚ್ಚುತ್ತಿದ್ದಾರೆ. ಇಲ್ಲಿನ ಶಿಕ್ಷಣ ಗುಣಮಟ್ಟವೂ ಚೆನ್ನಾಗಿದೆ" ಎಂದರು.

"ಅಮೆರಿಕನ್ನರು ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಕರ್ನಾಟಕದಲ್ಲಿ ಕನಿಷ್ಠ 10 ಅಂತಾರಾಷ್ಟ್ರೀಯ ಶಾಲೆಗಳನ್ನು ಕೋರಿದ್ದರು. ಇಂದು ಭಾರತದಲ್ಲಿರುವ 138 ಅಂತಾರಾಷ್ಟ್ರೀಯ ಶಾಲೆಗಳ ಪೈಕಿ 37 ಶಾಲೆಗಳು ಕರ್ನಾಟಕದಲ್ಲೇ ಇವೆ. ಕರ್ನಾಟಕದಲ್ಲಿ ಪ್ರತಿ ವರ್ಷ 20,000 ಇಂಜಿನಿಯರ್‌ಗಳು ಹಾಗೂ 59 ಮೆಡಿಕಲ್ ಕಾಲೇಜುಗಳಿಂದ 13,940 ವೈದ್ಯರು ಹೊರಬರುತ್ತಿದ್ದಾರೆ. ಜೊತೆಗೆ 1.2 ಲಕ್ಷಕ್ಕೂ ಹೆಚ್ಚು ಪ್ಯಾರಾಮೆಡಿಕಲ್ ಸಿಬ್ಬಂದಿ ತಯಾರಾಗುತ್ತಿದ್ದಾರೆ. ಸಿಲಿಕಾನ್ ವ್ಯಾಲಿಯಲ್ಲಿ 16 ಲಕ್ಷ (1.6 ಮಿಲಿಯನ್) ಐಟಿ ವೃತ್ತಿಪರರಿದ್ದರೆ, ಬೆಂಗಳೂರು ಒಂದರಲ್ಲೇ 2.6 ಮಿಲಿಯನ್ ಐಟಿ ವೃತ್ತಿಪರರು ಕೆಲಸ ಮಾಡುತ್ತಿದ್ದಾರೆ. ಇದು ಬೆಂಗಳೂರಿನ ಹೆಗ್ಗಳಿಕೆ" ಎಂದು ಹೇಳಿದರು .

"ಫಾಕ್ಸ್‌ಕಾನ್ ಸಂಸ್ಥೆಯಲ್ಲಿ 50,000 ಯುವ ಸಮೂಹ ಉದ್ಯೋಗ ಮಾಡುತ್ತಿದ್ದಾರೆ. ವಸತಿ, ವಿಮೆ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಅಮೆರಿಕದ ಸುಂಕ ಸಮಸ್ಯೆಯ ನಡುವೆಯೂ ಉದ್ಯಮಿಗಳು ಭಾರತ ಹಾಗೂ ಬೆಂಗಳೂರನ್ನು ಸುರಕ್ಷಿತ ಎಂದು ಭಾವಿಸಿದ್ದಾರೆ" ಎಂದು ಹೇಳಿದರು.

"ನ್ಯೂಜಿಲೆಂಡ್‌ ಗೆ ತೆರಳಿದ್ದಾಗ ನಾನು ಗಮನಿಸಿದ ಸಂಗತಿ ಎಂದರೆ. ಅಲ್ಲಿ ನಮ್ಮ ಪದವಿ ಕೇಳುವುದಿಲ್ಲ. ಬದಲಾಗಿ ಕೌಶಲ್ಯ ಕೇಳುತ್ತಾರೆ. ಕೌಶಲ್ಯ ಶಿಕ್ಷಣ ಪಡೆದು ಈ ದೇಶದ ಏಳಿಗೆಗೆ ಕೊಡುಗೆ ಕೊಡಬೇಕು" ಎಂದು ಹೇಳಿದರು.

"ನಾನು ಹುಟ್ಟಿನಿಂದ ರೈತ, ವೃತ್ತಿಯಿಂದ ಉದ್ಯಮಿ, ಆಯ್ಕೆಯಿಂದ ಶಿಕ್ಷಣತಜ್ಞ ಹಾಗೂ ಆಸಕ್ತಿಯಿಂದ ರಾಜಕಾರಣಿ. ಆದರೆ ನನ್ನ ಹೃದಯ ಇರುವುದು ಶಿಕ್ಷಣ ಕ್ಷೇತ್ರದಲ್ಲಿ. ಅದೇ ರೀತಿ ಜಯರಾಂ ಅವರೂ ಸಹ ಶಿಕ್ಷಣ ಕ್ಷೇತ್ರಕ್ಕೇ ತಮ್ಮ ಜೀವನ ಮುಡುಪಾಗಿಟ್ಟವರು. ಜಯರಾಂ ಅವರು ಇತಿಹಾಸ ಓದುವವರಲ್ಲ, ಇತಿಹಾಸ ಸೃಷ್ಟಿಸುವವರು" ಎಂದು ಬಣ್ಣಿಸಿದರು.

Address

Someshwara Badavane
Bangalore
561203

Alerts

Be the first to know and let us send you an email when VartaGuru posts news and promotions. Your email address will not be used for any other purpose, and you can unsubscribe at any time.

Contact The Business

Send a message to VartaGuru:

Shortcuts

Share