
06/12/2024
#ಮೋಳಿಗೆ_ಮಾರಯ್ಯ ನವರ #ವಚನ
ಆನೆ ಕುದುರೆ ಭಂಡಾರವಿರ್ದಡೇನೊ?
ತಾನುಂಬುದು ಪಡಿಯಕ್ಕಿ, ಒಂದಾವಿನ ಹಾಲು, ಮಲಗುವುದರ್ಧ ಮಂಚ.
ಈ ಹುರುಳಿಲ್ಲದ ಸಿರಿಯ ನೆಚ್ಚಿ ಕೆಡಬೇಡ ಮನುಜಾ.
ಒಡಲು ಭೂಮಿಯ ಸಂಗ, ಒಡವೆ ತಾನೇನಪ್ಪುದೊ?
ಕೈವಿಡಿದ ಮಡದಿ ಪರರ ಸಂಗ, ಪ್ರಾಣ ವಾಯುವಿನ ಸಂಗ.
ಸಾವಿಂಗೆ ಸಂಗಡವಾರೂ ಇಲ್ಲ ಕಾಣಾ, ನಿಃಕಳಂಕ ಮಲ್ಲಿಕಾರ್ಜುನಾ...