MBCrimenews

MBCrimenews There are various types of crime news including fires, accidents, robberies, burglaries, fraud, murders, blackmail, kidnapping and r**e.

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸಿಸಿಬಿ ರವರ ನೇತೃತ್ವದ ತಂಡದಿಂದ ಸದಾಶಿವ ನಗರದ ಅಪಾರ್ಟ್ಮೆಂಟದಲ್ಲಿ ಕಾನೂನು ಬಾಹಿರವಾಗಿ ವಿವ...
24/07/2023

ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐ ಸಿಸಿಬಿ ರವರ ನೇತೃತ್ವದ ತಂಡದಿಂದ ಸದಾಶಿವ ನಗರದ ಅಪಾರ್ಟ್ಮೆಂಟದಲ್ಲಿ ಕಾನೂನು ಬಾಹಿರವಾಗಿ ವಿವಿಧ ಕಂಪನಿಯ ಸ್ಟಿಕ್ಕರ್ ಅಂಟಿಸಿ ಅಕ್ರಮವಾಗಿ ನಕಲಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿ, ಸುಮಾರು 4 ಲಕ್ಷ ಮೌಲ್ಯದ ಅಕ್ರಮ ಮದ್ಯ, ಕಾರು, ಮೊಬೈಲ್ ಹಾಗು ಹಣ ಜಪ್ತ ಮಾಡಿ ಇಬ್ಬರೂ ಆರೋಪಿತರನ್ನು ದಸ್ತಗಿರ ಮಾಡಿದ್ದು, ಇನ್ನು 2 ಆರೋಪಿತರು ಫರಾರಿ ಇರುತ್ತಾರೆ. ರೇಡ್ ತಂಡಕ್ಕೆ ನಗದು ಬಹುಮಾನ ನೀಡಿದ್ದು, ತನಿಖೆ ಮುಂದುವರೆದಿದೆ.

ಇಸ್ರೋಗೆ ಅಭಿನಂದನೆಗಳು ಚಂದ್ರಯಾನ-3 ಮಿಷನ್: 24 ಗಂಟೆಗಳ ಅವಧಿಯ ಸಂಪೂರ್ಣ ಉಡಾವಣಾ ತಯಾರಿ ಮತ್ತು ಪ್ರಕ್ರಿಯೆಯನ್ನು ಅನುಕರಿಸುವ 'ಲಾಂಚ್ ರಿಹರ್ಸಲ...
14/07/2023

ಇಸ್ರೋಗೆ ಅಭಿನಂದನೆಗಳು ಚಂದ್ರಯಾನ-3 ಮಿಷನ್: 24 ಗಂಟೆಗಳ ಅವಧಿಯ ಸಂಪೂರ್ಣ ಉಡಾವಣಾ ತಯಾರಿ ಮತ್ತು ಪ್ರಕ್ರಿಯೆಯನ್ನು ಅನುಕರಿಸುವ 'ಲಾಂಚ್ ರಿಹರ್ಸಲ್' ಮುಕ್ತಾಯಗೊಂಡಿದೆ.ಭಾರತದ ದೇಶದ ಕೀರ್ತಿ ಇನ್ನಷ್ಟು ಬೆಳಗಲಿ

🚀 🇮🇳

ಕಾಠ್ಮಂಡು: ನೇಪಾಳದ (Nepal) ರಾಜಧಾನಿ ಕಾಠ್ಮಂಡುವಿನಲ್ಲಿರುವ (Kathmandu) ವಿಶ್ವವಿಖ್ಯಾತ ಪಶುಪತಿನಾಥ ದೇವಸ್ಥಾನದಲ್ಲಿ (Pashupatinath Temp...
26/06/2023

ಕಾಠ್ಮಂಡು: ನೇಪಾಳದ (Nepal) ರಾಜಧಾನಿ ಕಾಠ್ಮಂಡುವಿನಲ್ಲಿರುವ (Kathmandu) ವಿಶ್ವವಿಖ್ಯಾತ ಪಶುಪತಿನಾಥ ದೇವಸ್ಥಾನದಲ್ಲಿ (Pashupatinath Temple) 10 ಕೆಜಿ ಚಿನ್ನ (Gold) ಕಳ್ಳತನವಾಗಿದೆ. ಇದನ್ನು ತನಿಖೆ ನಡೆಸಲು ಅಧಿಕಾರಿಗಳು ದೇವಾಲಯವನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಸಾರ್ವಜನಿಕರ ಪ್ರವೇಶಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ...
26/06/2023

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​​ ವೇನಲ್ಲಿ ಮತ್ತೊಂದು ಅಪಘಾತವಾಗಿದ್ದು, ಅಪರಿಚಿತ ವಾಹನಕ್ಕೆ ಬೈಕ್​ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಬಳಿ ನಡೆದಿದೆ.

ರೇವೂರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಏಳು ಜನ ಅಂತರ ರಾಜ್ಯ ಮೋಟರ್ ಸೈಕಲ್ ಕಳ್ಳರನ್ನು ಬಂಧಿಸಿ, ಬಂಧಿತರಿಂದ ಹದಿನಾಲ್ಕು ಮೋಟಾರ್ ಸೈಕಲ್ ಗಳ ಅಂದಾ...
20/06/2023

ರೇವೂರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಏಳು ಜನ ಅಂತರ ರಾಜ್ಯ ಮೋಟರ್ ಸೈಕಲ್ ಕಳ್ಳರನ್ನು ಬಂಧಿಸಿ, ಬಂಧಿತರಿಂದ ಹದಿನಾಲ್ಕು ಮೋಟಾರ್ ಸೈಕಲ್ ಗಳ ಅಂದಾಜು ಮೊತ್ತ 9.10 ಲಕ್ಷ ರೂಪಾಯಿ ವಶಕ್ಕೆ ಪಡೆದು ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿಕೊಡಲಾಯಿತು.

ಬೆಂಗಳೂರು: ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಮಾತ್ರ ತಡೆಯಿರಿ. ಇಲ್ಲದಿದ್ರೆ ವಾಹನ ಸವಾರರನ್ನು ತಡೆಯಬೇಡಿ ಎಂದು ಡಿಜಿ ಐಜಿ...
09/06/2023

ಬೆಂಗಳೂರು: ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವುದು ಕಂಡುಬಂದರೆ ಮಾತ್ರ ತಡೆಯಿರಿ. ಇಲ್ಲದಿದ್ರೆ ವಾಹನ ಸವಾರರನ್ನು ತಡೆಯಬೇಡಿ ಎಂದು ಡಿಜಿ ಐಜಿಪಿ ಅಲೋಕ್ ಮೋಹನ್ ಸಂಚಾರ ನಿಯಮಗಳಿಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಹೊರಡಿಸಿದ್ದಾರೆ. ಪೀಕ್ ಅವರ್ ಟ್ರಾಫಿಕ್ ಪ್ರಾರಂಭವಾಗುವ ಮೊದಲೇ ಸಂಚಾರಿ ಪೊಲೀಸರು ಆಯಾ ಸ್ಥಳಗಳಲ್ಲಿ ನಿಯೋಜಿಸಿಕೊಳ್ಳಬೇಕು. ಸಂಚಾರಿ ಪೊಲೀಸ್​ ಸಿಬ್ಬಂದಿ ದಟ್ಟಣೆಯ ಸಮಯಕ್ಕಿಂತ ಮೊದಲು ತಮ್ಮ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು. ಈ ಹೊಸ ಕ್ರಮವು ರಿಯಲ್ ಟೈಮ್ ನಲ್ಲಿ ಸಂಚಾರ ದಟ್ಟಣೆಯನ್ನು ತಡೆಗಟ್ಟಲು ಸಹಾಯ ಮಾಡಲಿದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ದಾವಣಗೆರೆ: ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಅಂತರ್ ಜಿಲ್ಲೆಯ‌ ಇಬ್ಬರು ಬೈಕ್ ಕಳ್ಳರ ಬಂಧನ ಮಾಡಲಾಗಿದೆ. 7 ರಾಯಲ್ ಎನ್‌ ಫೀಲ್ಡ್ ಮತ್ತು 5 ಸ್ಪ...
07/06/2023

ದಾವಣಗೆರೆ: ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ ಅಂತರ್ ಜಿಲ್ಲೆಯ‌ ಇಬ್ಬರು ಬೈಕ್ ಕಳ್ಳರ ಬಂಧನ ಮಾಡಲಾಗಿದೆ. 7 ರಾಯಲ್ ಎನ್‌ ಫೀಲ್ಡ್ ಮತ್ತು 5 ಸ್ಪೆಂಡರ್ ಪ್ಲಸ್ ಬೈಕ್‌ಗಳು ಒಟ್ಟು 12 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದು, ಬೈಕ್‌ಗಳ ಅಂದಾಜು ಮೌಲ್ಯ18 ಲಕ್ಷ ರೂ.ಗಳಾಗಿದೆ.
ಆರಿಫ್‌ವುಲ್ಲಾ ತನ್ನ ಹಿರೋ ಬೈಕನ್ನು ಮಿಲ್ಲತ್ ಕಾಲೇಜು ಹತ್ತಿರದ ಬಿಡಿ ಲೇಔಟ್ ಮುಂಭಾಗ ನಿಲ್ಲಿಸಿದ್ದನ್ನು ಯಾರೋ ಕಳ್ಳತನ ಮಾಡಿಕೊಂಡು ಹೋಗಿದ್ದಾರೆಂದು ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಆರೋಪಿ ಮತ್ತು ಮಾಲು ಪತ್ತೆಗೆ ಹೆಚ್ಚುವರಿ ಪೊಲೀಸ್ ಅಧಿಕ್ಷಕ‌ರಾಮಗೊಂಡ ಬಿ. ಬಸರಗಿ, ದಾವಣಗೆರೆನಗರ ಉಪ ವಿಭಾಗದ ಪೊಲೀಸ್ ಉಪಾಧಿಕ್ಷಕ ಮಲ್ಲೇಶ್ ದೊಡ್ಡಮನಿ ರವರ ಮಾರ್ಗದರ್ಶದನದಲ್ಲಿ ಆಜಾದ್ ನಗರ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್ ಆಜಾದ್, ನಗರ ಪೊಲೀಸ್ ಉಪ ನಿರೀಕ್ಷಕ ಕಾಂತರಾಜ್ ಎಸ್ ಮತ್ತು ಶೃತಿ ಹಾಗೂ ಸಿಬ್ಬಂದಿಗಳನ್ನೊಳಗೊಂಡ ತಂಡವು ಎಸ್.ಎಸ್.ಎಮ್ ನಗರದ ಈದ್ಗಾ ಮೈದಾನದ ಮುಂಭಾಗದ ಬಳಿ ಮೇಲ್ಕಂಡ ಪ್ರಕರಣದ ಆರೋಪಿತರಾದ 1) ಸೂಫಿಯಾನ್ (20) 2) ಖಾದ್ರಿ ಚೌದರಿ ಯಾನೆ ಜಾವೀದ್ (24) ಎಂಬವರನ್ನು ಬಂಧನ ಮಾಡಿದ್ದು , ಸದರಿ ಆರೋಪಿತರು ಜಿಲ್ಲೆ ಹಾಗೂ ಹೊರ ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಬೈಕ್ ಕಳ್ಳತನ ಮಾಡಿರುವುದು ವಿಚಾರಣೆ ವೇಳೆ ತಿಳಿದು ಬಂದಿರುತ್ತದೆ.

ಬೆಂಗಳೂರು: ಶಾಪಿಂಗ್​ಗೆ ಹೊರಟ ಮಹಿಳೆಯೊಬ್ಬರು ಕೆಎಸ್​ಆರ್​ಟಿಸಿ ಬಸ್​ ಅಡಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ರಾಜಧಾನಿ ಬೆಂಗಳೂರಿ...
07/06/2023

ಬೆಂಗಳೂರು: ಶಾಪಿಂಗ್​ಗೆ ಹೊರಟ ಮಹಿಳೆಯೊಬ್ಬರು ಕೆಎಸ್​ಆರ್​ಟಿಸಿ ಬಸ್​ ಅಡಿಗೆ ಸಿಲುಕಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ರಾಜಧಾನಿ ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಬಳಿ ಈ ಅವಘಡ ನಡೆದಿದೆ.
ಹೆಬ್ಬಾಳ ಬಳಿಯ ಕೆಂಪಾಪುರ ನಿವಾಸಿ ಲತಾ ಎಂಬಾಕೆ ಮೃತಪಟ್ಟವರು. ಎರಡು ಬೈಕ್​ಗಳಲ್ಲಿ ಕುಟುಂಬಸ್ಥರು ಬೈಕ್​ನಲ್ಲಿ ಬಂದಿದ್ದು, ಒಂದು ಬೈಕ್​ನಲ್ಲಿ ಪತಿ ಜತೆ ಲತಾ ಪ್ರಯಾಣಿಸುತ್ತಿದ್ದರು. ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆಯಿಂದ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಂದಿರುವ ಬಸ್​ನ ಹಿಂಭಾಗ ದ್ವಿಚಕ್ರ ವಾಹನಕ್ಕೆ ತಾಗಿದ್ದು, ಇಬ್ಬರೂ ಬಿದ್ದಿದ್ದರು. ಆಗ ಲತಾ ಮೇಲೆ ಬಸ್ ಸಾಗಿ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನೊಂದು ದ್ವಿಚಕ್ರ ವಾಹನದಲ್ಲಿ ಪುತ್ರಿ ಪ್ರಯಾಣಿಸುತ್ತಿದ್ದಳು. ಪತಿ ಹಾಗೂ ಪುತ್ರಿಯ ಎದುರೇ ಲತಾ ಸಾವಿಗೀಡಾದರು.

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ...
05/06/2023

ರೈಲು ದುರಂತ: ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ ಬೆಂಗಳೂರು: ಒಡಿಶಾದ ರೈಲು ದುರಂತ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆಯ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ಅವರನ್ನು ನಿಯೋಜಿಸಲಾಗಿದೆ.
ತಕ್ಷಣ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅಗತ್ಯ ನೆರವು ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸಂತೋಷ್ ಲಾಡ್ ಅವರ ಜೊತೆಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಸೇರಿ ಇತರೆ ಅಧಿಕಾರಿಗಳ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ ಎಂದು ತಿಳಿದುಬಂದಿದೆ.

ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶು...
03/06/2023

ಕೋರಮಂಡಲ್‌ ಎಕ್ಸ್‌ಪ್ರೆಸ್‌, ಬೆಂಗಳೂರು–ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮತ್ತು ಸರಕು ಸಾಗಣೆ ರೈಲುಗಳ ಮಧ್ಯೆ ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಅವಘಡದಲ್ಲಿ ಕನಿಷ್ಠ 233 ಮಂದಿ ಮೃತಪಟ್ಟು, ಸುಮಾರು 900ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಹನಾಗಾ ಬಜಾರ್‌ ನಿಲ್ದಾಣದ ಸಮೀಪ ರಾತ್ರಿ 7.20ರ ಸುಮಾರಿಗೆ ಈ ಭೀಕರ ಅವಘಡ ಸಂಭವಿಸಿದೆ. ಒಡಿಶಾದ ಈ ಮಹಾ ರೈಲು ದುರಂತಕ್ಕೆ ರೈಲು ಹಳಿಗಳಲ್ಲಿನ ದೋಷವೇ ಕಾರಣವಿರಬಹುದು ಎಂದು ಪ್ರಾಥಮಿಕವಾಗಿ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಹಳಿಗಳು ದೋಷಯುಕ್ತವಾಗಿದ್ದವೆಂದು ಶಂಕಿಸಲಾಗಿದೆ. ಆದರೆ, ತನಿಖೆಯ ನಂತರ ದುರಂತಕ್ಕೆ ನಿಖರ ಕಾರಣವೇನೆಂದು ತಿಳಿಯಲಿದೆ.
ಬೆಂಗಳೂರು– ಹೌರಾ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲಿನ ಹಲವು ಬೋಗಿಗಳು ಹಳಿ ತಪ್ಪಿ ಪಕ್ಕದ ಹಳಿಯ ಮೇಲೆ ಬಿದ್ದಿದ್ದವು. ಈ ಬೋಗಿಗಳಿಗೆ ಕೋಲ್ಕತ್ತದಿಂದ ಚೆನ್ನೈ ಕಡೆಗೆ ಸಾಗುತ್ತಿದ್ದ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮ ಈ ರೈಲಿನ ಬೋಗಿಗಳೂ ಹಳಿ ತಪ್ಪಿ ಮಗುಚಿ ಬಿದ್ದವು. ಇದರಿಂದಾಗಿ ಪಕ್ಕದ ಹಳಿಯಲ್ಲಿ ಸಾಗುತ್ತಿದ್ದ ಸರಕು ಸಾಗಣೆ ರೈಲು ಸಹ ಅಪಘಾತಕ್ಕೆ ಒಳಗಾಯಿತು ಎಂದು ತಿಳಿದು ಬಂದಿದೆ.

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ನಂತರ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಎಲ್ಲ...
03/06/2023

ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿದ ನಂತರ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಎಲ್ಲಾ ಭದ್ರತಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ಕಟಕ್‌ನ ಉಪ ಪೊಲೀಸ್ ಆಯುಕ್ತ ಪಿನಾಕ್ ಮಿಶ್ರಾ ಶನಿವಾರ ಹೇಳಿದ್ದಾರೆ.

ಬೆಂಗಳೂರು: ಕಳೆದೆರಡು ದಿನಗಳಿಂದ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲ...
02/06/2023

ಬೆಂಗಳೂರು: ಕಳೆದೆರಡು ದಿನಗಳಿಂದ ಲೋಕಾಯುಕ್ತ ಪೊಲೀಸರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 48.75 ಕೋಟಿ ರೂ ಮೌಲ್ಯದ ನಗದು, ಚಿನ್ನಾಭರಣ ಮತ್ತು ಇತರ ಮೌಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಮಂಗಳೂರು, ಉಡುಪಿ, ಹಾವೇರಿ, ಕೊಪ್ಪಳ ಸೇರಿದಂತೆ 15 ಮಂದಿ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು 57 ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. 15 ಮಂದಿಯಲ್ಲಿ ಬಿಬಿಎಂಪಿ ದಕ್ಷಿಣ ವಿಭಾಗದ (ಬೊಮ್ಮನಹಳ್ಳಿ ವಲಯ) ಕಾರ್ಯಪಾಲಕ ಎಂಜಿನಿಯರ್ ಎನ್‌ಜಿ ಪ್ರಮೋದ್‌ ಕುಮಾರ್‌ ಅವರ ಬಳಿ ಅಂದಾಜು 8 ಕೋಟಿ ರೂ ಮೌಲ್ಯದ ವಸ್ತುಗಳು ಪತ್ತೆಯಾಗಿವೆ. ಈತನ ವಿರುದ್ಧ ಮಂಡ್ಯ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಂಡ್ಯ ಮತ್ತು ಬೆಂಗಳೂರಿನಲ್ಲಿ ಈತನ ಸಂಬಂಧ ಐದು ಕಡೆ ಶೋಧ ನಡೆಸಲಾಯಿತು.

Address

Bangalore

Website

Alerts

Be the first to know and let us send you an email when MBCrimenews posts news and promotions. Your email address will not be used for any other purpose, and you can unsubscribe at any time.

Contact The Business

Send a message to MBCrimenews:

Share