13/08/2026
ಈ ಕುರಿತು ನಿರ್ಣಯ ಮಂಡಿಸಿದ ತಮಿಳನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್, ತಮಿಳು ಕೇವಲ ಒಂದು ಭಾಷೆಯಲ್ಲ, ನಮ್ಮ ಜೀವನಾಡಿ ಮತ್ತು ಭಾವನೆ. ರಾಜ್ಯದ ಭಾಷಾ ಮತ್ತು ಸಾಂಸ್ಕೃತಿಕ ಹಕ್ಕುಗಳ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ವಿಜಯ್, ತಮಿಳು ಎಂದರೆ ಹೆಮ್ಮೆ, ತಮಿಳು ಎಂದರೆ ಶಕ್ತಿ. ʼತಮಿಳುʼ ಎಂದು ಹೇಳಿದ ಕ್ಷಣ ಇಡೀ ತಮಿಳುನಾಡು ಒಂದಾಗಿ ನಿಲ್ಲುತ್ತದೆ. ತಮಿಳ್ ತಾಯ್ ವಳ್ತು ಗೆ ಮೊದಲ ಸ್ಥಾನ ನೀಡುವುದು ನಮ್ಮ ಹಕ್ಕು. ತಮಿಳುನಾಡಿನ ಶಿಕ್ಷಣ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ನಡೆಯುವ ಕಾರ್ಯಕ್ರಮಗಳ ಆರಂಭದಲ್ಲಿ ಮೊದಲು ರಾಜ್ಯ ಗೀತೆಯನ್ನು ಹಾಡಬೇಕು ಎಂಬ ನಿರ್ಣಯವನ್ನು ತಮಿಳುನಾಡು ಸರ್ಕಾರ ಕೈಗೊಂಡಿದೆ. ಇದಕ್ಕೂ ಮುನ್ನ ಕೇಂದ್ರ ಗೃಹ ಸಚಿವಾಲಯವು ಸರ್ಕಾರಿ ಕಾರ್ಯಕ್ರಮಗಳಲ್ಲಿ ಮೊದಲು ರಾಷ್ಟ್ರಗೀತೆ ನುಡಿಸುವಂತೆ ನಿರ್ದೇಶನ ನೀಡಿತ್ತು. ಜುಲೈನಲ್ಲಿ ರಾಜ್ಯಗಳು ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು