09/08/2025
ವಿಷ್ಣುವರ್ಧನ್ ಸಮಾಧಿಯನ್ನು ರಾತ್ರೋರಾತ್ರಿ ನಾಶಪಡಿಸಲು ಕಾರಣ !
" ಬಾಲಣ್ಣನ ವಂಶಸ್ಥರೆನಿಸಿಕೊಂಡವರು ಸಮಾಧಿ ಜಾಗದಲ್ಲಿ ಮಾಲ್ ಕಟ್ಟಲು ಹೊರಟಿದ್ದಾರೆ. ಅವರಿಗೆ ಬೆನ್ನೆಲುಬಾಗಿ ಒಬ್ಬ ರಾಜಕಾರಣಿಯೂ ಜೊತೆಯಾಗಿದ್ದಾನೆ. ಹಣಕ್ಕಾಗಿ ಇಷ್ಟು ನೀಚ ಬಾಳು ಬಾಳಬೇಕಾ? ಧಿಕ್ಕಾರವಿರಲಿ... ರಾತ್ರೋರಾತ್ರಿ ಹೇಡಿಗಳ ಹಾಗೆ ನೆಲಸಮ ಮಾಡುವುದು ಬಿಟ್ಟು ಹಗಲಲ್ಲಿ ಮಾಡುವ ಎದೆಗಾರಿಕೆಯಾದರೂ ಅವರಿಗೆ ಇರಬೇಕಿತ್ತು. ಕರಾಳ ದಿನ ಎಂದು ಹೇಳಿದ್ದಾರೆ."
ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಯಲ್ಲಿ ಡಾ.ವಿಷ್ಣು ಸೇನಾ ಸಮಿತಿಯ ರಾಜ್ಯಾಧ್ಯಕ್ಷ, ಪುಸ್ತಕೋದ್ಯಮಿ ವೀರಕಪುತ್ರ ಶ್ರೀನಿವಾಸ್ ಅವರ ಹೇಳಿಕೆ.