
26/07/2025
ಮಾಜಿ ಕೇಂದ್ರ ಸಚಿವರು, ಶಾಸಕರಾದ ಸನ್ಮಾನ್ಯ ಶ್ರೀ ಬಸನಗೌಡ ಪಾಟೀಲ ಯತ್ನಾಳರವರು, ವಿಜಯಪುರ ನಗರದ ಕಿತ್ತೂರು ರಾಣಿ ಚೆನ್ನಮ್ಮ ಮಂಗಲ ಕಾರ್ಯಾಲಯದಲ್ಲಿ, ಇಂದು ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ ಹಾಗೂ ವಿಜಯಪುರ ಜಿಲ್ಲಾ ನೂತನ ಛಾಯಾಚಿತ್ರಗ್ರಾಹಕರ ಸಂಘದ ವತಿಯಿಂದ ಆಯೋಜಿಸಲಾದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಹಾಗೂ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು.
ಇದೇ ವೇಳೆ ಆಯೋಜಕರು ಆತ್ಮೀಯವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಕೆ.ಎಸ್ ಈಶ್ವರಪ್ಪ, ದೊಡ್ಡ ಮತ್ತು ಮಧ್ಯಮ ಕೈಗಾರಿಕ ಸಚಿವರಾದ ಶ್ರೀ ಎಂ.ಬಿ. ಪಾಟೀಲ ರವರು ಸೇರಿದಂತೆ ಮುಖಂಡರು, ಹಿತೈಷಿಗಳು ಹಾಗೂ ಛಾಯಾಚಿತ್ರಗಾರರು ಉಪಸ್ಥಿತರಿದ್ದರು.