Cini loka

Cini loka Filmy news

29/07/2025

*ಕಿಚ್ಚನ ‘ಮ್ಯಾಕ್ಸ್’ ಹೆಸರಲ್ಲಿ ಆಂಬುಲೆನ್ಸ್ ಸೇವೆ…ಇದು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ನ ಕೊಡುಗೆ*ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟ...
19/01/2024

*ಕಿಚ್ಚನ ‘ಮ್ಯಾಕ್ಸ್’ ಹೆಸರಲ್ಲಿ ಆಂಬುಲೆನ್ಸ್ ಸೇವೆ…ಇದು ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ನ ಕೊಡುಗೆ*

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ ನಟನೆಯ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಾರೆ. ಜೊತೆಗೆ ಸದ್ದಿಲ್ಲದೇ, ಕಷ್ಟ ಎಂದುಕೊಂಡು ಬಂದವರಿಗೆ ಸಹಾಯಹಸ್ತ ಚಾಚಿದ್ದಾರೆ. ಈಗಾಗಲೇ ತಮ್ಮ ಹೆಸರಿನಲ್ಲಿರುವ ಚಾರಿಟೇಬಲ್ ಟ್ರಸ್ಟ್ ಮೂಲಕ ಅವರು ಮಾಡಿರುವ ಸಹಾಯಗಳು ಎಲ್ಲರ ಕಣ್ಣಮುಂದಿವೆ. ಗ್ರಾಮ, ಶಾಲೆಗಳನ್ನು ದತ್ತು ತೆಗೆದುಕೊಳ್ಳುವುದರ ಜೊತೆಗೆ ಕಷ್ಟದಲ್ಲಿರುವವರಿಗೆ ಸಹಾಯದ ನೆರವು ನೀಡಿದ್ದಾರೆ. ಕಿಚ್ಚನ ಹೆಸರಿನ ಟ್ರಸ್ಟ್ ಹೊರತಾಗಿ ಅವರ ಅಭಿಮಾನಿಗಳೇ ಸಂಸ್ಥಾಪಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಾವಿರಾರು ಜೀವಗಳ ಉಳಿವಿಗೆ ನೆರವಾಗಿದೆ.

ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.

ಅಂದಹಾಗೇ ಮ್ಯಾಕ್ಸ್ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ.

ಕಾಲಿವುಡ್‌ನ ಖ್ಯಾತ ಡೈರೆಕ್ಟರ್‌ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದು, ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ. ಮ್ಯಾಕ್ಸ್‌ ಚಿತ್ರದಲ್ಲಿ ದೊಡ್ಡ ತಾರಾಂಗಣವೇ ಇರಲಿದ್ದು, ಇದರಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್‌, ಕಾಮರಾಜ್, ಸುಕೃತಾ ವಾಗ್ಲೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದು ಸಾಹಸಮಯ ಚಿತ್ರವಾಗಿದ್ದು ಮತ್ತು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥಾನು ಹಣ ಹಾಕಿದ್ದಾರೆ.

*ಚೇಫ್ ಆದ ದಿಯಾ ಪೃಥ್ವಿ ಅಂಬಾರ್..ಬಂತು ‘ಜೂನಿ’ ಕ್ಯಾರೆಕ್ಟರ್ ಟೀಸರ್**’ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣ..ಚೇಫ್ ಆದ ಪೃಥ್ವಿ ಅಂಬಾರ್..**’ದ...
09/01/2024

*ಚೇಫ್ ಆದ ದಿಯಾ ಪೃಥ್ವಿ ಅಂಬಾರ್..ಬಂತು ‘ಜೂನಿ’ ಕ್ಯಾರೆಕ್ಟರ್ ಟೀಸರ್*

*’ಜೂನಿ’ ಕ್ಯಾರೆಕ್ಟರ್ ಟೀಸರ್ ಅನಾವರಣ..ಚೇಫ್ ಆದ ಪೃಥ್ವಿ ಅಂಬಾರ್..*

*’ದಿಯಾ’ ಫ್ಲೇವರ್ ನಲ್ಲಿ ಜೂನಿ ಕ್ಯಾರೆಕ್ಟರ್ ಟೀಸರ್…ಚೇಫ್ ಆದ ಪೃಥ್ವಿ ಅಂಬಾರ್..ಫೆ.9ಕ್ಕೆ ಸಿನಿಮಾ ರಿಲೀಸ್*

ಸ್ಯಾಂಡವುಲ್‌ನಲ್ಲಿ ದಿಯಾ ಅನ್ನುವ ಸಿನಿಮಾ ಬಂದಿತ್ತು. ಈ ಚಿತ್ರದ ನಾಯಕ ಪೃಥ್ವಿ ಅಂಬಾರ್ ಅದ್ಭುತವಾಗಿಯೇ ಅಭಿನಯಿಸಿದ್ದರು. ಇದೀಗ ಅಂತಹದ್ದೆ ಪ್ರೇಮಕಥೆಯ ಹೊತ್ತುಬಂದಿರುವ ಜೂನಿ ಕ್ಯಾರೆಕ್ಟರ್ ಟೀಸರ್ ಅನಾವರಣಗೊಂಡಿದೆ. ಜೂನಿ ಕ್ಯಾರೆಕ್ಟರ್ ಟೀಸರ್ ದಿಯಾ ಸಿನಿಮಾ ಫ್ಲೇವರ್ ಕೊಡುತ್ತಿದೆ. ಚೇಫ್ ಅವತಾರದಲ್ಲಿ ಪೃಥ್ವಿ ಕಾಣಿಸಿಕೊಂಡಿದ್ದಾರೆ. ಸಖತ್ ಇಂಪ್ರೆಸಿವ್ ಆಗಿದೆ ಕ್ಯಾರೆಕ್ಟರ್ ಟೀಸರ್..

‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್ ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ಜೂನಿ ಸಿನಿಮಾದಲ್ಲಿ ನಾಯಕಿ ರಿಷಿಕಾ ನಾಯಕ್ ನಟಿಸಿದ್ದಾರೆ.

‘ಜೂನಿ’ ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ನಡಿ ಮೋಹನ್ ಕುಮಾರ್ ಎಸ್ ಹಣ ಹಾಕಿದ್ದು, ಶ್ರೇಯಸ್ ವೈ ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ.

ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ಮುಗಿಸಿರುವ ‘ಜೂನಿ’ ಫೆಬ್ರವರಿ 9ಕ್ಕೆ ತೆರೆಗೆ ಬರ್ತಿದೆ. ನಕುಲ್ ಅಭ್ಯಂಕರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ನಾರಾಯಣ ಅವರು ಸಂಕಲನದ ಜವಾಬ್ದಾರಿ ನಿಭಾಯಿಸಿದ್ದಾರೆ. ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ ಮಾಡಿದ್ದಾರೆ. ನವೀನ್ ಅವರ ಕಲಾ ನಿರ್ದೇಶನ ಈ ಸಿನಿಮಾಗಿದೆ.

09/01/2024
ಹಿರಿಯ ನಟಿ ಸರೋಜ ಅಮ್ಮನವರ ಬರ್ತ್ಡೇ ಸೆಲೆಬ್ರೇಶನ್ ನಲ್ಲಿ ಆಗಮಿಸಿದ ಕನ್ನಡದ ಸ್ಟಾರ್ ನಟ ನಟಿಯರ ಫೋಟೋಸ್ 😍❤️
08/01/2024

ಹಿರಿಯ ನಟಿ ಸರೋಜ ಅಮ್ಮನವರ ಬರ್ತ್ಡೇ ಸೆಲೆಬ್ರೇಶನ್ ನಲ್ಲಿ ಆಗಮಿಸಿದ ಕನ್ನಡದ ಸ್ಟಾರ್ ನಟ ನಟಿಯರ ಫೋಟೋಸ್ 😍❤️

08/01/2024

*ಸೆಟ್ಟೇರಿತು S/O ಮುತ್ತಣ್ಣ..ಇದು ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ..*

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗಷ್ಟೇ ತೆಲುಗು ಇಂಡಸ್ಟ್ರೀಗೆ ಕಾಲಿಟ್ಟಿರುವ ಪ್ರಣಂ, ಈಗ ‘S/O ಮುತ್ತಣ್ಣ’ನಾಗಲು ಸಜ್ಜಾಗಿದ್ದಾರೆ.

ಯಂಗ್ ಡೈನಾಮಿಕ್ ಪ್ರಣಂ ದೇವರಾಜ್ ಹೊಸ ಸಿನಿಮಾ ಸೆಟ್ಟೇರಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ S/O ಮುತ್ತಣ್ಣ ಸಿನಿಮಾದ ಮುಹೂರ್ತ ನೆರವೇರಿದೆ. ದೇವರಾಜ್ ದಂಪತಿ ಆಗಮಿಸಿ ಮಗನ ಚಿತ್ರಕ್ಕೆ ಶುಭಾಶಯ ತಿಳಿಸಿದ್ದಾರೆ. ಅಂದಹಾಗೇ S/O ಮುತ್ತಣ್ಣನಿಗೆ ಶ್ರೀಕಾಂತ್ ಹುಣ್ಸೂರ್ ಸಾರಥಿ. ಆರ್.ಚಂದ್ರು ಹಾಗೂ ಪ್ರೇಮ್ಸ್ ಗರಡಿಯಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಶ್ರೀಕಾಂತ್, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಪ್ರಣಂ ದೇವರಾಜ್ ನಾಯಕನಾಗಿ ನಟಿಸುತ್ತಿರುವ S/O ಮುತ್ತಣ್ಣ ಸಿನಿಮಾದಲ್ಲಿ ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ತಾರಾಬಳಗದಲ್ಲಿದ್ದಾರೆ. ಟೈಟಲ್ ಹೇಳುವಂತೆ ಇದೊಂದು ಅಪ್ಪ-ಮಗನ ಬಾಂಧವ್ಯದ ಕಥೆಯಾಗಿದ್ದು, ಪುರಾತನ ಫಿಲ್ಮಂಸ್ ಬ್ಯಾನರ್ ನಡಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. S/O ಮುತ್ತಣ್ಣ ಸಿನಿಮಾಗೆ ಸ್ಕೇಟ್ಟಿಂಗ್ ಕೃಷ್ಣ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಚಿತ್ರತಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.

Address

Bangalore

Alerts

Be the first to know and let us send you an email when Cini loka posts news and promotions. Your email address will not be used for any other purpose, and you can unsubscribe at any time.

Share