24/07/2025
ಕಲಿತ ಶಾಲೆಯ ಕೀರ್ತಿ ಹೆಚ್ಚಿಸಿ: ಶ್ರೀಮಂತ ಪಾಟೀಲ; ತಾವು ಕಲಿತ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ..!!
ನಾನು ಕಲಿತ ಶಾಲೆಯಲ್ಲಿಯೇ ನೀವು ಕೂಡಾ ಕಲಿಯುತ್ತಿದ್ದೀರಿ. ಇಂದು ನಾನು ಈ ಮಟ್ಟಕ್ಕೆ ಬೆಳೆಯಲು ಅಲ್ಲಿಯ ಶಿಕ್ಷಕರ ಮಾರ್ಗದರ್ಶನವೇ ಕಾರಣವಾಗಿದ್ದು, ನೀವು ಕೂಡಾ ಚನ್ನಾಗಿ ಓದಿ, ಜೀವನದಲ್ಲಿ ಯಶಸ್ಸು ಸಾಧಿಸಿ, ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಿ ಎಂದು ಅಥಣಿ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷರು, ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಶ್ರೀಮಂತ ಪಾಟೀಲ ಹೇಳಿದ್ದಾರೆ.