11/01/2023
ಕಾಂಗ್ರೆಸ್ ಪ್ರತಿಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದ ಕಾಂಗ್ರೆಸ್ ಬಾವಿ ಸ್ಥಳದಲ್ಲಿರುವ ಗಾಂಧೀಜಿ ಪ್ರತಿಮೆಗೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
1924 ರಲ್ಲಿ ಬೆಳಗಾವಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ 39ನೇ ಅಧಿವೇಶನ ನಡೆದ ಸ್ಥಳದ ಗಾಂಧಿ ಭವನದಲ್ಲಿ ಅಳವಡಿಸಿದ ಭಾವಚಿತ್ರವನ್ನು ವೀಕ್ಷಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಬಸವರಾಜ ರಾಯರಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ಆರ್.ವಿ.ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕ ರಾಜ್ಯ ಹಾಗೂ ಬೆಳಗಾವಿ ಜಿಲ್ಲೆಯ ಮುಖಂಡರು ಇದ್ದರು.
Prajadwani Yatre held by kpcc..yatra bus function innaugrated by and all others were present on this occasion...