TV 10

TV 10 This page is about media/news company which publishes news and informative stories

15/02/2025

news

BMW X5 crashes into cargo laden Ashok Leyland Dost Vehicle from Rear at very High Speed. The driver of the BMW got stuck in the mangled car due to the intensity of the High Speed Crash This accident happened on Hyderabad ORR near Patancheru.

The Driver and another person in the Dost Vehicle suffered Small injuries and are Safe

ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಆಚರಣೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಧ್ವಜಾರೋಹಣ ಹಾಗೂ ಭಾಷಣ..
26/01/2025

ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಆಚರಣೆ
ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರಿಂದ ಧ್ವಜಾರೋಹಣ ಹಾಗೂ ಭಾಷಣ..

*ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ*ಬೆಳಗಾವಿ ಜ.21:1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂ...
21/01/2025

*ಗಾಂಧಿ ಭಾರತ ಮರು ನಿರ್ಮಾಣ ಪ್ರಕಟಣೆಗಳ ಬಿಡುಗಡೆ*

ಬೆಳಗಾವಿ ಜ.21:

1924 ರಲ್ಲಿ ಬೆಳಗಾವಿಯಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಸಂದರ್ಭದಲ್ಲಿ ಕೈಗೊಂಡ ನಿರ್ಣಯಗಳು,ಅಧ್ಯಕ್ಷೀಯ ಭಾಷಣ ಮತ್ತಿತರ ಮಾಹಿತಿಗಳು ಹಾಗೂ ಅಪರೂಪದ ಛಾಯಾಚಿತ್ರಗಳನ್ನು ಒಳಗೊಂಡು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಕಟಿಸಿರುವ "ಗಾಂಧಿ ಭಾರತ ಮರು ನಿರ್ಮಾಣ" ಹಾಗೂ Reclaiming Gandhi Bharath ಕನ್ನಡ ಹಾಗೂ ಆಂಗ್ಲ ಪುಸ್ತಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಡುಗಡೆ ಮಾಡಿದರು.

ಸುವರ್ಣ ಸೌಧದ ಆವರಣದಲ್ಲಿ ಸ್ಥಾಪಿಸಿರುವ ಬೃಹತ್ ಗಾಂಧಿ ಪುತ್ಥಳಿ ಅನಾವರಣ ಸಮಾರಂಭದಲ್ಲಿ ಈ ಕೃತಿಗಳನ್ನು ಲೋಕಾರ್ಪಣೆ ಮಾಡಲಾಯಿತು.

1924 ರ ಕಾಂಗ್ರೆಸ್ ಅಧಿವೇಶನದ ನಿರ್ಣಯಗಳು,ಕೊಲ್ಕತ್ತಾ ಒಪ್ಪಂದ ಮತ್ತು ನೇಯ್ಗೆಯ ಮತಾಧಿಕಾರ,ಸರೋಜಿನಿ ನಾಯ್ಡು ಅವರ ವಿದೇಶಾಂಗ ಸೇವೆ,ಅಕಾಲಿಗಳಿಗೆ ಅಭಿನಂದನೆ,ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳು, ಬರ್ಮಾದ ಜನರಿಗೆ ಸಹಾನುಭೂತಿ, ಕೋಹತ್ ಹಾಗೂ ಗುಲಬರ್ಗಾ ಗಲಭೆಗಳು,ಅಸ್ಪೃಶ್ಯತೆ ನಿವಾರಣೆ,ಅಧಿವೇಶನದ ಲೆಕ್ಕಪರಿಶೋಧನೆ ಸೇರಿದಂತೆ ಐತಿಹಾಸಿಕ ಮಾಹಿತಿಗಳು ಹಾಗೂ ಛಾಯಾಚಿತ್ರಗಳನ್ನು ಈ ಪುಸ್ತಕಗಳು ಒಳಗೊಂಡಿವೆ

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ವಿಧಾನಸಭಾಧ್ಯಕ್ಷ ಯು.ಟಿ.ಖಾದರ್,ಉಪಮುಖ್ಯಮಂತ್ರಿ ಡಿ‌.ಕೆ.ಶಿವಕುಮಾರ್, ಸಂಸದರಾದ ಪ್ರಿಯಾಂಕಾ ಗಾಂಧಿ,ಕೆ.ಸಿ.ವೇಣುಗೋಪಾಲ,ರಣದೀಪ್‌ಸಿಂಗ್ ಸುರ್ಜೇವಾಲಾ,ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ,ಸಚಿವರಾದ ಎಚ್.ಕೆ.ಪಾಟೀಲ,ಡಾ.ಜಿ.ಪರಮೇಶ್ವರ, ಸತೀಶ ಜಾರಕಿಹೊಳಿ ಮತ್ತಿತರ ಗಣ್ಯರು ವೇದಿಕೆಯಲ್ಲಿದ್ದರು.

21/01/2025

ಗಾಂಧಿ ಭಾರತ ಸಮಾವೇಶದ ಕುರಿತು ಡಿಕೆಶಿ ಪ್ರತಿಕ್ರಿಯೆ

ಸುವರ್ಣ ವಿಧಾನಸೌಧದ ಎದುರಿಗೆ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ------------------------------------------------ಬೆಳಗಾವಿಯಲ್ಲಿ 1924 ...
20/01/2025

ಸುವರ್ಣ ವಿಧಾನಸೌಧದ ಎದುರಿಗೆ ಮಹಾತ್ಮ ಗಾಂಧೀಜಿ ಪ್ರತಿಮೆ ಅನಾವರಣ
------------------------------------------------
ಬೆಳಗಾವಿಯಲ್ಲಿ 1924 ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸವಿನೆನಪಿಗಾಗಿ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆಯಲಿರುವ ಮಹಾತ್ಮಾ ಗಾಂಧೀಜಿ ಪ್ರತಿಮೆ‌ ಅನಾವರಣ ಸಮಾರಂಭದ ಸಿದ್ಧತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಸಂಜೆ ಪರಿಶೀಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಣೆ...-------------------------------------------...
20/01/2025

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಣೆ...
-----------------------------------------------
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇತ್ತೀಚೆಗೆ ನಡೆದ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಸೋಮವಾರ ಭೇಟಿ‌ ಮಾಡಿ‌ ಆರೋಗ್ಯ ವಿಚಾರಿಸಿದರು. ಸಚಿವರಾದ ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ಪ್ರಾರಂಭಿಸುವಂತೆ ಮನವಿ-------------------------------------------ಬೆಳಗಾವಿ ಲೋಕಸಭಾ ಸದಸ್ಯರು ಹಾಗ...
20/01/2025

ಬೆಳಗಾವಿ-ಬೆಂಗಳೂರು ವಂದೇ ಭಾರತ ರೈಲು ಪ್ರಾರಂಭಿಸುವಂತೆ ಮನವಿ
-------------------------------------------
ಬೆಳಗಾವಿ ಲೋಕಸಭಾ ಸದಸ್ಯರು ಹಾಗೂ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ ಅವರು ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವರಾದ ಪ್ರಲ್ಹಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನೈರುತ್ಯ ವಲಯದ ರೈಲ್ವೆ ಪ್ರಧಾನ ವ್ಯವಸ್ಥಾಪಕರಾದ ( ಜಿ.ಎಮ್ ) ಅರವಿಂದ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ, ಬೆಳಗಾವಿಗೆ ಸಂಬಂಧಿಸಿದಂತೆ ರೈಲು ಸೇವೆ ಒದಗಿಸುವ ಬಗ್ಗೆ ಸುದೀರ್ಘವಾದ ಚರ್ಚೆ ನಡೆಸಿದರು.

೧) ಬೆಂಗಳೂರು - ಧಾರವಾಡ ವಂದೇ ಭಾರತ್ ಎಕ್ಸ್ ಪ್ರೆಸ್:
ಪ್ರಸ್ತಾಪಿತ ರೈಲು ಸಂಚಾರವನ್ನು ಬೆಳಗಾವಿವರೆಗೆ ವಿಸ್ತರಿಸುವುದು ಬಹಳ ಅವಶ್ಯವಿದ್ದು ಮತ್ತು ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯೂ ಸಹ ಆಗಿದೆ. ಆದಕಾರಣ ಈ ರೈಲಿನ ಪ್ರವಾಸದ ಅಲ್ಪ ಸಮಯ ಬದಲಾವಣೆಯೊಂದಿಗೆ ಇದು ಸಾಧ್ಯವಿದ್ದು ಪ್ರಯುಕ್ತ ಈ ವಿಷಯವನ್ನು ಗಂಭೀರವಾಗಿ ಅವಲೋಕಿಸಿ ಕ್ರಮವನ್ನು ಜರುಗಿಸಲು ರೈಲ್ವೆ ಮಹಾಪ್ರಬಂಧಕರಿಗೆ ತಿಳಿಸಲಾಯಿತು.

೨) ಬೆಳಗಾವಿ ಮಿರಜ್ ನಡುವೆ ದಿನನಿತ್ಯ ಸಂಚರಿಸುವ ರೈಲು:
ಈ ರೈಲು ಸೇವೆಯನ್ನು ಪ್ರತಿ ಮಾಹೆ ಮುಂದುವರಿಸುತ್ತಾ ಬಂದಿದ್ದು, ಇದರ ಸೇವೆಯನ್ನು ಖಾಯಂ ಮಾಡುವಂತೆಯೂ ಮತ್ತು ಇದನ್ನು "ಮೆಮು"ರೈಲನ್ನಾಗಿ ಪರಿವರ್ತಿಸುವ ಬಗ್ಗೆ ಕ್ರಮವನ್ನು ಜರುಗಿಸಲು ಸೂಚಿಸಲಾಯಿತು.

೩) ಲೋಕಾಪುರ - ರಾಮದುರ್ಗ - ಸವದತ್ತಿ - ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ :
ಪ್ರಸ್ತಾಪಿತ ರೈಲು ಮಾರ್ಗ ನಿರ್ಮಾಣ ಅವಶ್ಯಕತೆ ಇದ್ದು, ಈ ಕುರಿತು ಮುಂಚಿತ ಸಮೀಕ್ಷೆ ನಡೆಸುವುದು ಅವಶ್ಯಕ. ಈ ನಿಟ್ಟಿನಲ್ಲಿ ಕೂಡಲೇ ಮುಂದಿನ ಅಗತ್ಯ ಕ್ರಮವನ್ನು ಜರುಗಿಸಲು ಸೂಚಿಸಿ, ರೈಲ್ವೆ ಪ್ರಧಾನ ವ್ಯವಸ್ಥಾಪಕರಿಗೆ (ಜಿ.ಎಮ್ ) ಅವರಿಗೆ ಮನವಿ ಸಲ್ಲಿಸಿದರು.

ಎಲ್ಲ ಬೇಡಿಕೆಗಳನ್ನು ಅವಲೋಕಿಸಿದ ರೈಲ್ವೆ ಪ್ರಧಾನ ವ್ಯವಸ್ಥಾಪಕರು (ಜಿ.ಎಮ್ ) ಈ ಕುರಿತು ಶೀಘ್ರ ಅನುಕೂಲಕರವಾದ ಕ್ರಮವನ್ನು ಕೈಗೊಳ್ಳುವುದಾಗಿ ಪ್ರಸ್ತಾಪಿಸಿದರೆಂದು ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟರ ಇವರು ತಿಳಿಸಿದರು.

ಈ ಸಭೆಯಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಇವರು ಭಾಗವಹಿಸಿದ್ದರು..

01/01/2025

New year 2025 celebration at Burj khalifa@Dubai (UAE)

Today's Bengaluru -Belagavi morning flight diverted to Mopa airport Goa due to heavy fog condition at Belagavi
21/12/2024

Today's Bengaluru -Belagavi morning flight diverted to Mopa airport Goa due to heavy fog condition at Belagavi

Address

Belgaum

Website

Alerts

Be the first to know and let us send you an email when TV 10 posts news and promotions. Your email address will not be used for any other purpose, and you can unsubscribe at any time.

Contact The Business

Send a message to TV 10:

Share