
12/09/2025
ಹಾಸನ ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಅಪಘಾತದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ. ಮೃತರ ಆತ್ಮಗಳಿಗೆ ಭಗವಂತ ಶಾಂತಿ ನೀಡಲಿ ಹಾಗೂ ಅವರ ಕುಟುಂಬಗಳಿಗೆ ಅಗಲಿಕೆಯ ನೋವು ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರವು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ನೀಡಲು ಹಾಗೂ ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸಲು ನಿರ್ಧರಿಸಿದೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ.