
24/02/2024
ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ
▪️ಭಾರತ ಸಂವಿಧಾನ ಅಂಗೀಕಾರಗೊಂಡು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸಂಚರಿಸಿದ ಚಾಮರಾಜನಗರ ಜಿಲ್ಲೆಯ ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಕ್ಕೆ ಪ್ರಥಮ ಸ್ಥಾನ ಬಂದಿದೆ.
▪️ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.
▪️ಸ್ತಬ್ದ ಚಿತ್ರದ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುಳಿತಿರುವ ಪ್ರತಿಮೆಯನ್ನು ಆಕರ್ಷಕವಾಗಿ ನಿರ್ಮಿಸಲಾಗಿದೆ. ಸಂವಿಧಾನ ಪೀಠಿಕೆಯನ್ನು ಪುಸ್ತಕದ ಮಾದರಿಯಲ್ಲಿ ಪ್ರದರ್ಶಿಸಲಾಗಿದೆ. ಬಸವತತ್ವ, ಸಾವಿತ್ರಿ ಜ್ಯೋತಿಬಾಪುಲೆ, ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ಕೊಡುಗೆ ಸೇರಿದಂತೆ ಜಿಲ್ಲೆಯ ಪ್ರಮುಖ ಕೊಡುಗೆಗಳನ್ನು ಸ್ತಬ್ದ ಚಿತ್ರದಲ್ಲಿ ಸ್ಮರಿಸಲಾಗಿದೆ. ಸಂವಿಧಾನಿಕ ಹಕ್ಕುಗಳ ಸಂರಕ್ಷಣೆ ಸಂದೇಶ, ವನ್ಯಜೀವಿ ಪ್ರಕೃತಿ ಸಂರಕ್ಷಣೆ ಸಂದೇಶ, ಇನ್ನಿತರ ವೈಶಿಷ್ಟ್ಯಗಳನ್ನು ಸ್ತಬ್ದ ಚಿತ್ರ ಒಳಗೊಂಡಿದೆ. ಇದರೊಂದಿಗೆ ರಾಜ್ಯ ಸರ್ಕಾರ ಸಾಕಾರಗೊಳಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಸ್ತಬ್ದಚಿತ್ರದಲ್ಲಿ ಪ್ರದರ್ಶಿಸಲಾಗಿದೆ.
▪️ಕಳೆದ ಜನವರಿ 26ರಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಎರಡು ಸಂವಿಧಾನ ಜಾಗೃತಿ ಸ್ತಬ್ದ ಚಿತ್ರಗಳಿಗೆ ಚಾಲನೆ ದೊರೆತು ಜಿಲ್ಲೆಯ 130 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಗೃತಿ ಸ್ತಬ್ದ ಚಿತ್ರ ಸಂಚರಿಸಿದೆ. ನಗರ ಪಟ್ಟಣ, ಗ್ರಾಮಾಂತರ ಪ್ರದೇಶಗಳಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಅದ್ದೂರಿ ಸ್ವಾಗತ ನೀಡಿ ಜನತೆ ಹಬ್ಬದಂತೆ ಸಂಭ್ರಮಿಸಿದ್ದಾರೆ. ಜನರಿಂದ ಸಂವಿಧಾನ ಜಾಗೃತಿಗೆ ಅಭೂತಪೂರ್ವ ಬೆಂಬಲ ಪ್ರತಿಕ್ರಿಯೆ ವ್ಯಕ್ತವಾಗಿದೆ.
▪️ಸಂವಿಧಾನ ಜಾಗೃತಿ ಸ್ತಬ್ದ ಚಿತ್ರ ಪ್ರಥಮ ಸ್ಥಾನಕ್ಕೆ ಪಾತ್ರವಾಗಿದ್ದು, ಇದಕ್ಕೆ ಶ್ರಮಿಸಿದ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಎಲ್ಲಾ ಅಧಿಕಾರಿ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅಭಿನಂದನೆಗಳು.
#ಸಂವಿಧಾನಜಾಗೃತಿಜಾಥಾ
#ಸಂವಿಧಾನ_ಜಾಗೃತಿ_ಜಾಥಾ
Chief Minister of Karnataka DIPR Karnataka K Venkatesh DR HC Mahadevappa ಸಮಾಜ ಕಲ್ಯಾಣ ಇಲಾಖೆ ಚಾಮರಾಜನಗರ ಜಿಲ್ಲೆ SWD Chamarajanagar Constitution Awareness Jatha ಸಮಾಜ ಕಲ್ಯಾಣ ಇಲಾಖೆ Social Welfare Department Zilla Panchayath Chamarajanagar Chamarajanagar Vartha Bhavan