25/11/2025
ಇಂದು ರಸ್ತೆ ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಅವರ ಮಾತುಗಳು:
ನನ್ನ ತಂದೆ ನಾನು 5 ವರ್ಷದ ವಯಸ್ಸಿನವನಾಗಿದ್ದಾಗ ಅಕಾಲಿಕ ಮರಣ ಹೊಂದುತ್ತಾರೆ, ಆಗ ನಮಗೆ ಕಿತ್ತು ತಿನ್ನುವ ಬಡತನ, ಆ ಸಮಯದಲ್ಲಿ ನನ್ನ ತಾಯಿ ವಿಧವಾ ವೇತನಕ್ಕೆ ಅರ್ಜಿ ಸಲ್ಲಿಸಿದಾಗ ಅನೇಕ ದಿನಗಳವರೆಗೆ ನನ್ನ ತಾಯಿಗೆ ಸಂಬಂಧಪಟ್ಟ ಅಧಿಕಾರಿಗಳು ಅಲೆದಾಡಿಸಿ ಕೊನೆಗೆ ನನ್ನ ತಾಯಿ 25 ರೂಪಾಯಿ ವಿಧವಾ ವೇತನ ಪಡೆಯಲು ನೂರು ರೂಪಾಯಿಗಳನ್ನು ಲಂಚವಾಗಿ ನೀಡಿದ ಮೇಲೆ ನನ್ನ ತಾಯಿಗೆ ವಿಧವಾ ವೇತನದ ಆದೇಶ ಪತ್ರವನ್ನು ನೀಡುತ್ತಾರೆ.
ಇದನ್ನೆಲ್ಲ ಗಮನಿಸಿದ ನನಗೆ ನನ್ನ ತಾಯಿಗೆ ಆದ ಅನ್ಯಾಯ ಸಮಾಜದ ಬೇರೆ ತಾಯಂದರಿಗೆ ಆಗಬಾರದು ಎಂದು ಸಂಕಲ್ಪ ಮಾಡಿ ಕಷ್ಟಪಟ್ಟು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಹಂತ ಹಂತವಾಗಿ ಬೆಳೆದು ಇಂದು ನಾನು ಜಿಲ್ಲಾಧಿಕಾರಿಯಾಗಿದ್ದೇನೆ.
ನನ್ನ ಮೊದಲ ಗುರಿ ನನ್ನ ತಾಯಿ ಅನುಭವಿಸಿದ ಕಷ್ಟವನ್ನು ಬೇರೆ ತಾಯಂದಿರು ಅನುಭವಿಸಬಾರದು, ಈ ಹಿನ್ನೆಲೆಯಲ್ಲಿ ನಾನು ಜಿಲ್ಲಾಧಿಕಾರಿಯಾದ ತಕ್ಷಣ "ಪಿಂಚಣಿ ಅದಾಲತ್ ಕಾರ್ಯಕ್ರಮ"ವನ್ನು ಜಾರಿಗೆ ತಂದಿದ್ದು ಇದರ ಉದ್ದೇಶ ತಹಶೀಲ್ದಾರ್ ಕಚೇರಿ ಜನರ ಮನೆಬಾಗಿಲಿಗೆ ಎಂಬುದು, ಇದರ ಅರ್ಥ ನಮ್ಮ ಅಧಿಕಾರಿಗಳು ಜನರ ಮನೆಬಾಗಿಲಿಗೆ ಹೋಗಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದಿಂದ ಸಿಗಬೇಕಾಗಿರುವ ವಿವಿಧ ಪಿಂಚಣಿ ಯೋಜನೆಗಳನ್ನು ತಲುಪಿಸುವುದು. ಈ ನನ್ನ ಮಹತ್ವಾಕಾಂಕ್ಷೆಯ ಯೋಜನೆಯನ್ನು ಜಿಲ್ಲೆಯ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಚಾಚೂತಪ್ಪದೆ ನಿರ್ವಹಿಸಬೇಕಾಗಿ ಸೂಚಿಸಿರುತ್ತೇನೆ.
-ಶ್ರೀ ಮಹಾಂತೇಶ್ ಬೀಳಗಿ
( Mahantesh Bilagi )
(ಶಿವರಾಜ ಬಡಿಗೇರ್ ಅವರ ವಾಲ್ ನಿಂದ)