Vibhinna Baraha Kannada Daily

Vibhinna Baraha Kannada Daily Daily news and enterataigment

23/11/2024
13/09/2024
*ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ* *ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನ...
26/08/2024

*ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟ ದೇಶದ್ರೋಹಿಗಳು ಈಗಲೂ ಇಲ್ಲೂ ಇದ್ದಾರೆ: ಸಿಎಂ*

*ನಿಮ್ಮ ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ: ಬಿಜೆಪಿ ಗೆ ಎಚ್ಚರಿಕೆ ಕೊಟ್ಟ ಸಿಎಂ*

ಬೆಳಗಾವಿ : ಆಶೀರ್ವಾದ ಇರುವವರೆಗೂ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಗೆ ಸ್ಪಷ್ಟ ಎಚ್ಚರಿಕೆ ಕೊಟ್ಟರು.

ಕೌಜಲಗಿಯಲ್ಲಿ ಆಯೋಜಿಸಿದ್ದ ಅದ್ದೂರಿ ಕಾರ್ಯಕ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಮತ್ತು ರಾಯಣ್ಣ ಕೋಟೆಯನ್ನು ಉದ್ಘಾಟಿಸಿ ಮಾತನಾಡಿದರು.

ರಾಣಿ ಚನ್ನಮ್ಮನ ಬಲಗೈ ಬಂಟ ರಾಯಣ್ಣ ಅತ್ಯಂತ ಪರಾಕ್ರಮಿ. ಬ್ರಿಟೀಷರು ರಾಣಿ ಚನ್ನಮ್ಮನ ಆಸ್ಥಾನದ ಮೇಲೆ ದಾಳಿ ನಡೆಸಿದಾಗ ರಾಯಣ್ಣನ ಹೋರಾಟದಿಂದ, ಶೌರ್ಯದಿಂದ ಗೆಲುವು ಸಾಧ್ಯವಾಯಿತು. ಎರಡನೇ ಯುದ್ಧದಲ್ಲಿ ಸೋಲಾದರೂ ಬ್ರಿಟೀಷರ ಕೈಗೆ ಸಿಗದೆ ತಪ್ಪಿಸಿಕೊಂಡ ರಾಯಣ್ಣ ಗೆರಿಲ್ಲಾ ಸೈನ್ಯ ಕಟ್ಟಿ, ಗೆರಿಲ್ಲಾ ಯುದ್ಧ ಮಾಡಿ ಬ್ರಿಟೀಷರಿಗೆ ಚಳ್ಳೆಹಣ್ಣು ತಿನ್ನಿಸಿದರು. ಇದರಿಂದ ಬ್ರಿಟೀಷರು ನೆಮ್ಮದಿ ಕೆಡಿಸಿಕೊಂಡಿದ್ದರು. ಆದರೆ ನಮ್ಮವರೇ ರಾಯಣ್ಣನನ್ನು ಬ್ರಿಟೀಷರಿಗೆ ಹಿಡಿದುಕೊಟ್ಟರು.

ನಮ್ಮವರ ದೇಶದ್ರೋಹದಿಂದ ರಾಯಣ್ಣ ಬ್ರಿಟೀಷರ ವಶವಾದರು. ರಾಯಣ್ಣ ಈಜಾಡುವಾಗ ಅವರ ಕೈಯಲ್ಲಿ ಆಯುಧ ಇರುವುದಿಲ್ಲ . ಈ ವೇಳೆ ಅವರನ್ನು ಬಂಧಿಸುವುದು ಸುಲಭ ಎಂದು ಬ್ರಿಟೀಷರಿಗೆ ಐಡಿಯಾ ಕೊಟ್ಟು ಬಂಧನಕ್ಕೆ ಕಾರಣರಾದವರು ನಮ್ಮವರೇ ಎಂದರು.

ಇಂಥಾ ದೇಶದ್ರೋಹಿಗಳು ನಮ್ಮಲ್ಲೇ ಇದ್ದಾರೆ. ಈ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂದು ಷಡ್ಯಂತ್ರ ಮಾಡುತ್ತಲೇ ಇದ್ದಾರೆ. ಆದರೆ ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ನನ್ನ ಮೇಲೆ ಇರುತ್ತದೋ ಅಲ್ಲಿಯವರೆಗೂ ನನ್ನನ್ನು ಕೆಳಗಿಳಿಸಲು ಸಾಧ್ಯವಿಲ್ಲ ಎಂದರು.

ಹಿಂದುಳಿದ ಸಮುದಾಯದವರು ಸಿಎಂ ಆಗಬಾರದು, ಅಧಿಕಾರದಲ್ಲಿರಬಾರದು ಎನ್ನುವುದು ಬಿಜೆಪಿಯ ಪುರಾತನ ಸಿದ್ಧಾಂತ. ಅದಕ್ಕೇ ಯಾವುದೇ ತಪ್ಪಿಲ್ಲದಿದ್ದರೂ ನನ್ನ ವಿರುದ್ಧ ಬಿಜೆಪಿಯವರು ಭಯಾನಕ ಷಡ್ಯಂತ್ರ ರಚಿಸಿದ್ದಾರೆ. ಜನರ ಆಶೀರ್ವಾದ ನನ್ನ ಮೇಲೆ ಇರುವವರೆಗೂ ಷಡ್ಯಂತ್ರ ಗೆಲ್ಲುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು.

ಬಾಗೋಜಿಕೊಪ್ಪ ಮಠದ ಶಿವಲಿಂಗ ಮುರುಘರಾಜೇಂದ್ರ ಸ್ವಾಮಿಗಳ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸತೀಶ್ ಜಾರಕಿಹೊಳಿ, ಶಾಸಕರಾ ಬಾಲಚಂದ್ರ ಜಾರಕಿಹೊಳಿ ಹಾಗೂ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಜೈಲು ಸಿಬ್ಬಂದಿಯನ್ನ ಸಸ್ಪೆಂಡ್ ಮಾಡಲಾಗಿದೆ ಎಂದು...
26/08/2024

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ 7 ಜೈಲು ಸಿಬ್ಬಂದಿಯನ್ನ ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲರ್ ಹೆಡ್ ವಾರ್ಡರ್ ಗಳಾದ ವೆಂಕಪ್ಪ, ಸಂಪತ್, ವಾರ್ಡರ್ ಬಸಪ್ಪ, ಪ್ರಭು, ಶ್ರೀಕಾಂತ್ ಏಳು ಮಂದಿಯನ್ನ ಸಸ್ಪೆಂಡ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಹಿರಿಯ ಅಧಿಕಾರಿಗಳ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.

ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇ...
25/08/2024

ಹಿಂದುಳಿದ ವರ್ಗ ಮತ್ತು ದಲಿತ ಹಾಗೂ ಶೋಷಿತ ಸಮುದಾಯಗಳ ಸ್ವಾಮೀಜಿಗಳ ಒಕ್ಕೂಟ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ತಮ್ಮ ಬೇಷರತ್ ನೈತಿಕ ಬೆಂಬಲ ಘೋಷಿಸಿದರು.

ಕೃತಕವಾಗಿ ಸರ್ಕಾರವನ್ನು ಅಸ್ಥಿರಗೊಳಿಸುವ ಕೇಂದ್ರ ಸರ್ಕಾರದ ಮತ್ತು ರಾಜಭವನದ ಷಡ್ಯಂತ್ರಗಳನ್ನು ತೀವ್ರವಾಗಿ ಖಂಡಿಸಿದ ಸ್ವಾಮೀಜಿಗಳು ಈ ಷಡ್ಯಂತ್ರದ ವಿರುದ್ಧ ಒಕ್ಕೋರಲಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ನಿಂತು ಹೋರಾಟ ನಡೆಸುವುದಾಗಿ ಘೋಷಿಸಿದರು.

ನಿಯೋಗದಲ್ಲಿದ್ದ ಸ್ವಾಮೀಜಿಗಳು :

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಜಿಯವರು ಕನಕ ಪೀಠ ಕಾಗಿನೆಲೆ
ಜಗದ್ಗುರು ಶ್ರೀ ಶಾಂತವೀರ ಮಹಾಸ್ವಾಮಿಗಳು ಶ್ರೀ ಜಗದ್ಗುರು ಕುಂಚಿಟಿಗ ಮಾಸಂಸ್ಥಾನ ಮಠ ಹೊಸದುರ್ಗ

ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮಿಗಳು ಭೋವಿ ಗುರುಪೀಠ ಚಿತ್ರದುರ್ಗ

ಜಗದ್ಗುರು ಶ್ರೀ ಬಸವಮೂರ್ತಿ ಮಾದರ ಚನ್ನಯ್ಯ ಮಹಾಸ್ವಾಮಿಗಳು ಮಾದರ ಚನ್ನಯ ಗುರುಪೀಠ ಚಿತ್ರದುರ್ಗ

ಜಗದ್ಗುರು ಶ್ರೀ ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳು ಭಗಿರಥ ಪೀಠ ಮಧುರೆ

ಪರಮಪೂಜ್ಯ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳು ಕನಕ ಗುರುಪೀಠ ಹೊಸದುರ್ಗ

ಶ್ರೀ ರೇಣುಕಾನಂದ ಸ್ವಾಮಿಗಳು ನಾರಾಯಣ ಗುರುಪೀಠ ಶಿವಮೊಗ್ಗ

ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ಮಡಿವಾಳ ಗುರುಪೀಠ ಚಿತ್ರದುರ್ಗ

ಶ್ರೀ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿಗಳು ಹಡಪದ ಅಪ್ಪಣ್ಣ ಗುರುಪೀಠ ತಂಗಡಗಿ

ಶ್ರೀ ಶಾಂತಮ್ಮಯ್ಯ ಸ್ವಾಮೀಜಿಗಳು ಸರೂರು ವಿಜಯನಗರ

*ರಾಜ್ಯಪಾಲರ ನಡೆಗೆ ಖಂಡನೆ; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ: ಡಿಸಿಎಂ ಡಿ.ಕೆ. ಶಿವ...
23/08/2024

*ರಾಜ್ಯಪಾಲರ ನಡೆಗೆ ಖಂಡನೆ; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ: ಡಿಸಿಎಂ ಡಿ.ಕೆ. ಶಿವಕುಮಾರ್*

ಬೆಂಗಳೂರು: “ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ, ಮುಖ್ಯಮಂತ್ರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸಲಾಯಿತು ಹಾಗೂ ಎಲ್ಲಾ ಶಾಸಕರು ಸರ್ವಾನುಮತದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲಕ್ಕೆ ನಿಲ್ಲುವ ನಿರ್ಣಯ ತೆಗೆದುಕೊಳ್ಳಲಾಯಿತು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಸಭೆ ನಂತರ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಯಾವುದೇ ಪ್ರಾಥಮಿಕ ತನಿಖೆ ನಡೆಯದೇ ಮುಖ್ಯಮಂತ್ರಿಗಳ ವಿರುದ್ಧ ಸೆಕ್ಷನ್ 17 (ಎ) ಅಡಿಯಲ್ಲಿ ವಿಚಾರಣೆ ನಡೆಸಲು ಅನುಮತಿ ನೀಡಿರುವ ರಾಜ್ಯಪಾಲರ ತೀರ್ಮಾನವನ್ನು ಖಂಡಿಸುವ ಬಗ್ಗೆ ಹಿರಿಯ ಶಾಸಕರಾದ ಆರ್.ವಿ.ದೇಶಪಾಂಡೆ ಅವರು ನಿರ್ಣಯಗಳನ್ನು ಸೂಚಿಸಿದರು. ತನ್ವೀರ್ ಸೇಠ್ ಅವರು ಇವುಗಳಿಗೆ ಅನುಮೋದನೆ ನೀಡಿದರು” ಎಂದು ತಿಳಿಸಿದರು.

“ಪಕ್ಷದ ಎಲ್ಲಾ ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದೇವೆ. ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಸ್ಪೀಕರ್ ಆದೇಶದಂತೆ ಆರು ಶಾಸಕರು ದೆಹಲಿಯಲ್ಲಿ ನಡೆಯುತ್ತಿರುವ ತರಬೇತಿಗೆ ತೆರಳಿದ್ದು, ಉಳಿದ ಎಲ್ಲಾ ಶಾಸಕರು ಈ ಸಭೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಕಾರ್ಯಕರ್ತರು ರಾಜ್ಯದೆಲ್ಲೆಡೆ ಪ್ರತಿಭಟನೆ ಮಾಡುತ್ತಿದ್ದಾರೆ. ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ” ಎಂದು ಹೇಳಿದರು.

“ಕರ್ನಾಟಕದ ಜನತೆ 136 ಸ್ಥಾನಗಳನ್ನು ನೀಡಿ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜನರ ಆಶೀರ್ವಾದದಿಂದ ರಚಿಸಲಾಗಿರುವ ಈ ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಲು ಪ್ರಯತ್ನಿಸುತ್ತಿವೆ. ಅವರು ಏನೇ ಪ್ರಯತ್ನಿಸಿದರು ಸರ್ಕಾರವನ್ನು ಜಗ್ಗಿಸಲು ಅವರಿಂದ ಸಾಧ್ಯವಿಲ್ಲ. ಇಡೀ ಕಾಂಗ್ರೆಸ್ ಶಾಸಕಾಂಗ ಪಕ್ಷ ಸಿದ್ದರಾಮಯ್ಯ ಅವರ ಪರವಾಗಿ ಇದೆ” ಎಂದರು.

“ಶುಕ್ರವಾರ (ಆ.23) ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಪಡೆದಿದ್ದು, ನಾನು ಹಾಗೂ ಮುಖ್ಯಮಂತ್ರಿಗಳು ರಾಜ್ಯದ ವಿದ್ಯಮಾನಗಳ ಬೆಳವಣಿಗೆ ಕುರಿತು ಚರ್ಚೆ ಮಾಡಲಿದ್ದೇವೆ. ರಾಜ್ಯಪಾಲರ ನಡವಳಿಕೆ ವಿರುದ್ಧ ನ್ಯಾಯಾಲಯದಲ್ಲೂ ಮೇಲ್ಮನವಿ ಸಲ್ಲಿಸಿದ್ದೇವೆ. ನಮಗೆ ನ್ಯಾಯಾಲಯದಲ್ಲಿ ನಂಬಿಕೆ ಇದೆ. ಕಾನೂನು ಹಾಗೂ ಸಂವಿಧಾನ ವಿರುದ್ಧವಾಗಿ ನೀಡಿರುವ ಆದೇಶದಿಂದ ನಮಗೆ ರಕ್ಷಣೆ ಸಿಗುವ ನಿರೀಕ್ಷೆಯಿದೆ. ಒಂದು ಭಾಷಣದ ನೆಪ ಇಟ್ಟುಕೊಂಡು ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಅವರು 6 ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ತಡೆಯುವ ಷಡ್ಯಂತ್ರ ರೂಪಿಸಲಾಗಿತ್ತು. ಈಗ ಅದೇ ರೀತಿ ನಮ್ಮ ಮುಖ್ಯಮಂತ್ರಿಗಳ ವಿರುದ್ಧವೂ ಸಂಚು ರೂಪಿಸಲಾಗುತ್ತಿದೆ” ಎಂದು ತಿಳಿಸಿದರು.

“ನಮ್ಮ ಮುಖ್ಯಮಂತ್ರಿ ಹಾಗೂ ಸರ್ಕಾರದ ವಿರುದ್ಧ ಸಂಚು ನಡೆಯುತ್ತಿದ್ದು, ನಮಗೆ ಜನಬೆಂಬಲವಿದೆ. ನಾವು ಇದಕ್ಕೆ ಜಗ್ಗುವುದಿಲ್ಲ. ಸಂವಿಧಾನ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿರುತ್ತೇವೆ” ಎಂದು ತಿಳಿಸಿದರು.

“ಇಂಡಿಯಾ ಮೈತ್ರಿಕೂಟ ಬೆಂಬಲ ಇದೆಯೇ ಎಂದು ಕೇಳಿದಾಗ, “ಇಂಡಿಯಾ ಮೈತ್ರಿಕೂಟ ಹುಟ್ಟಿದ್ದೇ ಇಲ್ಲಿ. ಇಲ್ಲಿ ಹುಟ್ಟಿ 234 ಸೀಟುಗಳನ್ನು ದೇಶದಲ್ಲಿ ಪಡೆದಿದೆ. ಸದ್ಯ ನಮ್ಮ ರಾಜ್ಯದಲ್ಲಿ ಒಗ್ಗಟ್ಟಿನಿಂದ ಹೋರಾಟ ಮಾಡಲಿದ್ದೇವೆ. ನಾಳೆ ದೆಹಲಿಗೆ ಭೇಟಿ ನೀಡಿ ಚರ್ಚೆ ಮಾಡಿದ ನಂತರ ಉಳಿದ ವಿಚಾರ ತಿಳಿಸುತ್ತೇವೆ” ಎಂದು ತಿಳಿಸಿದರು.

“ರಾಜ್ಯಪಾಲರ ನಿರ್ಣಯವನ್ನು ಸಚಿವ ಸಂಪುಟ ಸಭೆ ಖಂಡಿಸಿರುವುದು ಯಾವ ಸಂದೇಶ ರವಾನಿಸಲಿದೆ ಎಂದು ಕೇಳಿದಾಗ, “ಕರ್ನಾಟಕದ ಘನವೆತ್ತ ರಾಜ್ಯಪಾಲರಲ್ಲಿ ನಾವು ಮಾಡಿಕೊಳ್ಳುವ ಮನವಿ, ಆಗ್ರಹ ಎಂದರೆ, ರಾಜ್ಯಪಾಲರು ತಮ್ಮ ಅನುಮತಿಯನ್ನು ಹಿಂಪಡೆಯಬೇಕು. ಆಗ ಸಂವಿಧಾನ ರಕ್ಷಣೆ ಮಾಡಿ, ಕಾನೂನಿಗೆ ಗೌರವ ನೀಡಿದಂತಾಗುತ್ತದೆ. ಈ ವಿಚಾರವಾಗಿ ನಾವು ಕಾನೂನು ಹೋರಾಟಕ್ಕೂ ಮುಂದಾಗಿದ್ದು, ರಾಜ್ಯಪಾಲರು ಮುಖಭಂಗದಿಂದ ಪಾರಾಗಬೇಕಾದರೆ ಈಗಲೂ ತಮ್ಮ ನಿರ್ಣಯವನ್ನು ಹಿಂಪಡೆಯಬೇಕು” ಎಂದು ತಿಳಿಸಿದರು.

*ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ* *ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾ...
22/08/2024

*ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಸೂಚನೆ*

*ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದನೆ*

ಬೆಂಗಳೂರು ; ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧದಲ್ಲಿ ತಮ್ಮನ್ನು ಭೇಟಿ ಮಾಡಿದ ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಪೀಠದ ಪ್ರಸನ್ನಾನಂದ ಮಹಾಸ್ವಾಮಿಗಳು ಮತ್ತು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ಮತ್ತು ಸಮುದಾಯದ ಮುಖಂಡರ ನಿಯೋಗದ ಬೇಡಿಕೆಗೆ ಸಿಎಂ ಸ್ಪಂದಿಸಿ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಲ್ಮೀಕಿ ನಿಗಮಕ್ಕೆ ಈ ಹಿಂದೆ ನೀಡಲಾಗಿದ್ದ 84.63 ಕೋಟಿ ಅನುದಾನದಲ್ಲಿ 50 ಕೋಟಿಯನ್ನು ಎಸ್ ಐ ಟಿ ಅಧಿಕಾರಿಗಳು ಬ್ಯಾಂಕ್ ಖಾತೆಯಲ್ಲೇ ಫ್ರೀಜ್ ಮಾಡಿಟ್ಟಿದ್ದಾರೆ. ಪ್ರಕರಣದ ತನಿಖೆ ಮುಂದುವರೆದಿದ್ದು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗಿರುವ ಸುಮಾರು 30 ಕೋಟಿಯಷ್ಟು ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಪ್ರಯತ್ನ ಮುಂದುವರೆದಿದೆ. ಸದ್ಯದಲ್ಲೇ ಪೂರ್ತಿ ಹಣವನ್ನು ವಾಪಾಸ್ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ.

ಅಲ್ಲಿಯವರೆಗೂ ವಾಲ್ಮೀಕಿ ಸಮುದಾಯದ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ನಿಗಮಕ್ಕೆ ತಕ್ಷಣವೇ ಹೆಚ್ಚುವರಿ ಅನುದಾನ ಬಿಡುಗಡೆಗೆ ಸೂಚನೆ ನೀಡಿದರು.

ಪ್ರಕರಣ ಪೂರ್ತಿ ಇತ್ಯರ್ಥ ಆಗುವವರೆಗೂ ನಿಗಮದ ಮತ್ತು ಸಮುದಾಯದ ಕೆಲಸಗಳಿಗೆ ತೊಂದರೆ ಆಗಬಾರದು ಎನ್ನುವುದು ನಮ್ಮ ಆಧ್ಯತೆಯಾಗಿದೆ. ಹೀಗಾಗಿ ಹಣ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿಗಳು ನಿಯೋಗಕ್ಕೆ ಸ್ಪಷ್ಟಪಡಿಸಿದರು.

ಶಾಸಕರಾದ ಕಂಪ್ಲಿ ಗಣೇಶ್, ರಘುಮೂರ್ತಿ, ಕೋನರೆಡ್ಡಿ, ಸಮುದಾಯದ ಮುಖಂಡರಾದ ನಿವೃತ್ತ KAS ಅಧಿಕಾರಿ ಮೃತ್ಯುಂಜಯಪ್ಪ ಸೇರಿ ಸಮಾಜದ ಹಲವು ಹಿರಿಯರು ಉಪಸ್ಥಿತರಿದ್ದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚ...
22/08/2024

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸಿದ್ದರು.

ಆಗಸ್ಟ್‌ 6 ಮತ್ತು7.ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಜಿಲ್ಲಾ ಪ್ರವಾಸ
05/08/2024

ಆಗಸ್ಟ್‌ 6 ಮತ್ತು7.ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಜಿಲ್ಲಾ ಪ್ರವಾಸ

Address

Gadag
Gadag

Telephone

+917090963442

Website

Alerts

Be the first to know and let us send you an email when Vibhinna Baraha Kannada Daily posts news and promotions. Your email address will not be used for any other purpose, and you can unsubscribe at any time.

Share