18/06/2025
ಮಧುಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಕ್ಕಲಿಗರ ಸಂಘದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ "ಜನರೊಂದಿಗೆ ಜನತಾದಳ" ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಉದ್ಘಾಟಿಸಿ, ಕಾರ್ಯಕರ್ತ ಬಂಧುಗಳನ್ನು ಉದ್ದೇಶಿಸಿ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿದರು.
ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲು ಮನವಿ ಮಾಡಿದರು.ಮನವಿಗೆ ಸ್ಪಂದಿಸಿದ ಕಾರ್ಯಕರ್ತ ಬಂಧುಗಳು, ಮುಖಂಡರು ಬೂತ್ ಮಟ್ಟದಲ್ಲಿ ತಂಡಗಳನ್ನು ರಚಿಸಿಕೊಂಡು ಪಕ್ಷ ಸಂಘಟಿಸುವ ಭರವಸೆ ನೀಡಿದರು. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕುವ ಮೂಲಕ 2028 ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂಬ ಸಂಕಲ್ಪ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ ತಿಪ್ಪೇಸ್ವಾಮಿ ರವರು, ಮಾಜಿ ಶಾಸಕರಾದ ಶ್ರೀ ವೀರಭದ್ರಪ್ಪ ರವರು, ಶ್ರೀ ತಿಮ್ಮರಾಯಪ್ಪ ರವರು, ಜಿಲ್ಲಾಧ್ಯಕ್ಷರಾದ ಶ್ರೀ ಆರ್.ಸಿ ಆಂಜಿನಪ್ಪ ರವರು, ತಾಲ್ಲೂಕು ಅಧ್ಯಕ್ಷರಾದ ಶ್ರೀ ಬಸವರಾಜ್ ರವರು, ಮುಖಂಡರಾದ ಶ್ರೀ ಗೋವಿಂದರಾಜ್ , ಶ್ರೀ ಕೊಂಡವಾಡಿ ಚಂದ್ರಶೇಖರ್, ಶ್ರೀ ಗಂಗರಾಜು, ಶ್ರೀಮತಿ ಸಿದ್ದಗಂಗಮ್ಮ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
#ಜನರೊಂದಿಗೆಜನತಾದಳ