Kodagu Channel

Kodagu Channel Every thing about kodagu

25/08/2026
20/08/2026

19/08/2026

17/08/2026

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆಮಡಿಕೇರಿ ಆ.10:-ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ನಗರದ ಸರಕಾರಿ ಹಿರಿಯ ಪ್ರ...
11/08/2026

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಚಾಲನೆ

ಮಡಿಕೇರಿ ಆ.10:-ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು 1 ರಿಂದ 19 ವರ್ಷದೊಳಗಿನ ಮಕ್ಕಳಿಗೆ ಆಲ್‍ಬೆಂಡಜೋಲ್ ಮಾತ್ರೆ ನೀಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆ ತಡೆಯುವಲ್ಲಿ ಆಲ್‍ಬೆಂಡಜೋಲ್ ಮಾತ್ರೆ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಮಾತ್ರೆ ಕೊಡಿಸಬೇಕು ಎಂದರು. ದೇಶದಾಧ್ಯಂತ ಆಗಸ್ಟ್ 10 ರಂದು "ರಾಷ್ಟ್ರೀಯ ಜಂತುಹುಳ ನಿವಾರಣಾ ಕಾರ್ಯಕ್ರಮ" ಹಾಗೂ ಆಗಸ್ಟ್ 17 ರಂದು ಮಾಪ್ ಆಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂಜಿ ಮಾತ್ರೆ ನೀಡಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ವಿವರಿಸಿದರು.

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವು 10 ಫೆಬ್ರವರಿ 2015ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. 2018 ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು 34 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ 19 ನೇ ಸುತ್ತಿನ ಕಾರ್ಯಕ್ರಮವಾಗಿರುತ್ತದೆ ಎಂದು ತಿಳಿಸಿದರು.

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ-ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆ ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆ ನೀಡಬೇಕಿದೆ ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೊರೇಷನ್ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಆರ್‍ಸಿಎಚ್ ಅಧಿಕಾರಿ ಡಾ.ಸನತ್ ಕುಮಾರ್ ಅವರು ಮಾತನಾಡಿ ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ ನಮ್ಮ ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,20,874 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 23,634, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 955, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 80,506 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 9135, ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 3700, ಐಟಿಐ ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 473 ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು 2471 ಇರುತ್ತಾರೆ ಎಂದು ಮಾಹಿತಿ ನೀಡಿದರು. "ರಾಷ್ಟ್ರೀಯ ಜಂತು ಹುಳು ನಿವಾರಣಾ ಕಾರ್ಯಕ್ರಮ" ಹಾಗೂ ಆಗಸ್ಟ್ 17 ರಂದು ನಡೆಯುವ ಮಾಪ್‍ಆಪ್ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳು ಕೈಜೋಡಿಸಿ ಕಾರ್ಯಕ್ರಮ ಯಶಸ್ವಿಯಾಗಿ ಅನುಷ್ಠಾನ ಮತ್ತು ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಆಲ್‍ಬೆಂಡಝಲ್ ಮಾತ್ರೆ ತೆಗೆದುಕೊಳ್ಳಲು ಪ್ರೋತ್ಸಾಹ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.

ಶಾಲಾ ಶಿಕ್ಷಣ ಇಲಾಖೆ ಡಿವೈಪಿಸಿ ಕೃಷ್ಣಪ್ಪ ಅವರು ಮಾತನಾಡಿದರು. ತಾಲ್ಲೂಕು ವೈದ್ಯಾಧಿಕಾರಿ ಸುನಿಲ್, ಆರೋಗ್ಯ ಶಿಕ್ಷಣಾಧಿಕಾರಿ ಶಾಂತಿ, ಪಾಲಾಕ್ಷ, ದೇವರಾಜು, ದಿವಾಕರ, ಶಾಲೆಯ ಮುಖ್ಯೋಪಾಧ್ಯಯರು ಇತರರು ಇದ್ದರು.

ಮಡಿಕೇರಿ: ಕಸಾಪ, ಲೇಖಕರ ಬಳಗದ ವತಿಯಿಂದ ಆ.14 ರಂದು ಎಸ್ ಜಾನಕಿ ಅವರ ಗೀತ ನಮನ ಕಾರ್ಯಕ್ರಮಮಡಿಕೇರಿ. ಆ.10: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿ...
11/08/2026

ಮಡಿಕೇರಿ: ಕಸಾಪ, ಲೇಖಕರ ಬಳಗದ ವತಿಯಿಂದ ಆ.14 ರಂದು ಎಸ್ ಜಾನಕಿ ಅವರ ಗೀತ ನಮನ ಕಾರ್ಯಕ್ರಮ

ಮಡಿಕೇರಿ. ಆ.10: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ, ಕೊಡಗು ಪತ್ರಿಕಾ ಭವನ ಟ್ರಸ್ಟ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆ.14 ರಂದು Tourist Destinations

ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ದಿ. ಎಸ್ ಜಾನಕಿ ಅಮ್ಮ ಅವರಿಗೆ ಪುಷ್ಪ ನಮನ, ನುಡಿ ನಮನ, ಗಾನ ನಮನ ನಡೆಯಲಿದೆ.

ಜಿಲ್ಲೆಯ ಗಾಯಕರಿಂದ ದಿ.ಎಸ್ ಜಾನಕಿ ಅವರ ಗೀತೆಗಳನ್ನು ಹಾಡುವ ಮೂಲಕ ಗಾನ ನಮನ ಕಾರ್ಯಕ್ರಮವನ್ನು ಮಡಿಕೇರಿಯ ಕೊಡಗು ಪತ್ರಿಕಾ ಭವನದ ಸಭಾಂಗಣದಲ್ಲಿ ಆ.14 ರಂದು ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಏರ್ಪಡಿಸಲಾಗಿದೆ.

ಕಾರ್ಯಕಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಿ. ಕೇಶವ ಕಾಮತ್ ವಹಿಸಲಿದ್ದು, ಕಾರ್ಯಕಮದ ಉದ್ಘಾಟನೆಯನ್ನು ಗಾಯಕರು, ಶಕ್ತಿ ದಿನಪತ್ರಿಕೆಯ ಸಂಪಾದಕರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿ ಜಿ. ಚಿದ್ವಿಲಾಸ್ ನೆರವೇರಿಸಲಿದ್ದಾರೆ. ಕಾರ್ಯಕಮದಲ್ಲಿ ಕೊಡಗು ಪತ್ರಕರ್ತರ ಸಂಘ ಅಧ್ಯಕ್ಷರು ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಟ್ರಸ್ಟಿ ಹೆಚ್.ಟಿ. ಅನಿಲ್ ನುಡಿ ನಮನ ಸಲ್ಲಿಸಲಿದ್ದಾರೆ. ಕಾರ್ಯಕಮದ ಕುರಿತು ಪ್ರಾಸ್ತಾವಿಕವಾಗಿ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷರಾದ ಟಿ.ಜಿ. ಪ್ರೇಮ್ ಕುಮಾರ್ ಮಾತನಾಡಲಿದ್ದಾರೆ. Tourist Destinations

ಜಿಲ್ಲೆಯ ಹಲವಾರು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಸಹಮತ ವೇದಿಕೆ, ಕೊಡಗು ಜಿಲ್ಲೆ, ಕೊಡಗು ಪತ್ರಕರ್ತರ ಸಂಘ, ಮಡಿಕೇರಿಯ ಲಯನ್ಸ್ ಸಂಸ್ಥೆ, ಕೊಡಗು ಜಿಲ್ಲಾ ಮಹಿಳಾ ಬರಹಗಾರ ಸಂಘ, ಕೊಡಗು ಜಾನಪದ ಪರಿಷತ್ತು, ಸಮರ್ಥ ಕನ್ನಡಿಗರು, ಕೊಡಗು ಜಿಲ್ಲಾ ಅಹಿಂದ ಒಕ್ಕೂಟ, ರೋಟರಿ ವುಡ್ಸ್ ಮಡಿಕೇರಿ, ಗೌಡ ಮಹಿಳಾ ಒಕ್ಕೂಟ. ಚೇರಂಬಾಣೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಕೊಡಗು, ಕ್ರೈಸ್ತ ಸಹಕಾರ ಸಂಘ ಮಡಿಕೇರಿ, ಕೊಡಗು ಜಿಲ್ಲಾ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕೊಡಗು ಗೌಡ ವಿದ್ಯಾ ಸಂಸ್ಥೆ, ಕೊಡಗು ಜಿಲ್ಲಾ ಮಹಿಳಾ ಸಹಕಾರ ಬ್ಯಾಂಕ್ ಮಡಿಕೇರಿ, ಮತ್ತು ಚೌಡೇಶ್ವರಿ ದೇವಾಂಗ ಮಹಿಳಾ ಸಮಾಜದ ಸಹಯೋಗದೊಂದಿಗೆ ಪುಷ್ಪ ನಮನ, ನುಡಿ ನಮನ ಮತು ಗಾನ ನಮನ ಕಾರ್ಯಕ್ರಮ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶ್ರೀಮತಿ ರೇವತಿ ರಮೇಶ್ ಮತ್ತು ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಗೌರವ ಕಾರ್ಯದರ್ಶಿ ಶ್ರೀಮತಿ ಭಾರತಿ ರಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮಮಡಿಕೇರಿ ಆ.10:-ಜನತಾ ಕಾಲೋನಿಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಎದೆಹಾಲ...
11/08/2026

ಜನತಾ ಕಾಲೋನಿಯಲ್ಲಿ ಎದೆಹಾಲಿನ ಮಹತ್ವ ಕುರಿತು ಜಾಗೃತಿ ಕಾರ್ಯಕ್ರಮ

ಮಡಿಕೇರಿ ಆ.10:-ಜನತಾ ಕಾಲೋನಿಯಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಎದೆಹಾಲಿನ ಮಹತ್ವ ಮತ್ತು ತಾಯಿ-ಮಗುವಿನ ಆರೋಗ್ಯದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಆರು ತಿಂಗಳವರೆಗೆ ಮಗುವಿಗೆ ತಾಯಿಯ ಎದೆಹಾಲನ್ನೇ ನೀಡುವ ಮಹತ್ವ, ಆರು ತಿಂಗಳ ನಂತರ ನೀಡಬೇಕಾದ ಮೇಲು ಆಹಾರ, ಸಮಯಕ್ಕೆ ಸರಿಯಾಗಿ ಚುಚ್ಚುಮದ್ದು ಹಾಕಿಸುವುದು ಹಾಗೂ ಹೆರಿಗೆಗಳ ನಡುವೆ ಸೂಕ್ತ ಅಂತರ ಕಾಯ್ದುಕೊಳ್ಳುವ ಕುರಿತು ಮಾಹಿತಿ ನೀಡಲಾಯಿತು. ಅಲ್ಲದೆ, ಮಕ್ಕಳಲ್ಲಿ ಜಂತುಹುಳು ನಿವಾರಣೆಗಾಗಿ ನೀಡಲಾಗುವ ಅಲ್ಬೆಂಡಜೋಲ್ ಮಾತ್ರೆಯ ಬಳಕೆ, ಭಾಗ್ಯಲಕ್ಷ್ಮಿ ಯೋಜನೆ ಹಾಗೂ ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಸೇರಿದಂತೆ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು.

ಕಾರುಗುಂದ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಮಡಿಕೇರಿ:ಮೇಲ್ಛಾವಣಿ ಕುಸಿದು ಹಾನಿಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಭಾಗಮಂಡಲ ಕಾರುಗುಂದ ಸರ್ಕಾ...
11/08/2026

ಕಾರುಗುಂದ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತ

ಮಡಿಕೇರಿ:ಮೇಲ್ಛಾವಣಿ ಕುಸಿದು ಹಾನಿಗೊಂಡು ಅಪಾಯಕಾರಿ ಸ್ಥಿತಿಯಲ್ಲಿರುವ ಭಾಗಮಂಡಲ ಕಾರುಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು. ಸ್ಥಳದಲ್ಲಿ ಇಂಜಿನಿಯರ್, ಪಿಡಿಓ, ಶಾಲೆಯ ಎಸ್.ಡಿ. ಎಂ.ಸಿ. ಸದಸ್ಯರುಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಕಂದಾಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು. ಈ ಸಂದರ್ಭ ಶಾಲೆಯ ಬಾಕಿ ಉಳಿದ ಕೊಠಡಿಗಳಿಗೆ ಮಳೆಯಿಂದ ಹಾನಿಯಾಗದಂತೆ ಮುಂಜಾಗ್ರತೆ ಕ್ರಮವಹಿಸುವಂತೆ ಸೂಚಿಸಲಾಯಿತು.

ನೇರುಗಳಲೆ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಸೂಟ್ ವಿತರಣೆಸೋಮವಾರಪೇಟೆ: ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ವಿದ...
11/08/2026

ನೇರುಗಳಲೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಸೂಟ್ ವಿತರಣೆ

ಸೋಮವಾರಪೇಟೆ: ತಾಲೂಕಿನ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಮಾಜಿ ಸೈನಿಕರಾದ ಶ್ರೀಯುತ ಗಣೇಶ್ ಅವರು ಉಚಿತವಾಗಿ ಟ್ರ್ಯಾಕ್ ಸೂಟ್ ವಿತರಿಸಿದರು.

ಟ್ರ್ಯಾಕ್ ಸೂಟ್ ವಿತರಣೆ ಮಾಡಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಂಸ್ಕಾರಯುತ ಹಾಗೂ ಮೌಲ್ಯಯುತ ಶಿಕ್ಷಣ ಪಡೆದು ಭವಿಷ್ಯದಲ್ಲಿ ಸತ್ಪ್ರಜೆಗಳಾಗಿ ಬಾಳಬೇಕು. ನಿಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಬಹುದೊಡ್ಡ ಜವಾಬ್ದಾರಿ ನಿಮ್ಮ ಹೆಗಲ ಮೇಲೆಯೇ ಇದೆ. ಎಲ್ಲರೂ ತಾವು ಕಲಿತ ಶಾಲೆಗೆ ಹಾಗೂ ತಮ್ಮ ಗ್ರಾಮಕ್ಕೆ ಹೆಸರು ತಂದುಕೊಡುವ ಕಾರ್ಯವನ್ನು ಮಾಡಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಎಸ್‌ಡಿಎಂಸಿ ಅಧ್ಯಕ್ಷರಾದ ಶ್ರೀ ರವಿಕುಮಾರ್ ಕೆ.ಎನ್ ಅವರು ವಿದ್ಯಾರ್ಥಿಗಳಿಗೆ ಗುರುತಿನ ಪತ್ರವನ್ನು ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವದಾಸು, ಕೆ.ಎನ್. ಪಾಪಯ್ಯ, ಕಾರ್ಯದರ್ಶಿ ವಿನಯ್ ಸಂಭ್ರಮ್, ಖಜಾಂಚಿ ತಿಮ್ಮಯ್ಯ, ನಿರ್ದೇಶಕರಾದ ಅಶ್ವತ್ ಸಿ.ಸಿ, ಕಿರಣ್, ಶ್ರೀಮತಿ ಪುಷ್ಪಾ, ಎಸ್‌ಡಿಎಂಸಿ ಅಧ್ಯಕ್ಷ ಗಂಗಾಧರ, ಅಲ್ಫೋನ್ಸೋ ಲೋಬೊ, ಕುಮಾರ್, ಸೀನ, ಯಶೋದ, ಲತಾ, ಸೀಮಾ ಲೂಯಿಸ್, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ರಾಜೇಶ್ವರಿ ಎಚ್.ಎಸ್, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸೋಮವಾರಪೇಟೆ ತಾಲೂಕು ಅಧ್ಯಕ್ಷ ರತ್ನಕುಮಾರ ಕೆ.ಆರ್ ಹಾಗೂ ಇನ್ನಿತರ ಶಿಕ್ಷಕರು ಉಪಸ್ಥಿತರಿದ್ದರು.

Address

Race Course Road, Near Press Club
Madikeri
571201

Alerts

Be the first to know and let us send you an email when Kodagu Channel posts news and promotions. Your email address will not be used for any other purpose, and you can unsubscribe at any time.

Contact The Business

Send a message to Kodagu Channel:

Shortcuts

Share