Diamond kannada tv

Diamond kannada tv 23.03.2018

14/11/2023
14/11/2023

ಇಂದು ಕುವೆಂಪು ಇಲ್ಲವಾದ ದಿನ...
____________
1931 ರಲ್ಲಿ ಕುವೆಂಪುರವರು ಶ್ರೀರಂಗಪಟ್ಟಣದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ 'ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ' ಎಂಬ ಉಪನ್ಯಾಸ ನೀಡಿದ್ದರು. ಈ ಉಪನ್ಯಾಸ ಕುರಿತು ದೇವುಡು ನರಸಿಂಹಶಾಸ್ತ್ರಿಗಳು ಸರ್ಕಾರಕ್ಕೆ ದೂರು ಸಲ್ಲಿಸಿದರು. ಕುವೆಂಪು ಒಬ್ಬ ಸರ್ಕಾರಿ ನೌಕರನಾಗಿದ್ದು (ಆಗ ಕುವೆಂಪು ಉಪನ್ಯಾಸಕರಾಗಿದ್ದರು) ಯುವಜನತೆಯನ್ನು ಧರ್ಮದ ವಿಷಯದಲ್ಲಿ ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂಬುದು ದೇವುಡು ಆರೋಪವಾಗಿತ್ತು. ಇಂತಹ ಅವಕಾಶಕ್ಕೆ ಕಾಯುತ್ತಿದ್ದ ಅನೇಕರು “ಗರಿಕೆ ಹುಲ್ಲುಗಳು ಗೂಟವಾದವು” ಎಂಬಂತೆ ಕುವೆಂಪು ಮೇಲೆ ತಿರುಗಿಬಿದ್ದರು. ಆದರೆ, ಕುವೆಂಪುರವರು ತಮ್ಮ ವಿರುದ್ಧ ಕೇಳಿ ಬಂದ ಯಾವ ಆರೋಪ, ಟೀಕೆ ಟಿಪ್ಪಣಿ ಮತ್ತು ಬೈಗುಳಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಅಂತಿಮವಾಗಿ ಸರ್ಕಾರವು ಟಿ.ಎಸ್. ವೆಂಕಣ್ಣಯವರನ್ನು ಈ ವಿಷಯ ಕುರಿತಂತೆ ತನಿಖೆಗೆ ನೇಮಕ ಮಾಡಿ, ವರದಿ ಸಲ್ಲಿಸುವಂತೆ ಸೂಚಿಸಿತು. ಸರ್ಕಾರಕ್ಕೆ ಕುವೆಂಪು ಮಾಡಿದ್ದ ಉಪನ್ಯಾಸ ಕುರಿತು ಒಂದು ಸಾಲಿನ ಅಥವಾ ಒಂದು ವಾಕ್ಯದ ವರದಿಯನ್ನು ವೆಂಕಣ್ಣಯ್ಯ ಸಲ್ಲಿಸಿದರು. ಅವರ ವರದಿಯ ಸಾರಾಂಶ ಹೀಗಿತ್ತು. "ನಾನು ನನ್ನ ಮಗನಿಗೆ ಇದಕ್ಕಿಂತ ಒಳ್ಳೆಯ ಉಪದೇಶ ನೀಡಲಾರೆ..!”

ನಂತರ ಗಲಾಟೆ ತಣ್ಣಗಾಯಿತು.

ವಿವಾದವೆಲ್ಲವೂ ಮುಗಿದ ನಂತರ ಕುವೆಂಪು ಶಿಷ್ಯರು ಒಮ್ಮೆ ಕುವೆಂಪು ಅವರನ್ನು ಕೇಳಿದರು. "ಸಾರ್ ನೀವು ಇಷ್ಟೆಲ್ಲಾ ಗಲಾಟೆಯಾದರೂ ಸಹ ಏಕೆ ಮೌನವಾಗಿದ್ದಿರಿ?" ಇದಕ್ಕೆ ಕುವೆಂಪು ನೀಡಿದ ಉತ್ತರ ಹೀಗಿತ್ತು:

"ನೋಡ್ರಯ್ಯಾ, ನನ್ನ ವಿರುದ್ಧ ಸೆಣಸಾಡಲಿಕ್ಕೆ ಅಥವಾ ಕುಸ್ತಿಯಾಡಲಿಕ್ಕೆ ಬರುವ ವ್ಯಕ್ತಿ ಯಾವ ಜಾತಿಯವನು, ಅವನ ವಯಸ್ಸೆಷ್ಟು, ಅವನು ಪಂಡಿತನೆ? ಪುರುಷೋತ್ತಮನೆ? ಇವು ನನಗೆ ಮುಖ್ಯವಲ್ಲ. ನಾನು ಅಖಾಡಕ್ಕೆ ಇಳಿಯಬೇಕಾದರೆ, ನನ್ನ ಎದುರಾಳಿಗೆ ಕನಿಷ್ಟ ಸೊಂಟದ ಮೇಲೆ ಒಂದು ಲಂಗೋಟಿ ಇರಬೇಕು. ಅದೇ ಇಲ್ಲದೆ ಬೆತ್ತಲೆ ನಿಂತು ಕುಸ್ತಿಗೆ ಕರೆಯುವನ ಜೊತೆ ನಾನು ಹೋರಾಡಲಾರೆ..!"

ಅಂದು ಕುವೆಂಪು ನೀಡಿದ್ದ ಹೇಳಿಕೆಯಲ್ಲಿ ಅಂತಹ ಘನತೆಯಿತ್ತು. ಕುವೆಂಪುರವರ ಪ್ರಖರ ವೈಚಾರಿಕತೆಯ ಜೊತೆಗೆ ಇಂತಹ ವಿವೇಕ ಮತ್ತು ತಾಳ್ಮೆ ಮನನೀಯ. ಡೈಮಂಡ್ ಕನ್ನಡ ಟಿವಿ ಮಂಡ್ಯ 🙏❤️❤️❤️🙏🙏

05/10/2023

DIAMOND KANNADA TV NEWS 05.09.2023.ಕರ್ನಾಟಕ ರಾಜ್ಯ ರೈತ ಸಂಘ ರೈತಬಣದ ಕೆ ಆರ್ ಪೇಟೆ ತಾಲೂಕು ಘಟಕ ಉದ್ಘಾಟನೆ

Address

#2978 #1cross Gandinagar 100fit Rooad Behind Realince Trends Back Side Mandya
Mandya
571401

Alerts

Be the first to know and let us send you an email when Diamond kannada tv posts news and promotions. Your email address will not be used for any other purpose, and you can unsubscribe at any time.

Contact The Business

Send a message to Diamond kannada tv:

Share

Category