News Kannada

News Kannada ರಾಜಕೀಯ, ಕ್ರೀಡೆ, ಮನರಂಜನೆ, ತಂತ್ರಜ್ಞಾನ, ಆರೋಗ್ಯ ಮತ್ತು ಇನ್ನೂ ಹೆಚ್ಚಿನವುಗಳ ಇತ್ತೀಚಿನ ಸುದ್ದಿಗಳಿಗಾಗಿ Since then there has been no looking back. Passion rules!

We at newskarnataka.com and its sibling newskannada.com, proudly proclaim that the news portals were born out of passion and not out of commercial interest
ಕನ್ನಡ ಬರೀ ಕರ್ನಾಟಕದ ಭಾಷೆಯಲ್ಲ. ವಿಶ್ವವೇ ಕನ್ನಡದಲ್ಲಿಯೇ ಮಾತಿಗಿಳಿದು ಬಿಡುತ್ತದೆ. ತಾಯಿ ಕಲಿಸಿಕೊಟ್ಟ ಮೊದಲ ಅಕ್ಷರ 'ಅ'. ಮತ್ತೆ ತಾಯಿ ಭಾಷೆಯಲ್ಲಿಯೇ ಓದೋಣ, ಮಾತನಾಡೋಣ.
ಬನ್ನಿ ನಮ್ಮ ಜತೆ ಕೈ ಜೋಡಿಸಿ...

ಸ್ಪರ್ಧಾತ್ಮಕ ಯುಗದಲ್ಲಿ ಪತ್ರಿಕೋಧ್ಯಮ ಕೇವಲ ವ್ಯಾಪಾರ ವೃತ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಮಾಜಿಕ ಕಳಕಳಿಯನ್ನೊಂದೇ ದ್ಯೇಯವಾಗಿಟ್ಟುಕೊಂಡು ಹುಟ್ಟಿದೆ ನ್ಯೂಸ ಕನ್ನಡ. Humble start
With the vision of 'Educate, Empower Enlighten, and Enable positive changes', newskarnataka.com, was started in May 2012 in Kannada. However, the popular response to the website and the quest for diversity prompted the team to start an English news portal in March 17, 2013, thus bringing into existence two exclusive portals -newskarnataka.com, catering to English readers and newskannada.com, dedicated to Kannada reader base. Today, from a humble beginning, we contribute in a small but powerful way towards promoting positive and ethical journalism. Unlike many media houses, which are profit and digits-driven, we at newskarnataka.com and its sibling newskannada.com, proudly proclaim that the news portals were born out of passion and not out of commercial interest. They are undoubtedly the first of its kind crowd funded media undertakings, where it’s not the ‘owner’s’ interest that is paramount, but that of its readers, writers, contributors, employees and all who connect with it.It has spawned and supports our trademark‘truth endures’journalism where our journalists say what they want to say, honestly and without fear or favor.

07/08/2026

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ದುಷ್ಕಮಿಗಳ ಗುಂಡಿಗೆ ಬ*ಲಿ: ಕೃತ್ಯದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಉಡುಪಿ: ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55) ಮೃ*ಪಟ್ಟಿದ್ದಾರೆ.

ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಸಮೀಪ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಅವರ ಮೇಲೆ ಅತಿ ಸಮೀಪದಿಂದ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗುಂಡಿನ ದಾಳಿಯಲ್ಲಿ ಒಂದು ಗು*ಡು ಹಣೆಗೆ ಹಾಗೂ ಎರಡು ಗು*ಡುಗಳು ಕೈಗೆ ತಗುಲಿವೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃ*ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃ*ದೇಹವನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು, ಬಳಿಕ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಪಡುಬಿದ್ರೆ ಹಾಗೂ ಶಿರ್ವ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

07/08/2026

ರಾಜ್ಯದ ಎಲ್ಲ ಹೋಟೆಲ್‌ಗಳಲ್ಲೂ ಆಹಾರದ ಗುಣಮಟ್ಟ ಪರಿಶೀಲನೆ: ಸಚಿವ ಯು.ಟಿ. ಖಾದರ್

ಉಡುಪಿ: ಆಹಾರ ಸೇವನೆಯಲ್ಲಿ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಪ್ರತಿಯೊಂದು ಹೋಟೆಲ್‌ನಲ್ಲಿಯೂ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯವನ್ನು ಮೇಲ್ಮಟ್ಟದಿಂದಲೇ ಆರಂಭಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಹೇಳಿದರು.
ಕಾಪುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಎಲ್ಲ ಪಂಚತಾರಾ ಹೋಟೆಲ್‌ಗಳಿಗೆ ನಮ್ಮ ತಂಡ ಈಗಾಗಲೇ ತೆರಳಿ ಪರಿಶೀಲನೆ ನಡೆಸಿದೆ. ಮುಂದಿನ ದಿನಗಳಲ್ಲಿ ಎಲ್ಲ ಹೋಟೆಲ್‌ಗಳಲ್ಲಿಯೂ ತಪಾಸಣೆ ನಡೆಯಲಿದೆ. ಪಂಚತಾರಾ ಹೋಟೆಲ್‌ಗಳಲ್ಲಿಯೇ ಕ್ರಮ ಕೈಗೊಂಡರೆ, ಕೆಳಹಂತದ ಹೋಟೆಲ್‌ಗಳೂ ಎಚ್ಚೆತ್ತುಕೊಳ್ಳುತ್ತವೆ. ದೊಡ್ಡ ಹೋಟೆಲ್‌ಗಳನ್ನೇ ಬಿಡುತ್ತಿಲ್ಲ ಎಂದಾದರೆ ನಮ್ಮನ್ನೂ ಬಿಡುವುದಿಲ್ಲ ಎಂಬ ಭಾವನೆ ಅವರಲ್ಲಿ ಮೂಡಬೇಕು’ ಎಂದು ಹೇಳಿದರು.
ಸಣ್ಣ ಗೂಡಂಗಡಿ ಅಥವಾ ಅಂಗಡಿಗಳ ಮೇಲೆ ಮಾತ್ರ ತಪಾಸಣೆ ನಡೆಸುವುದರಿಂದ ಹೆಚ್ಚಿನ ಪ್ರಯೋಜನವಿಲ್ಲ. ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆಹಾರ ದೊರೆಯುವಂತೆ ಮಾಡುವುದು ಇಲಾಖೆಯ ಉದ್ದೇಶ ಎಂದು ಸಚಿವರು ತಿಳಿಸಿದರು.
ಕೆಎಫ್‌ಸಿ, ಮ್ಯಾಕ್‌ಡೊನಾಲ್ಡ್ಸ್ ಸೇರಿದಂತೆ ದೊಡ್ಡ ಆಹಾರ ಮಳಿಗೆಗಳಲ್ಲಿಯೂ ಆಹಾರದ ಮೂಲ ಮತ್ತು ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಬೇಕು. ಚಿಕನ್‌ ಎಲ್ಲಿಂದ ಬರುತ್ತದೆ, ಎಷ್ಟು ದಿನ ಸಂಗ್ರಹಿಸಲಾಗುತ್ತದೆ, ಫ್ರೋಜನ್ ಆಹಾರವೇ, ಅದರಲ್ಲಿ ಬಣ್ಣ ಅಥವಾ ರಾಸಾಯನಿಕ ಬಳಸಲಾಗಿದೆಯೇ, ಬಣ್ಣವನ್ನು ಎಷ್ಟು ದಿನದಿಂದ ಸಂಗ್ರಹಿಸಲಾಗಿದೆ ಎಂಬುದನ್ನೂ ಪರಿಶೀಲಿಸಬೇಕು ಎಂದರು.
ಆಹಾರದಲ್ಲಿ ಬಳಸುವ ಪದಾರ್ಥಗಳ ಕುರಿತು ಗ್ರಾಹಕರಿಗೆ ಅಗತ್ಯ ಮಾಹಿತಿ ನೀಡುವ ಜವಾಬ್ದಾರಿ ಇಲಾಖೆಯದ್ದಾಗಿದೆ. ಮಾಹಿತಿ ಪಡೆದ ಬಳಿಕ ಆಹಾರ ಸೇವಿಸಬೇಕೇ ಬೇಡವೇ ಎಂಬುದನ್ನು ಜನರೇ ನಿರ್ಧರಿಸಬೇಕು. ‘ಜನರು ಅದನ್ನೇ ತಿನ್ನುತ್ತೇವೆ ಎಂದು ನಿರ್ಧರಿಸಿದರೆ, ನಾವು ಏನು ಮಾಡಲು ಸಾಧ್ಯವಿಲ್ಲ’ ಎಂದು ಯು.ಟಿ. ಖಾದರ್ ಹೇಳಿದರು.

07/08/2026

ಉಡುಪಿ: ಜಿಲ್ಲೆಯ ಮುದರಂಗಡಿಯಲ್ಲಿ ಶುಕ್ರವಾರ ಹಾಡಹಗಲೇ ನಡೆದ ಗುಂಡಿನ ದಾಳಿಯಲ್ಲಿ ಕಾಂಗ್ರೆಸ್ ಮುಖಂಡ, ಮುದರಂಗಡಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಉದ್ಯಮಿ ಪ್ರಿನ್ಸ್ ಪಾಯಿಂಟ್ ಡೇವಿಡ್ ಡಿಸೋಜಾ (55) ಮೃ*ಪಟ್ಟಿದ್ದಾರೆ.

ಮುದರಂಗಡಿ ಪೇಟೆಯಲ್ಲಿರುವ ಡೇವಿಡ್ ಡಿಸೋಜಾ ಅವರ ಕಚೇರಿ ಸಮೀಪ ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಡೇವಿಡ್ ಅವರ ಮೇಲೆ ಅತಿ ಸಮೀಪದಿಂದ ಮೂರು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಗುಂಡಿನ ದಾಳಿಯಲ್ಲಿ ಒಂದು ಗು*ಡು ಹಣೆಗೆ ಹಾಗೂ ಎರಡು ಗು*ಡುಗಳು ಕೈಗೆ ತಗುಲಿವೆ. ಗಂಭೀರವಾಗಿ ಗಾಯಗೊಂಡಿದ್ದ ಡೇವಿಡ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃ*ಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೃ*ದೇಹವನ್ನು ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದು, ಬಳಿಕ ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿದು ಪಡುಬಿದ್ರೆ ಹಾಗೂ ಶಿರ್ವ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

07/08/2026

ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃ*

ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಹೆಬ್ರಿಯಿಂದ ಬ್ರಹ್ಮಾವರಕ್ಕೆ ತೆರಳುವ ಮಾರ್ಗದ ಹುತ್ತುರ್ಕೆ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಮೃ*ತರನ್ನು ಸದಾನಂದ ನಾಯಕ್(55) ಎಂದು ಗುರುತಿಸಲಾಗಿದೆ.

ಮರ ಬಿದ್ದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಮೃ*ತದೇಹ ಕಾರಿನೊಳಗೆ ಸಿಲುಕಿಕೊಂಡಿದೆ. ಘಟನೆ ಬಳಿಕ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಿದ್ದು, ಕಾರಿನ ಮೇಲಿದ್ದ ಮರವನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು.
ಮರ ತೆರವುಗೊಳಿಸಿದ ಬಳಿಕವಷ್ಟೇ ಮೃತದೇಹವನ್ನು ಕಾರಿನಿಂದ ಹೊರತೆಗೆಯಲು ಸಾಧ್ಯವಾಗಲಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ಈ ಮಾರ್ಗದಲ್ಲಿ ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಡೇವಿಡ್‌ ಡಿಸೋಜರನ್ನು ಗುಂಡಿಕ್ಕಿ ಹ* ಗೈದ ದುಷ್ಕರ್ಮಿಗಳು ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್...
07/08/2026

ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ, ಗುತ್ತಿಗೆದಾರ ಡೇವಿಡ್‌ ಡಿಸೋಜರನ್ನು ಗುಂಡಿಕ್ಕಿ ಹ* ಗೈದ ದುಷ್ಕರ್ಮಿಗಳು

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ಅವರನ್ನು ದುಷ್ಕಮಿಗಳು ಗುಂಡಿಕ್ಕಿ ಹ*ಗೈದಿರುವ ಬಗ್ಗೆ ವರದಿಯಾಗಿದೆ.
ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃ*ತಪಟ್ಟಿರುವುದಾಗಿ ತಿಳಿದುಬಂದಿದೆ.
ಶೂಟೌಟ್‌ಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ವೈಯಕ್ತಿಕ ದ್ವೇಷ ಅಥವಾ ಇತರ ಕಾರಣಗಳ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

07/08/2026

ಬೈಂದೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಲು ಆಗ್ರಹ

ಉಡುಪಿ: ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸೇರ್ಪಡೆಗೊಂಡಿರುವ ಎಂಟು ಗ್ರಾಮಗಳನ್ನು ಕೈಬಿಟ್ಟು, ಗ್ರಾಮೀಣ ಪ್ರದೇಶಗಳಿಗೆ ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ರೈತರು ನಡೆಸುತ್ತಿರುವ ಒಂದು ವರ್ಷದ ಹೋರಾಟ ಶುಕ್ರವಾರ ತೀವ್ರ ಸ್ವರೂಪ ಪಡೆದುಕೊಂಡಿತು.
ರೈತ ಮುಖಂಡ ದೀಪಕ್ ಕುಮಾರ್ ಶೆಟ್ಟಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು, ಮಹಿಳೆಯರು ಹಾಗೂ ಮಕ್ಕಳು ಭಾಗವಹಿಸಿದ್ದರು. ಸೇನೇಶ್ವರ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿವರೆಗೆ ಸಾಗಿತು.
ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಗ್ರಾಮಗಳನ್ನು ಸೇರ್ಪಡೆಗೊಳಿಸಿರುವುದರಿಂದ ಗ್ರಾಮೀಣ ಜನರಿಗೆ ತೊಂದರೆಯಾಗಲಿದೆ. ಆದ್ದರಿಂದ ಪ್ರಮುಖ ನಾಡ ಪಂಚಾಯಿತಿ ಸೇರಿದಂತೆ ಎಂಟು ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕಳೆದ ಒಂದು ವರ್ಷದಿಂದ ವಿವಿಧ ಹಂತಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತರು, ಶುಕ್ರವಾರ ಹಸಿರು ಬಾವುಟ ಬೀಸಿ ಘೋಷಣೆಗಳನ್ನು ಕೂಗಿದರು. ಬಳಿಕ ರಸ್ತೆ ತಡೆ ನಡೆಸಿ ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು.
ಸ್ಥಳೀಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರೂ ರೈತರು ಪ್ರತಿಭಟನೆ ಹಿಂಪಡೆಯಲು ಒಪ್ಪಲಿಲ್ಲ. ಜಿಲ್ಲಾಧಿಕಾರಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
‘ನ್ಯಾಯ ಸಿಗುವವರೆಗೂ ಹೋರಾಟ’
‘ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದೇವೆ. ಇಂದಿನ ಪ್ರತಿಭಟನೆ ನಿರ್ಣಾಯಕ ಹಂತ ತಲುಪಿದೆ. ಗ್ರಾಮಗಳನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಕೈಬಿಡುವ ಕುರಿತು ಇಂದು ಅಂತಿಮ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು’ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಜಿಲ್ಲಾಧಿಕಾರಿ ಸ್ಥಳಕ್ಕೆ ಬರುವವರೆಗೂ ರಸ್ತೆ ತಡೆ ಮುಂದುವರಿಸುವುದಾಗಿ ರೈತರು ಪಟ್ಟು ಹಿಡಿದರು. ‘ನ್ಯಾಯ ಬೇಕು’ ಎಂಬ ಘೋಷಣೆಗಳೊಂದಿಗೆ ಮಹಿಳೆಯರು ಮತ್ತು ಮಕ್ಕಳು ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದರು.

07/08/2026

ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ತೆರವು ಕಾರ್ಯಾಚರಣೆ ಆರಂಭ

ಮಂಗಳೂರು; ಉಳ್ಳಾಲ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಗುರುವಾರ ಅನಧಿಕೃತ ಅಂಗಡಿಗಳ ತೆರವು ಕಾರ್ಯಾಚರಣೆ ಆರಂಭಿಸಲಾಯಿತು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಕಲ್ಲಾಪು ಜಂಕ್ಷನ್‌ನ ಸೂಪರ್ ಮಾರ್ಕೆಟ್ ಹಾಗೂ ರಸ್ತೆ ಬದಿಯಲ್ಲಿದ್ದ ಖಾಸಗಿ ಮೀನು ಮಾರುಕಟ್ಟೆ ಸೇರಿದಂತೆ ಹಲವು ಅಂಗಡಿಗಳಿಗೆ ಮೂರು ಬಾರಿ ನೋಟಿಸ್ ಜಾರಿಗೊಳಿಸಲಾಗಿತ್ತು. ನೋಟಿಸ್‌ಗೆ ಸ್ಪಂದಿಸಿ ತೆರವುಗೊಳಿಸದ ಹಿನ್ನೆಲೆಯಲ್ಲಿ ಎನ್‌ಎಚ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿದರು.

ಈ ವೇಳೆ ವ್ಯಾಪಾರಸ್ಥರು ಒಂದು ವಾರದ ಗಡುವು ನೀಡುವಂತೆ ಮನವಿ ಮಾಡಿದರು. ಆದರೆ ಎನ್‌ಎಚ್‌ನ ಜನರಲ್ ಮ್ಯಾನೇಜರ್ (ತಾಂತ್ರಿಕ) ಹಾಗೂ ಪ್ರಾಜೆಕ್ಟ್ ಡೈರೆಕ್ಟರ್ ಅಬ್ದುಲ್ಲಾ ಜಾವೇದ್ ಅಜ್ಮಿ ಅವರು, ಹಲವು ಬಾರಿ ನೋಟಿಸ್ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ತೆರವು ಕಾರ್ಯಾಚರಣೆ ಅನಿವಾರ್ಯವಾಗಿದೆ ಎಂದು ತಿಳಿಸಿದರು. ಬಳಿಕ ವ್ಯಾಪಾರಸ್ಥರ ಮನವಿಯ ಮೇರೆಗೆ ಎರಡು ಗಂಟೆಗಳ ಕಾಲಾವಕಾಶ ನೀಡಲಾಯಿತು.

ನಂತರ ಅಂಗಡಿ ಮಾಲೀಕರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ತೆರವುಗೊಳಿಸಲು ಮುಂದಾದರು. ಎನ್‌ಎಚ್-66 ಸರ್ವೀಸ್ ರಸ್ತೆ ಕಾಮಗಾರಿಗೆ ಅಡ್ಡಿಯಾಗಿರುವ ಅನಧಿಕೃತ ನಿರ್ಮಾಣಗಳ ವಿರುದ್ಧ ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

07/08/2026

ಮಣಿಪಾಲ: ಕುಡಿಯುವ ನೀರಿನ ಪಂಪ್‌ಹೌಸ್‌ ಬಳಿ‌ ಆಟೋ ಪಲ್ಟಿ- ತಾಯಿಗೆ ಗಾಯ, ಮಗು ಅಪಾಯದಿಂದ ಪಾರು

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಆಟೋವೊಂದು ರಾಷ್ಟ್ರೀಯ ಹೆದ್ದಾರಿ 169ಎಯ ಈಶ್ವರನಗರದ ಇಳಿಜಾರು ರಸ್ತೆಯಲ್ಲಿರುವ ನಗರಸಭೆಯ ಕುಡಿಯುವ ನೀರಿನ ಪಂಪ್‌ಹೌಸ್‌ಗೆ ನುಗ್ಗಿ ಪಲ್ಟಿಯಾದ ಘಟನೆ ಗುರುವಾರ ರಾತ್ರಿ ಸುಮಾರು 11ಗಂಟೆಗೆ ನಡೆದಿದೆ.
ಉಡುಪಿಯಿಂದ ಹಿರಿಯಡ್ಕದ ಕಡೆಗೆ ಬಾಡಿಗೆಗೆ ತೆರಳುತ್ತಿದ್ದ ಆಟೋ ಈಶ್ವರನಗರದ ಇಳಿಜಾರಿನಲ್ಲಿ ಏಕಾಏಕಿ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಪಂಪ್‌ಹೌಸ್‌ಗೆ ನುಗ್ಗಿದೆ. ಆಟೋದಲ್ಲಿದ್ದ ಮಹಿಳೆಗೆ ಗಾಯವಾಗಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ತಿಳಿದುಬಂದಿದೆ. ಗಾಯಾಳು ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಟೋ ಚಾಲಕ ಪೆರಂಪಳ್ಳಿಯವರು ಎಂದು ತಿಳಿದುಬಂದಿದೆ.
ಈಶ್ವರನಗರದ ಈ ಭಾಗದಲ್ಲಿ ರಸ್ತೆ ಏಕಾಏಕಿ ತಿರುವು ಪಡೆದುಕೊಳ್ಳುವುದರ ಜೊತೆಗೆ ಇಳಿಜಾರು ಇರುವುದರಿಂದ ವಾಹನ ಚಾಲಕರು ನಿಯಂತ್ರಣ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿದೆ. ಈ ಸ್ಥಳದಲ್ಲಿ ಪದೇಪದೇ ಅಪಘಾತಗಳು ಸಂಭವಿಸುತ್ತಿದ್ದು, ರಸ್ತೆ ವಿನ್ಯಾಸವೇ ಅಪಘಾತಗಳಿಗೆ ಪ್ರಮುಖ ಕಾರಣವಾಗುತ್ತಿದೆ ಎಂಬುದು ಸ್ಥಳೀಯರ ಆರೋಪ.
ತಿರುವಿನ ಮುನ್ನೆಚ್ಚರಿಕೆ ಸೂಚನಾ ಫಲಕ ಅಳವಡಿಸಿದರೂ ಇಳಿಜಾರು ಹಾಗೂ ಏಕಾಏಕಿ ಬರುವ ತಿರುವಿನಿಂದಾಗಿ ವಾಹನ ಚಾಲಕರಿಗೆ ಸಮರ್ಪಕವಾಗಿ ರಸ್ತೆ ಅಂದಾಜಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಪಘಾತ ತಡೆಗಟ್ಟಲು ರಸ್ತೆಯ ವಿನ್ಯಾಸದಲ್ಲಿ ಅಗತ್ಯ ಬದಲಾವಣೆ ಹಾಗೂ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

07/08/2026

ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು‌.ಟಿ.ಖಾದರ್ ಸುದ್ದಿಗೋಷ್ಟಿ

ಜನರು ಆರೋಗ್ಯ ಕಾಪಾಡಲು ಹೆಚ್ಚಿನ ಮಹತ್ವ ನೀಡಬೇಕು

ಆರೋಗ್ಯ ಇಲಾಖೆ ರೋಗ ಬಂದವರಿಗೆ ಮದ್ದು ಕೊಡಲಿದೆ

ಹೀಗಾಗಿ ಆರೋಗ್ಯ ಇಲಾಖೆ ಅನೇಕ ಯೋಜನೆಗಳನ್ನು ತಂದಿದೆ

ಕಳೆದ ಒಂದೂವರೆ ತಿಂಗಳಲ್ಲಿ ರಾಜ್ಯದಲ್ಲಿ 200 ಎಂಬಿಬಿಎಸ್ ವೈದ್ಯರು ಬಂದಿದ್ದಾರೆ

ಜೊತೆಗೆ ಮತ್ತೆ ಮೂರುವರೆ ಸಾವಿರ ಬೇರೆ ಸಿಬ್ಬಂದಿ ನೇಮಕಕ್ಕೆ ಒಪ್ಪಿಗೆ ಸಿಕ್ಕಿದೆ

ತಾಲೂಕು, ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಿದ್ದೇವೆ

ಮುಖ್ಯಮಂತ್ರಿ ಒಪ್ಪಿಗೆ ಪಡೆದು ಇಲಾಖೆ ಜೊತೆ ಚರ್ಚಿಸಿ ಅನುಷ್ಠಾನ

ಗ್ರಾಮೀಣ ಮಟ್ಟದಲ್ಲಿ 20 ನಿಮಿಷ, ನಗರದಲ್ಲಿ 15 ನಿಮಿಷಗಳಲ್ಲಿ ಅಂಬ್ಯುಲೆನ್ಸ್ ಬರಬೇಕು

ಜೊತೆಗೆ ರಾಜ್ಯದಲ್ಲಿ ನೂರು ಬೈಕ್ ಅಂಬ್ಯುಲೆನ್ಸ್ ಆರಂಭಿಸ್ತಾ ಇದೇವೆ

108 ಗೆ 450 ಹೊಸ ಅಂಬ್ಯುಲೆನ್ಸ್ ಜೊತೆಗೆ ಒಟ್ಟು 750 ಅಂಬ್ಯುಲೆನ್ಸ್ ಸಿದ್ದ ಪಡಿಸ್ರೇವೆ

ಅಂಬ್ಯುಲೆನ್ಸ್ ತಡವಾಗಿ ಬಂದರೆ ನಿರ್ವಹಣೆ ಮಾಡೋ ಕಂಪೆನಿಗೆ ದಂಡ

ಎಲ್ಲಾ ಆಸ್ಪತ್ರೆಗಳು ಸೂಪರ್ ಸ್ಟೆಷಾಲಿಟಿ ಅಲ್ಲ, ಹಾಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಕರ್ನಾಟಕ ಯೋಜನೆ ಸುಧಾರಿಸಲು ಕ್ರಮ

ಮುಂದಿನ ದಿನಗಳಲ್ಲಿ ಈ ಯೋಜನೆ ಎಪಿಎಲ್ ಗೂ ವಿಸ್ತರಿಸಲು ಚರ್ಚೆ

ನಿವೃತ್ತ ಸರ್ಕಾರಿ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಸಂಧ್ಯಾ ಕಿರಣ ಯೋಜನೆ ರೂಪಿಸಲಾಗಿದೆ

1.25 ಶೇ. ಅವರ ಪಿಂಚಣಿ ಹಣದಲ್ಲಿ ಕಟ್ಟಬೇಕು, ಅದರಲ್ಲಿ ಅವರಿಗೆ ಈ ಯೋಜನೆ ಜಾರಿ

ಕೇಂದ್ರ ಸರ್ಕಾರದ ವಯೋ ವಂದನಾ ಯೋಜನೆಗೆ ಸ್ಪಷ್ಟತೆ ಇಲ್ಲ

ಈ ಬಗ್ಗೆ ಸಿಎಂ ಪ್ರಧಾನಿಗೆ ಪತ್ರ ಬರೀತಾರೆ, ನಾನು ಕೇಂದ್ರ ಆರೋಗ್ಯ ಸಚಿವರಿಗೆ ಬರೀತಿನಿ

ನಮ್ಮ ಸರ್ಕಾರ ಈ ಯೋಜನೆಗೆ ಸಹಕಾರ ನೀಡಲು ಸಿದ್ದವಿದೆ

ನಮ್ಮ ರಾಜ್ಯದ ಜನಸಾಮಾನ್ಯರ ಆರೋಗ್ಯದ ದೃಷ್ಟಿಯಿಂದ ಮಾಡಲಾದ ಯೋಜನೆಗಳು

ಈ ಬಗ್ಗೆ ಖಾಸಗಿ ಆಸ್ಪತ್ರೆಗಳೂ ತಯಾರಿದೆ, ಬೆಲೆಗಳ ಬದಲಾವಣೆ ಮಾಡ್ತಾ ಇದೀವಿ

ಮುಖ್ಯಮಂತ್ರಿಗಳ ಸೂಚನೆಯಂತೆ ದ‌‌.ಕ ಜಿಲ್ಲೆಯ ಪ್ರಕೃತಿ ವಿಕೋಪ ಪ್ರದೇಶಗಳಿಗೆ ಭೇಟಿ

ಬೆಳ್ತಂಗಡಿ, ಬಂಟ್ವಾಳ, ಸುಳ್ಯ, ಕಡಬ ಹೋಗಿದ್ದೇನೆ

ಕೆಲವೊಂದು ಕಡೆ ಪರಿಹಾರ ವಿತರಣೆಯಲ್ಲಿ ಗೊಂದಲ ಆಗಿದೆ

ಅಧಿಕಾರಿಗಳು ಬುದ್ದಿವಂತಿಕೆ ಜೊತೆಗೆ ಹೃದಯವಂತಿಕೆ ಕೆಲಸ ಮಾಡಲಿ

06/08/2026

ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಸಾ*

ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಘಟನೆ

ಲಿಖಿತ್ ಅಮೀನ್ (15) ಮೃ* ಬಾಲಕ

ಮಂಗಳೂರು: ಸುರತ್ಕಲ್ ಸಮೀಪದ ಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಮೃ*ತಪಟ್ಟ ದುರ್ಘಟನೆ ಬುಧವಾರ ನಡೆದಿದೆ. ಮೃ* ವಿದ್ಯಾರ್ಥಿಯನ್ನು ರಿಕ್ಷಾ ಚಾಲಕ ಬೊಳ್ಳಾರು ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ.

ಆಟದ ವೇಳೆ ಏಕಾಏಕಿ ಕುಸಿದು ಬಿದ್ದ ಲಿಖಿತ್ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃ*ಪಟ್ಟಿದ್ದಾರೆ. ಲಿಖಿತ್ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ. ಘಟನೆಯಿಂದ ಶಾಲೆ ಹಾಗೂ ಕುಟುಂಬದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

Address

Mangalore

Alerts

Be the first to know and let us send you an email when News Kannada posts news and promotions. Your email address will not be used for any other purpose, and you can unsubscribe at any time.

Contact The Business

Send a message to News Kannada:

Shortcuts

Share