12/12/2025
ಪತ್ರ ಬರಹಗಾರರ ಪ್ರತಿಭಟನೆ
ಪ್ರತ್ಯೇಕ ಲಾಗಿನ್ ನೀಡಿ, ಸಮಸ್ಯೆ ಬಗೆಹರಿಸಲು ಒತ್ತಾಯ
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ
ಮೈಸೂರು ನಗರ ಮತ್ತು ತಾಲೂಕು ಪತ್ರ ಬರಹಗಾರರ ಒಕ್ಕೂಟ
ಮೈಸೂರು ಉತ್ತರ ಉಪನೋಂದಣಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ನಂತರ
ಜಿಲ್ಲಾ ಉಪನೋಂದಣಾಧಿಕಾರಿ
ಹಾಗೂ ಮೈಸೂರು ತಾಲೂಕು ತಹಶೀಲ್ದಾರ್ ರವರಿಗೆ ಮನವಿ ಸಲ್ಲಿಸಿದರು
ಮುದ್ರಾಂಕ ಹಾಗೂ ನೋಂದಣಿ ಇಲಾಖೆಯು ಈಗಾಗಲೇ ಕಾವೇರಿ 2.0 ತಂತ್ರಾಂಶದ ಮೂಲಕ ದಾಖಲಾತಿಗಳನ್ನು ರವಾನಿಸುವ ಬಗ್ಗೆ ಕ್ರಮ ಕೈಗೊಂಡಿದ್ದು, ಈ ಸಂಬಂಧ ಆಗಿದ್ದಾಂಗ್ಲೆ ಸುಧಾರಣೆ ವಿಷಯದಲ್ಲಿ ಹಲವಾರು ಬದಲಾವಣೆಗಳನ್ನು ತಂದಿರುವುದು ತಿಳಿದಿರುವ ಸಂಗತಿಯಾಗಿರುತ್ತದೆ. ಸುಧಾರಣೆಗಳಿಂದಾಗಿ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯ ವೇಗ ಕುಂಠಿತವಾಗುತ್ತಿದ್ದು, ಪತ್ರಬರಹಗಾರರಾದ ನಾವುಗಳು ಸಹಾ ಸಮರ್ಪಕ ಸೇವೆಯನ್ನು ಜನ ಸಾಮಾನ್ಯರಿಗೆ ನೀಡುವುದು ದುಸ್ಸಾಹಸವಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಈಗಾಗಲೇ ವಿಭಾಗ ಪತ್ರ. ದಾನಪತ್ರ ಹಾಗೂ ಇನ್ನಿತರೆ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಸಹಾ ಸಾಧ್ಯವಾಗದ ಕಾರಣ ಜನಸಾಮಾನ್ಯರು ತಮ್ಮ ಕುಟುಂಬದ ಸ್ಥಿರಾಸ್ತಿಗಳನ್ನು ನೋಂದಣಿ ಮಾಡಿಕೊಳ್ಳುವುದು ಸಾಧ್ಯವಿಲ್ಲದಂತಾಗಿದೆ. ಸುಧಾರಣೆಯ ನೆಪದಲ್ಲಿ ಪತ್ರಬರಹಗಾರರು, ವಕೀಲರು ಹಾಗೂ ಜನಸಾಮಾನ್ಯರಿಗೆ ಯಾವುದೇ ರೀತಿಯಲ್ಲಿ ವಿಷಯಗಳು ತಿಳಿಯದ ಕಾರಣ ಇಲಾಖೆಯಿಂದ ರಹದಾರಿ ಪಡೆದಿರುವ ಪತ್ರ ಬರಹಗಾರರು ಹಾಗೂ ಜನಸಾಮಾನ್ಯರು ತೀರ್ವ ತೊಂದರೆಯನ್ನು ಅನುಭವಿಸುವಂತಾಗಿದೆ. ಆದ ಕಾರಣ ಮಾನ್ಯ ಅಧಿಕಾರಿಗಳು ಈ ಮೇಲ್ಕಂಡ ವಿಚಾರವನ್ನು ಇಲಾಖೆಯ ಉನ್ನತ ಅಧಿಕಾರಿಗಳು ಹಾಗೂ ಸಚಿವರಿಗೆ ಮನದಟ್ಟು ಮಾಡುವ ಮೂಲಕ ಜನಸಾಮಾನ್ಯರ ನೋಂದಣಿ ಪ್ರಕ್ರಿಯೆಯನ್ನು ಪತ್ರ ಬರಹಗಾರರು ಸುಲಲಿತವಾಗಿ ನಡೆಸಲು ಅನುವು ಮಾಡಿಕೊಡಬೇಕೆಂದು ಪ್ರತಿಭಟನೆಕಾರರು ಒತ್ತಾಯಿಸಿದರು
ಇದೇ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ನಿಸಾರ್ ಅಹಮದ್ ಖಾನ್,
ಉಪಾಧ್ಯಕ್ಷರಾದ ಎಂ ಎಸ್ ಧನಂಜಯ್, ಕಾರ್ಯದರ್ಶಿ ಕೆ ಆರ್ ಉದಯ್ ಕುಮಾರ್, ಖಜಾಂಜಿ ಎಂ ಎಸ್ ನರಸಿಂಹಮೂರ್ತಿ, ಸಂಚಾಲಕ ಎಂ ಗಣೇಶ್, ನಿರ್ದೇಶಕರುಗಳಾದ ಕೆ ಆರ್ ಸತ್ಯನಾರಾಯಣ್, ಎಂ ಎನ್ ದೇವರಾಜು, ನಾಗಭೂಷಣ ಆರಾಧ್ಯ, ಮಹಾದೇವ್, ಕುಮಾರ್, ಪಣಿರಾಜ್ ಎಸ್, ಚಂದ್ರಶೇಖರ್ ಎಸ್, ಎನ್ ದಿನೇಶ್ ಕುಮಾರ್, ಎಸ್ ಎಸ್ ವೇಣು, ಜಯಲಕ್ಷ್ಮ್ಹಿ
ಹಾಗೂ ಇನ್ನಿತರ ಪತ್ರ ಬರಹಗಾರರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು