11/05/2025
ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಮೂರನೇಯವರ ಮಧ್ಯಸ್ಥಿಕೆ ನಮಗೆ ಬೇಡ - ಪ್ರಧಾನಿ ಮೋದಿ
ಅಮೆರಿಕಾ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ದೂರವಾಣಿ ಮೂಲಕ ಮಾತನಾಡಿರುವ ನರೇಂದ್ರ ಮೋದಿ "ಕಾಶ್ಮೀರದ ವಿಷಯದಲ್ಲಿ ಮೂರನೇಯವರ ಮಧ್ಯಸ್ಥಿಕೆ ಬೇಕಾಗಿಲ್ಲ. ಪಾಕಿಸ್ತಾನ ತನ್ನಲ್ಲಿರುವ ಉಗ್ರರನ್ನು ನಮಗೆ ಹಸ್ತಾಂತರಿಸಬೇಕು ಈ ಷರತ್ತಿಗೆ ಒಪ್ಪಿದರೆ ಮಾತ್ರ ಮಾತುಕತೆಗೆ ಸಿದ್ಧರಿದ್ದೇವೆ ಅದರ ಹೊರತಾಗಿ ಮಾತನಾಡಲು ಬೇರೇನೂ ಇಲ್ಲ.
ಪಾಕ್ ಆಕ್ರಮಿತ ಕಾಶ್ಮೀರ ನಮಗೆ ಮರಳಬೇಕು. ಕಾಶ್ಮೀರದ ಬಗ್ಗೆ ಭಾರತದ ನಿಲುವು ಸ್ಪಷ್ಟವಾಗಿದೆ. ಪಾಕಿಸ್ತಾನ ಏನಾದರೂ ಮಾಡಿದರೆ ಭಾರತದ ಪ್ರತಿಕ್ರಿಯೆ ಹೆಚ್ಚು ವಿನಾಶಕಾರಿ ಮತ್ತು ಬಲವಾಗಿರುತ್ತದೆ
ಆಪರೇಷನ್ ಸಿಂಧೂರ್ ಮುಗಿದಿಲ್ಲ, ಮತ್ತು ನಾವು ಈ ಹಿಂದಿಗಿಂತಲೂ ಭಿನ್ನವಾಗಿದ್ದೇವೆ ಹೊಸ ಸ್ಥಿತಿಯಲ್ಲಿದ್ದೇವೆ; ಜಗತ್ತು ಇದನ್ನು ಒಪ್ಪಿಕೊಳ್ಳಬೇಕು, ಪಾಕಿಸ್ತಾನ ಇದನ್ನು ಒಪ್ಪಿಕೊಳ್ಳಬೇಕು, ಇದು ಎಂದಿನಂತೆ ನಡೆಯಲು ಸಾಧ್ಯವಿಲ್ಲ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.