22/10/2025
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ಗ್ರಾಮದ ಸಂಸ್ಕೃತ ವೇದಾಧ್ಯಯನ ವಸತಿ ಶಾಲೆಯಲ್ಲಿ ನಡೆದ ಘಟನೆ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ವೇದಾಧ್ಯಯನ ಶಾಲೆಯ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ 9 ವರ್ಷದ ವಿದ್ಯಾರ್ಥಿ ತರುಣ್ ಮೇಲೆ ಕ್ರೌರ್ಯ ಮೆರೆದ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ತನ್ನ ಅಜ್ಜಿಗೆ ಫೋನ್ ಮಾಡಿದುದನ್ನು ಪ್ರಶ್ನಿಸಿದ ಶಿಕ್ಷಕ, ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಕಾಲಿನಿಂದ ಒದ್ದು ವಿಕೃತಿ ಮೆರೆದಿದ್ದಾರೆ. ಈ ಘಟನೆಯ ದೃಶ್ಯಗಳು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.