SIRA TIMES

SIRA TIMES fight for justice

05/09/2026

ಶಿರಾ ಪೌರಕಾರ್ಮಿಕರನ್ನು ರಕ್ಷಿಸಿಕೊಂಡರೆ ಇಡೀ ಊರನ್ನೇ ರಕ್ಷಿಸಿದಂತೆ: ಕೃಷ್ಣಪ್ಪ ಎಂ.ಸ್ಥಾಯಿ ಸಮಿತಿ ಅಧ್ಯಕ್ಷರು.
ಶಿರಾ: ಎಸ್.ಕೆ. ಸಿದ್ದಣ್ಣ ಹಾಗೂ ಸತ್ಯನಾರಾಯಣ್ ಅವರ ಕಾಲದಲ್ಲಿ ಪೌರಕಾರ್ಮಿಕರಿಗೆ ಹಕ್ಕುಪತ್ರಗಳ ಸುರಿಮಳೆಯೇ ಆಗಿತ್ತು. ಆದರೆ ಇಂದು ಪೌರಕಾರ್ಮಿಕರಿಗೆ ಹಕ್ಕುಪತ್ರ ನೀಡುವ ವಿಚಾರದಲ್ಲಿ ವಿಳಂಬವಾಗುತ್ತಿರುವುದು ಬೇಸರದ ಸಂಗತಿ ಎಂದು ಶಿರಾ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಪ್ಪ ಹೇಳಿದರು.
ಪೌರಕಾರ್ಮಿಕರು ನಗರದ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರನ್ನು ರಕ್ಷಣೆ ಮಾಡಿಕೊಂಡರೆ ಇಡೀ ಊರನ್ನೇ ರಕ್ಷಣೆ ಮಾಡಿಕೊಂಡಂತೆ. ಆದ್ದರಿಂದ ಪೌರಕಾರ್ಮಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಅವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಆಡಳಿತದ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.
ಪೌರಕಾರ್ಮಿಕರಿಗೆ ಹಕ್ಕುಪತ್ರ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಅವರ ಹಿತಾಸಕ್ತಿಯನ್ನು ಕಾಪಾಡಲು ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಕೃಷ್ಣಪ್ಪ ಆಗ್ರಹಿಸಿದರು.

05/09/2026

ಶಿರಾ: ಪೌರ ಕಾರ್ಮಿಕರ ಸಮಸ್ಯೆಗಳು ಹಾಗೂ ಅವರ ಹಕ್ಕುಗಳಿಗಾಗಿ ಸದಾ ನಿಮ್ಮೊಂದಿಗೆ ನಿಂತು, ಅಗತ್ಯ ಸಹಕಾರ ನೀಡುವುದಾಗಿ ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್.ಆರ್. ಗೌಡ ಭರವಸೆ ನೀಡಿದರು.
“ಪೌರ ಕಾರ್ಮಿಕರು ಸಮಾಜದ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವುದು ನಮ್ಮೆಲ್ಲರ ಜವಾಬ್ದಾರಿ. ಪೌರ ಕಾರ್ಮಿಕರ ಪರ ಸದಾ ನಿಮ್ಮ ಜೊತೆಯಲ್ಲಿರುತ್ತೇವೆ” ಎಂದು ಎಸ್.ಆರ್. ಗೌಡ ಹೇಳಿದರು.

05/09/2026

ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ ಖಂಡಿಸಿದ ಮುದಿಮಡು ರಂಗಸ್ವಾಮಿ.
ಶಿರಾ: ನಗರದ ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವಲ್ಲಿ ಅಧಿಕಾರಿಗಳು ಅನಗತ್ಯ ವಿಳಂಬ ಮಾಡುತ್ತಿರುವುದನ್ನು ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಮುದಿಮಡು ರಂಗಸ್ವಾಮಿ ಅವರು ತೀವ್ರವಾಗಿ ಖಂಡಿಸಿದ್ದಾರೆ.
ವರ್ಷಗಳಿಂದ ನಗರ ಸ್ವಚ್ಛತೆ ಸೇರಿದಂತೆ ವಿವಿಧ ಸೇವೆಗಳಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಪೌರ ಕಾರ್ಮಿಕರಿಗೆ ನಿವೇಶನ ಕಲ್ಪಿಸುವುದು ಸರ್ಕಾರ ಹಾಗೂ ಸ್ಥಳೀಯ ಆಡಳಿತದ ಜವಾಬ್ದಾರಿಯಾಗಿದೆ. ಆದರೆ ನಿವೇಶನ ಹಂಚಿಕೆ ಪ್ರಕ್ರಿಯೆಯಲ್ಲಿ ವಿಳಂಬ ಮಾಡುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.
ಪೌರ ಕಾರ್ಮಿಕರ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿ, ಅರ್ಹ ಫಲಾನುಭವಿಗಳಿಗೆ ಆದಷ್ಟು ಬೇಗ ನಿವೇಶನ ಹಂಚಿಕೆ ಮಾಡಬೇಕು. ಇಲ್ಲವಾದಲ್ಲಿ ಪೌರ ಕಾರ್ಮಿಕರ ಪರವಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಮುದಿಮಡು ರಂಗಸ್ವಾಮಿ ಎಚ್ಚರಿಕೆ ನೀಡಿದರು.

05/09/2026

ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆಯಲ್ಲಿ ವಿಳಂಬ: ಸತ್ಯಪ್ರಕಾಶ್ ಎಚ್ಚರಿಕೆ.

ಶಿರಾ: ಶಿರಾ ನಗರದ ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡುವಲ್ಲಿ ವಿಳಂಬವಾಗುತ್ತಿರುವುದಕ್ಕೆ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸತ್ಯಪ್ರಕಾಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಆದಷ್ಟು ಬೇಗ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಅವರು ನಗರಸಭೆ ಪೌರಾಯುಕ್ತರು ಹಾಗೂ ನಗರಸಭೆ ಅಧ್ಯಕ್ಷರಿಗೆ ಆಗ್ರಹಿಸಿದರು.

ಪೌರ ಕಾರ್ಮಿಕರು ನಗರದ ಸ್ವಚ್ಛತೆ ಹಾಗೂ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಅವರ ಬಹುದಿನಗಳ ನಿವೇಶನದ ಬೇಡಿಕೆಯನ್ನು ನಗರಸಭೆ ಆಡಳಿತ ಗಂಭೀರವಾಗಿ ಪರಿಗಣಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಂಡು ಅರ್ಹ ಪೌರ ಕಾರ್ಮಿಕರಿಗೆ ನಿವೇಶನ ಹಂಚಿಕೆ ಮಾಡಬೇಕು ಎಂದು ಸತ್ಯಪ್ರಕಾಶ್ ಒತ್ತಾಯಿಸಿದರು.

ನಿವೇಶನ ಹಂಚಿಕೆ ವಿಚಾರದಲ್ಲಿ ಇನ್ನಷ್ಟು ವಿಳಂಬವಾದರೆ, ಪೌರ ಕಾರ್ಮಿಕರ ಪರವಾಗಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಪೌರಾಯುಕ್ತರು ಹಾಗೂ ನಗರಸಭೆ ಅಧ್ಯಕ್ಷರಿಗೆ ಸತ್ಯಪ್ರಕಾಶ್ ಎಚ್ಚರಿಕೆ ನೀಡಿದರು.

04/09/2026

ಶಿರಾ.ಕೃಷ್ಣ ಸೇವಾ ಸಮಿತಿ ವತಿಯಿಂದ ದಿನಾಂಕ 06-09-2026 ರಂದು ಅದ್ದೂರಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಮಹೋತ್ಸವ ಕಾರ್ಯಕ್ರಮಕ್ಕೆ ಸ್ವಾಗತಿಸಿದ ಸಮುದಾಯದ ಮುಖಂಡರು.

03/09/2026

ಶ್ರೀ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಸೆಪ್ಟೆಂಬರ್ 5, 2026ರಂದು ಆರತಿ, ದೇವರ ಉತ್ಸವ ಹಾಗೂ 101 ಎಡೆ ಸೇವೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಹಾಗೆಯೇ ಸೆಪ್ಟೆಂಬರ್ 6, 2026ರಂದು ಭಕ್ತಾದಿಗಳಿಗಾಗಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕುರಿತು ಶ್ರೀ ಆಂಜನೇಯ ಸ್ವಾಮಿ ಸೇವಾ ಟ್ರಸ್ಟ್‌ನ ಧರ್ಮದರ್ಶಿಗಳು ಹಾಗೂ ಗ್ರಾಮಸ್ಥರು ಸಭೆ ನಡೆಸಿ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಿದ್ದಾರೆ.

ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ದೇವರ ಕೃಪೆಗೆ ಪಾತ್ರರಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಟ್ರಸ್ಟ್‌ನ ಧರ್ಮದರ್ಶಿಗಳು ಹಾಗೂ ಗ್ರಾಮಸ್ಥರು ಮನವಿ ಮಾಡಿದ್ದಾರೆ.

02/09/2026

ಶಿರಾ ನಿಮ್ಮ ಮನೆ ಬಾಗಿಲಿಗೆ ತಾಲ್ಲೂಕು ಆಡಳಿತ
"ಪ್ರಜಾ ಸೇವಾ ಆಂದೋಲನ"
ಸೆಪ್ಟೆಂಬರ್ 5ರಂದು ಗೌಡಗೆರೆ ಹೋಬಳಿ, ಗೌಡಗೆರೆ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ನೆಡೆಯಲಿದೆ
ನಿಮ್ಮ ದೂರುಗಳಿಗೆ ಸಿಗಲಿದೆ ತಕ್ಷಣ ಸ್ಪಂದನೆ!
ತಾಲ್ಲೂಕು ಆಡಳಿತದ ವತಿಯಿಂದ ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲಿಯೇ ಆಲಿಸಿ, ವಿವಿಧ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
ಯಾವೆಲ್ಲಾ ಕೆಲಸಗಳಿಗೆ ಅರ್ಜಿ ಸಲ್ಲಿಸಬಹುದು?
ಕಂದಾಯ ಇಲಾಖೆ:• ಪಹಣಿ ತಿದ್ದುಪಡಿ • ಖಾತೆ ಬದಲಾವಣೆ • ಪೋಡಿ • ನಿವೇಶನ/ವಸತಿ ಹಂಚಿಕೆ • ಕಂದಾಯ ಇಲಾಖೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳು
ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳೊಂದಿಗೆ
ಆಗಮಿಸಿ, ಪ್ರಜಾ ಸೇವಾ ಆಂದೋಲನದ ಪ್ರಯೋಜನ ಪಡೆದುಕೊಳ್ಳುವಂತೆ ಮನವಿ.*
ಟಿ. ಬಿ. ಜಯಚಂದ್ರ ರವರು ಶಿರಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳು

Address

Sira
Sira
SIRA

Telephone

+919900388697

Website

Alerts

Be the first to know and let us send you an email when SIRA TIMES posts news and promotions. Your email address will not be used for any other purpose, and you can unsubscribe at any time.

Shortcuts

Share