27/10/2023
ಜಿಲ್ಲಾ ಪದಾಧಿಕಾರಿಗಳ ಪೂರ್ವಭಾವಿ ಸಭೆ ಯಶಸ್ವಿ... ಕಾರ್ಮಿಕ ಒಕ್ಕೂಟವು ಜನಪರ ಕಾಳಜಿ ಹೊಂದಿದೆ : ರಾಜ್ಯಾಧ್ಯಕ್ಷ ಎಸ್.ಡಿ ನಾಗರಾಜು
ತುಮಕೂರು: ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದಿಂದ ತುಮಕೂರು ಜಿಲ್ಲಾ ಘಟಕದ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಡಿ ನಾಗರಾಜು (ಸಿದ್ದನಕಟ್ಟೆ) ಹಾಗೂ ಮಹಿಳಾ ರಾಜ್ಯಾಧ್ಯಕ್ಷೆ ಬೇಬಿ ರಾಣಿ ಇವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಗರದ ಔಟರ್ ರಿಂಗ್ ರೋಡ್‌ನ ಸಪ್ತಗಿರಿ ಬಡಾವಣೆಯಲ್ಲಿರುವ ಮಹಾಕವಿ ಕುವೆಂಪು ಸಭಾಂಗಣದಲ್ಲಿ ಗುರುವಾರ ಬೆಳಿಗೆ ೧೧.೦೦ ಗಂಟೆಗೆ ತುಮಕೂರು ಜಿಲ್ಲೆಯ ಹಾಗೂ ಎಲ್ಲಾ ತಾಲ್ಲೂಕುಗಳ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಏರ್ಪಡಿಸಲಾಗಿತ್ತು.
ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ಎಸ್.ಡಿ ನಾಗರಾಜು ಮಾತನಾಡಿ, ನಮ್ಮ ಕಾರ್ಮಿಕ ಒಕ್ಕೂಟವು ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ಬೆಳವಣಿಗೆ ಹೊಂದುತ್ತಾ ಇದೆ. ನಮ್ಮ ಕಾರ್ಮಿಕ ಒಕ್ಕೂಟವು ಅನೇಕ ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಾಮಾಜಿಕ ಕಳಕಳಿಯನ್ನು ಹೊಂದಿದೆ. ಆರೋಗ್ಯ ಶಿಬಿರ, ಅರಿವು ಕಾರ್ಯಕ್ರಮ ಹೀಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಆಯೋಜಿಸುವುದರ ಮೂಲಕ ಕಾರ್ಮಿಕರ ಶಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರ ಬೆಂಬಲ ಇನ್ನಷ್ಟು ಬೇಕು ಎಂದು ಮನವಿ ಮಾಡಿದರು.
ಒಕ್ಕೂಟದ ರಾಜ್ಯಾಧ್ಯಕ್ಷೆ ಬೇಬಿರಾಣಿ ಆರ್ ಮಾತನಾಡಿ, ಈಗಾಗಲೇ ನಮ್ಮ ಒಕ್ಕೂಟದ ಪದಾಧಿಕಾರಿಗಳ ಪೂರ್ವಭಾವಿ ಸಭೆಯನ್ನು ಅನೇಕ ಜಿಲ್ಲೆಗಳಲ್ಲಿ ಆಯೋಜನೆ ಮಾಡಿ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಿಮ್ಮೆಲ್ಲರ ಬೆಂಬಲದಿAದ ಇನ್ನಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಉದ್ದೇಶವನ್ನು ಹೊಂದಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಎಸ್.ಡಿ ನಾಗರಾಜ್, ಮಹಿಳಾ ರಾಜ್ಯಾಧ್ಯಕ್ಷರಾದ ಬೇಬಿ ರಾಣಿ ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ವೆಂಕಟೇಶ್ ಆರ್, ರಾಜ್ಯ ಖಜಾಂಚಿಯಾದ ಚಂದ್ರಶೇಖರ್, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿಯಾದ ನಿಶ್ಚಿತ, ರಾಜ್ಯ ಸಂಘಟನಾ ಸಂಚಾಲಕರಾದ ಓಂಕಾರ್‌ಮೂರ್ತಿ, ತುಮಕೂರು ಜಿಲ್ಲಾ ಉಪಾಧ್ಯಕ್ಷರು-೧ ವಿನಯ್ ಕುಮಾರ್ ಆರ್, ತುಮಕೂರು ಜಿಲ್ಲಾ ಉಪಾಧ್ಯಕ್ಷರು-೨ ಲೋಕೇಶ್ ಕೆ.ಜಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಶಿವಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ ಕಳಸಪ್ಪ, ಜಿಲ್ಲಾ ಸಂಘಟನಾ ಸಂಚಾಲಕರಾದ. ಯೋಗೀಶ್ ಹಾಗೂ ಎಲ್ಲಾ ತಾಲೂಕಿನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪದಾಧಿಕಾರಿಗಳು ಪಾಲ್ಗೊಂಡಿದ್ದರು.
“ಕರ್ನಾಟಕ ಸರ್ಕಾರವು ಕಟ್ಟಡ ಕಾರ್ಮಿಕರ ಮಂಡಳಿ ವತಿಯಿಂದ ನೊಂದಾಯಿತ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ಶಿಬಿರವನ್ನು ಜಿಲ್ಲಾದ್ಯಂತ ಹಮ್ಮಿಕೊಂಡಿದೆ. ಇದರ ಉದ್ಘಾಟನೆಯನ್ನು ತುಮಕೂರು ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಶ್ರೀಮತಿ ತೇಜವತಿ ರವರು ಮಾಡಿದ್ದಾರೆ. ಹಾಗಾಗಿ ಜಿಲ್ಲೆಯ ಎಲ್ಲಾ ಕಾರ್ಮಿಕರು ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇವೆ. ಇನ್ನು ಐದು ತಿಂಗಳ ಕಾಲಾವಕಾಶವನ್ನು ಸರ್ಕಾರ ಮಾಡಿಕೊಟ್ಟಿದೆ”.
- ಎಸ್.ಡಿ ನಾಗರಾಜು (ಸಿದ್ದನಕಟ್ಟೆ) | ರಾಜ್ಯಾಧ್ಯಕ್ಷರು.
ನವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಒಕ್ಕೂಟ (ರಿ.)