21/03/2026
ಏಪ್ರಿಲ್ 1 ರಂದು ತುಮಕೂರಿನ ಪುಣ್ಯಕ್ಷೇತ್ರ ಶ್ರೀ ಸಿದ್ಧಗಂಗಾ ಮಠದಲ್ಲಿ ನಡೆಯಲಿರುವ ನಡೆದಾಡಿದ ದೇವರು, ತ್ರಿವಿಧ ದಾಸೋಹಿ ಗುರುದೇವರಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಶಿವಯೋಗಿಗಳವರ 119ನೇ ಜನ್ಮದಿನಾಚರಣೆ ಹಾಗೂ ಗುರುವಂದನಾ ಕಾರ್ಯಕ್ರಮಕ್ಕೆ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಇಂದು ಶ್ರೀ ಮಠದ ಶ್ರೀ ಉದ್ದಾನೇಶ್ವರ ಕಲ್ಯಾಣ ಮಂಟಪದಲ್ಲಿ ಮಠದ ಮಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳವರ ದಿವ್ಯ ಸಾನ್ನಿದ್ಯದಲ್ಲಿ ನೆರವೇರಿತು.
ಕೇಂದ್ರ ಜಲ ಶಕ್ತಿ ಮತ್ತು ರೈಲ್ವೇ ರಾಜ್ಯ ಖಾತೆಗಳ ಸಚಿವರಾದ ಶ್ರೀ ವಿ ಸೋಮಣ್ಣನವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ತುಮಕೂರು ಗ್ರಾಮಾಂತರ ಶಾಸಕರಾದ ಶ್ರೀ ಬಿ. ಸುರೇಶ್ ಗೌಡ, ನಗರ ಶಾಸಕರಾದ ಶ್ರೀ ಜ್ಯೋತಿಗಣೇಶ್, ಸಿದ್ಧಗಂಗಾ ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿಗಳಾದ ಡಾ. ಶಿವಕುಮಾರಯ್ಯನವರು, ಶ್ರೀ ಜಯವಿಭವಸ್ವಾಮಿಯವರು, ಶ್ರೀ ವಿಶ್ವನಾಥಯ್ಯನವರು, ಮುಖಂಡರಾದ ಶ್ರೀ ನಿಂಗಪ್ಪನವರು, ಶ್ರೀ ರವಿ ಹೆಬ್ಬಾಕ ತುಮಕೂರು, ಶ್ರೀ ಹುಚ್ಚಯ್ಯನವರು, ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ, ಅನೇಕ ಮುಖಂಡರುಗಳು ಸಾರ್ವಜನಿಕರು ಉಪಸ್ಥಿತರಿದ್ದರು.