09/01/2026
ಕೇರಳದಲ್ಲಿ ಕನ್ನಡ ಶಾಲೆಗಳ ಮೇಲೆ ಮಲಯಾಳಂ ಭಾಷೆ ಹೇರಿಕೆ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಕಾಸರಗೋಡು ಪ್ರದೇಶದಲ್ಲಿ ಕನ್ನಡವೇ ಪ್ರಧಾನ ಭಾಷೆಯಾಗಿದ್ದು, ಕನ್ನಡದ ಸ್ಥಾನಮಾನ ಉಳಿಸಬೇಕು ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ. ಕೇರಳ ಸರ್ಕಾರದ ದ್ವಂದ್ವ ನೀತಿಯನ್ನು ಟೀಕಿಸಿದ ಅವರು, ಕನ್ನಡವನ್ನು ಕೊನೆಗಾಣಿಸುವ ಯಾವುದೇ ಪ್ರಯತ್ನವನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸರ್ಕಾರ ಜಾಹೀರಾತು ನೀಡಿರುವುದು ತಪ್ಪು ಹಾಗೂ ಅಕ್ಷೇಪಾರ್ಹ ಎಂದು ಅವರು ಹೇಳಿದ್ದಾರೆ. ಸರ್ಕಾರದ ಹಣ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿದ ಕಟೀಲ್, ಈ ವಿಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ಮೇಲೂ ಟೀಕೆ ನಡೆಸಿದ್ದಾರೆ.
ಕೇರಳ ಸರ್ಕಾರಕ್ಕೆ ಕರ್ನಾಟಕ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಸ್ಪಷ್ಟ ಎಚ್ಚರಿಕೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
NewsNextExclusive
Next Kannada YouTube Channel
if You Like our Video Please Subscribe our You tube Channel News Next Kannada
https://www.youtube.com/