ವಿಜಯಪಥ

ವಿಜಯಪಥ vijayapatha.in is a Kannada news platform, which serves news content in Kannada. Founded in 2021, it's mission is to connect in their own local language.

Breaking News, views and Features on various National issues and politician developments.

ವಿಶ್ವವಿಖ್ಯಾತ ನಾಡ ಹಬ್ಬ ದಸಾರ ಹಾಗೂ ನವರಾತ್ರಿಗೆ ದಿನಗಣನೆ ಶುರುವಾಗಿದ್ದು, ಹಬ್ಬವನ್ನು ಇನ್ನೂ ಹೆಚ್ಚಿನ ಸಂಭ್ರಮದಿಂದ ಆಚರಿಸಲು ಸಾಮಾನ್ಯ ಮತ್ತ...
20/09/2025

ವಿಶ್ವವಿಖ್ಯಾತ ನಾಡ ಹಬ್ಬ ದಸಾರ ಹಾಗೂ ನವರಾತ್ರಿಗೆ ದಿನಗಣನೆ ಶುರುವಾಗಿದ್ದು, ಹಬ್ಬವನ್ನು ಇನ್ನೂ ಹೆಚ್ಚಿನ ಸಂಭ್ರಮದಿಂದ ಆಚರಿಸಲು ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ದಸಾರ ಗಿಫ್ಟ್ ಕೊಟ್ಟಿದೆ. ಅಂದರೆ ಇದೇ ಸೆ. 22ರಿಂದ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದ್ದು, ಜನರು ತಮ್ಮ ದಿನನಿತ್ಯದ ಜೀವನದಲ್ಲಿ ಬಳಸುವ ವಸ್ತುಗಳೆಲ್ಲ ಅಗ್ಗವಾಗಲಿವೆ. ಆಹಾರ ಪದಾರ್ಥಗಳಿಂದ ಹಿಡಿದು ಶಾಂಪೂಗಳ ವರೆಗೆ ಹಾಗೂ ಇನ್ನಿತರ ಉಪಕರಣಗಳ ಬೆಲೆಯಲ್ಲಿ ಕಡಿತ ಆಗಲಿದೆ. ನವರಾತ್ರಿ ದಿನದಿಂದಲೇ ಇದು ಜಾರಿಯಾಗಲಿದೆ. ಏಕೆಂದರೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೆಪ್ಟೆಂಬರ್ 3 ರಂದು ಪ್ರಮುಖ ಜಿಎಸ್ಟಿ ದರ ಕಡಿತ ಮತ್ತು ಸ್ಲ್ಯಾಬ್ ಬದಲಾವಣೆಗಳನ್ನು ಘೋಷಿಸಿದರು....

ಶ್ವವಿಖ್ಯಾತ ನಾಡ ಹಬ್ಬ ದಸಾರ ಹಾಗೂ ನವರಾತ್ರಿಗೆ ದಿನಗಣನೆ ಶುರುವಾಗಿದ್ದು, ಹಬ್ಬವನ್ನು ಇನ್ನೂ ಹೆಚ್ಚಿನ ಸಂಭ್ರಮದಿಂದ ಆಚರಿಸಲು ಸಾಮ....

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರ ಮೂಲ ತುಟ್ಟಿಭತ್ಯೆ, ಪರಿಷ್ಕೃತ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ...
20/09/2025

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರ ಮೂಲ ತುಟ್ಟಿಭತ್ಯೆ, ಪರಿಷ್ಕೃತ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆ ಹಿಂಬಾಕಿ ಮತ್ತು 01.07.2024 ರಿಂದ ಹಾಗೂ 01.01.2025 ರಿಂದ ಪರಿಷ್ಕರಿಸಲಾದ ತುಟ್ಟಿಭತ್ಯೆ ದರಗಳ ಹಿಂಬಾಕಿ ಮೊತ್ತವನ್ನು ಇದೇ ಸೆಪ್ಟಂಬರ್‌ ವೇತನದೊಂದಿಗೆ ಪಾವತಿ ಮಾಡಲು ಎಂಡಿ ಆದೇಶ ಹೊರಡಿಸಿದ್ದಾರೆ. ಈ ವಿಷಯ ಸಂಬಂಧಿಸಿದಂತೆ, 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 01.08.2024ರಿಂದ ಜಾರಿಗೆ ಬರುವಂತೆ ಮೂಲ ತುಟ್ಟಿಭತ್ಯೆಯನ್ನಾಗಿ (BDA) ಹಾಗೂ ಮನೆ ಬಾಡಿಗೆ ಭತ್ಯೆ ಹಾಗೂ ನಗರ ಪರಿಹಾರ ಭತ್ಯೆ ದರಗಳನ್ನು ಪರಿಷ್ಕರಿಸಿ ಜುಲೈ-2025ರ ವೇತನ ಮಾಹೆಯಿಂದ ಸಂಸ್ಥೆಯಲ್ಲಿ ಅಳವಡಿಸಿಕೋಳ್ಳಲಾಗಿದೆ....

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರ ಮೂಲ ತುಟ್ಟಿಭತ್ಯೆ, ಪರಿಷ್ಕೃತ ಮನೆ ಬಾಡಿಗೆ ಭತ್ಯೆ ಹಾಗೂ ನ....

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮಹಿಳೆ ಸೇರಿದಂತೆ ಮೂವರ ವಿರುದ್ಧ ಜಿಲ್ಲೆಯ ...
20/09/2025

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮಹಿಳೆ ಸೇರಿದಂತೆ ಮೂವರ ವಿರುದ್ಧ ಜಿಲ್ಲೆಯ ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ FIR ದಾಖಲಾಗಿದೆ. ಶಿಕಾರಿಪುರ ತಾಲೂಕಿನ ಕೋಟಿಪುರ ಗ್ರಾಮದ ನಿವಾಸಿಗಳಾದ ಕೃಷ್ಣಮೂರ್ತಿ, ಹನುಮಂತಪ್ಪ ಹಾಗೂ ರಂಜಿತಾ ಎಂಬುವರ ಮೇಲೆ ಎಫ್‌ಐಆರ್‌ ದಾಖಲಾಗಿದೆ. ಕೆಎಸ್‌ಆರ್‌ಟಿಸಿ ಶಿವಮೊಗ್ಗ ವಿಭಾಗದ ಶಿಕಾರಿಪುರ ಘಟಕದಲ್ಲಿ ಕಂಡಕ್ಟರ್‌ ತನ್ವೀರ್ ಹೊರಕೆರೆ ಎಂಬುವರೆ ಹಲ್ಲೆಗೊಳಗಾದವರಾಗಿದ್ದು, ಕರ್ತವ್ಯದ ವೇಳೆ ಹಲ್ಲೆ ಮಾಡಿದ ಈ ಮೂವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಶಿಕಾರಿಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಆ ದೂರಿನ ಆಧಾರದ ಮೇರೆಗೆ ಆರೋಪಿಗಳ ವಿರುದ್ಧ FIR ದಾಖಲಾಗಿದೆ....

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮಹಿಳೆ ಸೇರಿದಂತೆ ಮೂವರ ವಿರುದ್.....

ಬೆಂಗಳೂರು: 238ನೇ ಸಿಬಿಟಿ ಸಭೆ ಅಕ್ಟೋಬರ್ 11, 12, 2025 ರಂದು ಬೆಂಗಳೂರುನಲ್ಲಿ ನಡೆಯುತ್ತಿದ್ದು, ಅಂದಿನ ಸಭೆಯ ಕಾರ್ಯ ಸೂಚಿ (ಅಜಾಂಡ) ಇನ್ನೂ ಪ...
19/09/2025

ಬೆಂಗಳೂರು: 238ನೇ ಸಿಬಿಟಿ ಸಭೆ ಅಕ್ಟೋಬರ್ 11, 12, 2025 ರಂದು ಬೆಂಗಳೂರುನಲ್ಲಿ ನಡೆಯುತ್ತಿದ್ದು, ಅಂದಿನ ಸಭೆಯ ಕಾರ್ಯ ಸೂಚಿ (ಅಜಾಂಡ) ಇನ್ನೂ ಪ್ರಕಟಗೊಂಡಿಲ್ಲ ಎಂದು ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ. ಇನ್ನು ಈ ನಡುವೆ ಇಪಿಎಸ್ ನಿವೃತ್ತರ ಪಾಲಿಗೆ ಇದು ನಿರ್ಣಾಯಕ ಸಭೆಯಾಗಿರುವುದರಿಂದ ಎಲ್ಲ ಇಪಿಎಸ್ ನಿವೃತ್ತರು ಕಾರ್ಯಪ್ರವೃತ್ತರಾಗಿ ಕನಿಷ್ಠ ಪಿಂಚಣಿ ಸೇರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ಮೈದಾನದಲ್ಲಿ ಅಕ್ಟೋಬರ್ 09ರಂದು ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ....

ಬೆಂಗಳೂರು: 238ನೇ ಸಿಬಿಟಿ ಸಭೆ ಅಕ್ಟೋಬರ್ 11, 12, 2025 ರಂದು ಬೆಂಗಳೂರುನಲ್ಲಿ ನಡೆಯುತ್ತಿದ್ದು, ಅಂದಿನ ಸಭೆಯ ಕಾರ್ಯ ಸೂಚಿ (ಅಜಾಂಡ) ಇನ್ನೂ ಪ್ರ.....

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ಎಲ್ಲ ಘಟಕ ಮತ್ತು ವಿಭಾಗೀಯ ಕಾರ್ಯಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿ...
19/09/2025

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ಎಲ್ಲ ಘಟಕ ಮತ್ತು ವಿಭಾಗೀಯ ಕಾರ್ಯಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಮೊಬೈಲ್ ಬಳಕೆ ಮಾಡದಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ತಾಂತ್ರಿಕ ಸಿಬ್ಬಂದಿಗಳು ಕರ್ತವ್ಯದ ಸಮಯದಲ್ಲಿ ಮೊಬೈಲ್‌ ಬಳಸದಂತೆ ವಿಭಾಗೀಯ ಯಾಂತ್ರಿಕ ಅಭಿಯಂತರರು, ಎಲ್ಲ ಘಟಕ ವ್ಯವಸ್ಥಾಪಕರು ಮತ್ತು ಸಹಾಯಕ ಕಾರ್ಯಾ ಅಧಿಕ್ಷಕರು/ ಪಾರುಪತ್ತೆಗಾರರು ಕೂಡಲೆ ಅಗತ್ಯ ಕ್ರಮ ಎಂದು ಗುರುವಾರ (ಸೆ.18ರಂದು) ಆದೇಧಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಎಲ್ಲ ಘಟಕ ಮತ್ತು ವಿಭಾಗೀಯ ಕಾರ್ಯಾಗಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ತಾಂತ್ರಿಕ ಸಿಬ್ಬಂದಿಗಳು ತಮ್ಮ ಕರ್ತವ್ಯದ ಸಮಯದಲ್ಲಿ ನಿರಂತರವಾಗಿ ಮೊಬೈಲ್ ದೂರವಾಣಿಯನ್ನು ಬಳಸುವುದರಿಂದ ದೈನಂದಿನ ತಾಂತ್ರಿಕ ಕೆಲಸಕಾರ್ಯಗಳಲ್ಲಿ ವಿಳಂಬವಾಗುತ್ತಿದೆ....

ಚಿತ್ರದುರ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗ ಎಲ್ಲ ಘಟಕ ಮತ್ತು ವಿಭಾಗೀಯ ಕಾರ್ಯಾಗಾರದಲ್ಲಿ ಕರ್ತವ್ಯ ನಿರ...

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದ ಬೆಳಗಾವಿ ಘಟಕ -1 ಮತ್ತು 2 ಹಾಗೂ ಮುಖ್ಯ ತಂಗುದಾಣದಲ್ಲಿ ಕುಡಿಯುವ ನೀರಿಲ್...
19/09/2025

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದ ಬೆಳಗಾವಿ ಘಟಕ -1 ಮತ್ತು 2 ಹಾಗೂ ಮುಖ್ಯ ತಂಗುದಾಣದಲ್ಲಿ ಕುಡಿಯುವ ನೀರಿಲ್ಲದೆ ನಿತ್ಯ ಸಂಸ್ಥೆಯ ಸಿಬ್ಬಂದಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಸಿಬ್ಬಂದಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ತುರ್ತು ಕ್ರಮ ತೆಗೆದುಕೊಂಡು ನಮಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿಸಿ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಹಾಗೂ ವಿಭಾಗಗದ ಮೇಲಧಿಕಾರಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಮನವಿ ಸಲ್ಲಿಸಿದ್ದಾರೆ. ಸಂಸ್ಥೆಯ ಸಿಬ್ಬಂದಿಗಳು ಎಂಡಿ ಅವರನ್ನು ನೇರವಾಗಿ ಭೇಟಿ ಮಾಡಿ ಮನವಿ ಸಲ್ಲಿಸುವುದಕ್ಕೆ ಕೆಳಹಂತದ ಅಧಿಕಾರಿಗಳು ಅವಕಾಶ ಮಾಡಿಕೊಡುವುದಿಲ್ಲ....

ಬೆಳಗಾವಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬೆಳಗಾವಿ ವಿಭಾಗದ ಬೆಳಗಾವಿ ಘಟಕ -1 ಮತ್ತು 2 ಹಾಗೂ ಮುಖ್ಯ ತಂಗುದಾಣದಲ್ಲಿ ಕುಡಿಯುವ ...

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್...
18/09/2025

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅಧಿಕಾರಿಗಳಿಗೆ ತಾಕೀತು ಮಾಡಿದರು. ಜೆಸಿ ರಸ್ತೆಯಲ್ಲಿರುವ ವೈಟ್ ಟಾಪಿಂಗ್ ಕಾಮಗಾರಿ ನಡೆಯುವ ಸ್ಥಳಕ್ಕೆ ಇಂದು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದ ಅವರು, ರಸ್ತೆಯ ಮಿನರ್ವ ವೃತ್ತದಿಂದ ಟೌನ್ ಹಾಲ್ ವರೆಗೆ 1 ಕಿ.ಮೀ ಉದ್ದದ ರೆಸ್ತೆಯನ್ನು ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯ ಅರ್ಧ ಭಾಗದಲ್ಲಿ ಕಾಮಗಾರಿ ಪ್ರಾರಂಭಿಸಿ ಉಳಿದರ್ಧ ಭಾಗದಲ್ಲಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿರುವುದನ್ನು ಗಮನಿಸಿ, ಶೀಘ್ರಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬೆಂಕು ಎಂದು ಹೇಳಿದರು....

ಬೆಂಗಳೂರು: ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಜೆಸಿ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯನ್ನು ಶೀ.....

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕು...
18/09/2025

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಬಗ್ಗೆ x ಮಾಡಿರುವ ಅವರು, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರು ಈ ಅಪಮಾನಕ್ಕೆ ಹೊಣೆಗಾರರು. ಬೆಂಗಳೂರು ಮತ್ತು ಕರ್ನಾಟಕ ಇವತ್ತು ಅದಕ್ಷರು, ಭ್ರಷ್ಟರ ಕೈಯ್ಯಲ್ಲಿ ಸಿಕ್ಕಿ ನರಳುತ್ತಿವೆ. ಹೆಜ್ಜೆ ಹೆಜ್ಜೆಗೂ ಸಾವಿನ ಗುಂಡಿ. ಕಂಡೆಲ್ಲೆಲ್ಲ ಕಸದ ರಾಶಿ. ಗ್ರೇಟರ್ ಬೆಂಗಳೂರು ಎಂದರೆ ಇದೇನಾ? ಜಿಬಿಎ ಏನು ಮಾಡುತ್ತಿದೆ? ಜನರ ತೆರಿಗೆ ದುಡ್ಡು ನುಂಗಿ ಗೊರಕೆ ಹೊಡೆಯುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ....

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯ...

ಬೆಂಗಳೂರು: ರೈತ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ ರಾಜ್ಯದ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಚರ...
18/09/2025

ಬೆಂಗಳೂರು: ರೈತ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ ರಾಜ್ಯದ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಚರ್ಚಿಸಿ ಮನವಿ ಸಲ್ಲಿಸಲಾಯಿತು. ಸಿಎಂ ನಿವಾಸದಲ್ಲಿ ಭೇಟಿ ಮಾಡಿದ ರೈತ ಮುಖಂಡರ ನಿಯೋಗ ಮಳೆ ಹಾನಿ, ಬೆಳೆ ನಷ್ಟ ಪರಿಹಾರ ಹೆಚ್ಚಿಸಬೇಕು. ಇನ್ನು ರಾಜ್ಯಾದ್ಯಂತ ಇರುವ 38,000 ಕೆರೆಗಳ ಹೂಳು ತೆಗೆಸಿ ರೈತರ ಜಮೀನಿಗೆ ಆ ಹೂಳು ಮಣ್ಣನ್ನು ಸರಬರಾಜು ಮಾಡಲು ಯೋಜನೆಯ ರೂಪಿಸಿ ಅನುದಾನ ನಿಗದಿ ಮಾಡಬೇಕು ಎಂದು ಒತ್ತಾಯಿಸಿದರು. 2025- 26ರಲ್ಲಿ ಕಬ್ಬಿನ ಉತ್ಪನ್ನವೆಚ್ಚ ಏರಿಕೆಯಾಗಿದ್ದು ಎಫ್‌ಆರ್‌ಪಿ ದರ ಸಮಂಜಸವಾಗಿಲ್ಲ. ಕಬ್ಬಿನ ಎಫ್‌ಆರ್‌ಪಿ ದರಕ್ಕೆ ಹೆಚ್ಚುವರಿಯಾಗಿ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನಿಗದಿ ಮಾಡಬೇಕು....

ಬೆಂಗಳೂರು: ರೈತ ಮುಖಂಡರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು ಭೇಟಿ ಮಾಡಿ ರಾಜ್ಯದ ರೈತರ ವಿವಿಧ ಸಮಸ್ಯೆಗಳನ್ನು ಬಗೆಹರ...

ಬೆಂಗಳೂರು: ಇಡೀ ಭಾರತ ದೇಶದಲ್ಲಿ ಓಟ್‌ ಕಳ್ಳತನವಾಗಿದೆ. ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗೋದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡ...
18/09/2025

ಬೆಂಗಳೂರು: ಇಡೀ ಭಾರತ ದೇಶದಲ್ಲಿ ಓಟ್‌ ಕಳ್ಳತನವಾಗಿದೆ. ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗೋದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದ್ದಾರೆ. ಮತಗಳ್ಳತನ ಬಗ್ಗೆ ಕಾಂಗ್ರೆಸ್‌ ಪಕ್ಷದ ಸಂಸದ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಸಂಬಂಧ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿ, ಲೋಕಸಭೆ ಚುನಾವಣೆ ವೇಳೆ ಮೂರನೇ ಎಲೆಕ್ಷನ್ ಆಗುವ ಹೊತ್ತಿಗೆ ಬಿಜೆಪಿಯವರ ಪಾಪ್ಯುಲಾರಿಟಿ ಕಡಿಮೆ ಆಯಿತು. ಹೀಗಾಗಿ ಗೆಲ್ಲೋಕೆ ದೇಶದ ಎಲ್ಲ ಭಾಗದಲ್ಲಿ ಮತ ತೆಗೆಯೋ ಕೆಲಸ ಮಾಡಿದರು ಎಂದು ಆರೋಪಿಸಿದರು. ಇನ್ನು ಮಹದೇವಪುರ, ಆಳಂದ ಸೇರಿ ಹಲವು ಕಡೆ ಹೀಗೆ ಮಾಡಿದ್ದಾರೆ. ಬಿಜೆಪಿ ಅವರು ಅಧಿಕಾರ ಇರುವ ಕಡೆ ವಿಪಕ್ಷಗಳ ಕ್ಷೇತ್ರದ ಕಡೆ ಜಾಸ್ತಿ ಮಾಡಿದ್ದಾರೆ....

ಬೆಂಗಳೂರು: ಇಡೀ ಭಾರತ ದೇಶದಲ್ಲಿ ಓಟ್‌ ಕಳ್ಳತನವಾಗಿದೆ. ಚುನಾವಣೆ ಆಯೋಗದಿಂದ ನಮಗೆ ನ್ಯಾಯ ಸಿಗೋದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾ.....

ದಾವಣಗೆರೆ: ನಗರದಲ್ಲಿ ‌ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್...
18/09/2025

ದಾವಣಗೆರೆ: ನಗರದಲ್ಲಿ ‌ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವುಗಳನ್ನು ಕಲ್ಲು ಹೊಡೆದು ಓಡಿಸಿದ್ದೇನೆ ಎಂದು ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರಸ್ವಾಮಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವುದರಿಂದ ಜನಸಾಮಾನ್ಯರು ರಸ್ತೆಯಲ್ಲಿ ಒಡಾಡುವುದಕ್ಕೂ ಭಯ ಪಡುವಂತಾಗಿದೆ. ಈ ನಾಯಿಗಳ ಹಾವಳಿಯನ್ನು ತಪ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುವರು ಎಂದರು. ಇನ್ನು ಈ ವೇಳೆ, ಜಿಲ್ಲೆಯಲ್ಲಿ ವರ್ಷಕ್ಕೆ 5 ರಿಂದ 6 ಸಾವಿರ ಜನರು ಈ ಬೀದಿ ನಾಯಿಗಳ ದಾಳಿಗೆ ತುತ್ತಾಗುತ್ತಿದ್ದಾರೆ....

ದಾವಣಗೆರೆ: ನಗರದಲ್ಲಿ ‌ಬೀದಿ ನಾಯಿಗಳ ಹಾವಳಿ ಹೆಚ್ಚಳವಾಗಿದ್ದು, ನನ್ನನ್ನೂ ಬಿಡದೇ ಬೀದಿ ನಾಯಿಗಳು ಅಟ್ಟಾಡಿಸಿಕೊಂಡು ಬಂದಿದ್ದು, ಅವು...

ನ್ಯೂಡೆಲ್ಲಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕ...
18/09/2025

ನ್ಯೂಡೆಲ್ಲಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ಸರ್ಕಾರ ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್‌ ಅಂಗಳಕ್ಕೆ ತಲುಪಿದೆ. ಮೊನ್ನೆ ಹೈಕೋರ್ಟ್‌ ನೀಡಿದ್ದ ಆದೇಶವನ್ನು ಎಚ್‌.ಎಸ್‌.ಗೌರವ್‌ ಎಂಬವರು ಸುಪ್ರೀಂನಲ್ಲಿ ಪ್ರಶ್ನಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಇದೆ ಸೆ.22 ರಂದು ದಸರಾ ಉದ್ಘಾಟನೆ ನಡೆಯಲಿದೆ. ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಪೀಠದ ಮುಂದೆ ಮನವಿ ಮಾಡಿದ್ದಾರೆ. ಎಚ್‌.ಎಸ್‌.ಗೌರವ್‌ ಅವರು ಸಲ್ಲಿಸಿರುವ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್‌ ಶುಕ್ರವಾರ (ಸೆ.18) ವಿಚಾರಣೆ ನಡೆಸುವುದಾಗಿ ಹೇಳಿದೆ....

ನ್ಯೂಡೆಲ್ಲಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ ಅವರನ್ನು ....

Address

12th Croşs 8th Mai̧n 2nd Stage Kumaraswamy Layout
Bangalore
560078

Alerts

Be the first to know and let us send you an email when ವಿಜಯಪಥ posts news and promotions. Your email address will not be used for any other purpose, and you can unsubscribe at any time.

Contact The Business

Send a message to ವಿಜಯಪಥ:

Share