The Newsnap

The Newsnap The world at your fingertip

'ಡೆವಿಲ್' ಚಿತ್ರೀಕರಣದಲ್ಲಿ ಬಾಗಿ ಮೈಸೂರು: ನಟ​ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ...
12/03/2025

'ಡೆವಿಲ್' ಚಿತ್ರೀಕರಣದಲ್ಲಿ ಬಾಗಿ ಮೈಸೂರು: ನಟ​ ದರ್ಶನ್ ಬುಧವಾರ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಅರ್ಧಕ್ಕೆ ನಿಂತಿದ್ದ 'ಡೆವಿಲ್'​ ಸಿನಿಮಾದ ಚಿತ್ರೀಕರಣದಲ್ಲಿ ಮತ್ತೆ ಪಾಲ್ಗೊಂಡರು. ಹತ್ತು ತಿಂಗಳ ಹಿಂದೆ ಮೈಸೂರಿನಲ್ಲಿ ಡೆವಿಲ್​ ಶೂಟಿಂಗ್​ನಲ್ಲಿದ್ದ ಸಮಯದಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಅವರು ಜೈಲು ಸೇರಿದ್ದರು. Join WhatsApp Group ಈ ಹಿನ್ನೆಲೆಯಲ್ಲಿ ಚಿತ್ರೀಕರಣ ಸ್ಥಗಿತವಾಗಿತ್ತು. ಇದೀಗ ಮತ್ತೆ ಮೈಸೂರಿನಿಂದಲೇ ಚಿತ್ರೀಕರಣ ಆರಂಭವಾಗಿದೆ. ಚಾಮುಂಡೇಶ್ವರಿಯ ಭಕ್ತರಾಗಿರುವ ದರ್ಶನ್‌, ಶೂಟಿಂಗ್​ನಲ್ಲಿ ಪಾಲ್ಗೊಳ್ಳುವ ಮುನ್ನ ಇಂದು ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ, ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು....

Actor Darshan offers special prayers to Chamundeshwari ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

ಮೈಸೂರು:ಮುಡಾ ಹಗರಣದಲ್ಲಿ ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ ಆರೋಪಿಗಳನ್ನು ರಕ್ಷಣೆ ಮಾಡಲು ಸುಳ್ಳು ವರದಿ ಸಲ್ಲಿಸಿದ ಲೋಕಾಯುಕ್ತದ ಮೂವರು ಹಿರಿ...
12/03/2025

ಮೈಸೂರು:ಮುಡಾ ಹಗರಣದಲ್ಲಿ ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ ಆರೋಪಿಗಳನ್ನು ರಕ್ಷಣೆ ಮಾಡಲು ಸುಳ್ಳು ವರದಿ ಸಲ್ಲಿಸಿದ ಲೋಕಾಯುಕ್ತದ ಮೂವರು ಹಿರಿಯ ಐಪಿಎಸ್‌ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತಿ ಆಯೋಗಕ್ಕೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, "ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿರುವ ಕುರಿತು ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ, ಆರೋಪಿಗಳನ್ನು ರಕ್ಷಣೆ ಮಾಡಲು ಲೋಕಾಯುಕ್ತ ಪೊಲೀಸರು ಸುಳ್ಳು ವರದಿಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಈ ಮೂವರು ಲೋಕಾಯುಕ್ತ ಎಡಿಜಿಪಿ ಮನೀಷ್ ಖರ್ಬೀಕರ್‌, ಐಜಿಪಿ ಸುಬ್ರಮಣ್ಯೇಶ್ವರ್‌ ರಾವ್‌, ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್‌ ವಿರುದ್ಧ ಕೇಂದ್ರದ ಜಾಗೃತ ಆಯೋಗಕ್ಕೆ ಮೂರು ಪುಟದ ದೂರನ್ನು ಇಮೇಲ್‌ ಹಾಗೂ ರಿಜಿಸ್ಟರ್‌ ಅಂಚೆ ಮೂಲಕ ಕಳುಹಿಸಿದ್ದೇನೆ" ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು....

Complaint to Central Vigilance Commission against senior Lokayukta officials: Snehamayi

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ-ಮಗರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ...
11/03/2025

ಹಾಸನ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ-ಮಗರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಜಯಂತಿ (60) ಮತ್ತು ಅವರ ಪುತ್ರ ಭರತ್ (35) ಎಂದು ಗುರುತಿಸಲಾಗಿದೆ. ಭರತ್ ಕಳೆದ ಎಂಟು ತಿಂಗಳ ಹಿಂದೆ ಅರಸೀಕೆರೆ ತಾಲ್ಲೂಕಿನ ಬಾಗೂರನಹಳ್ಳಿ ಗ್ರಾಮದ ಯುವತಿಯೊಂದಿಗೆ ವಿವಾಹವಾಗಿದ್ದರು. ಆದರೆ, ಅತ್ತೆ-ಸೊಸೆ ನಡುವೆ ತೊಡಕಿನ ಸಂಬಂಧ ಇದ್ದು, ಪದೇಪದೇ ಜಗಳವಾಗುತ್ತಿತ್ತು. Join WhatsApp Group ಈ ಕಾರಣದಿಂದ ಭರತ್ ಪತ್ನಿ ಗಂಡನ ಜೊತೆ ಇರಲು ನಿರಾಕರಿಸಿ ತವರು ಮನೆಗೆ ಹೋಗಿದ್ದರು....

Mother-in-law-daughter-in-law fight: Mother-son commit su***de ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶ...
11/03/2025

ಬೆಂಗಳೂರು: ರಾಜ್ಯದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್‌ಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಈಗಾಗಲೇ ದಾವಣಗೆರೆ ಮತ್ತು ಚಿಂತಾಮಣಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಕೋರ್ಸ್‌ಗಳನ್ನು ಪ್ರಾರಂಭಿಸಲಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರಕಿದೆ ಎಂದು ಸಚಿವರು ಹೇಳಿದರು. ಈ ಅನುಭವದ ಆಧಾರದ ಮೇಲೆ, ಮುಂದಿನ ಹಂತದಲ್ಲಿ ರಾಜ್ಯದ ಇನ್ನೂ 11 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಈ ಕೋರ್ಸ್‌ಗಳನ್ನು ಅಳವಡಿಸಲಾಗುವುದು. ಪ್ರಾರಂಭಿಕವಾಗಿ 5 ಕಾಲೇಜುಗಳಲ್ಲಿ ಈ ಕಾರ್ಯಕ್ರಮ ಜಾರಿಗೆ ತರಲಾಗುವುದು....

Skill development courses begin in government engineering colleges ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

ರಾಜ್ಯದ ನಾಲ್ಕು ಆಸ್ಪತ್ರೆಗಳಲ್ಲಿ ಸೌಲಭ್ಯ ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅ...
11/03/2025

ರಾಜ್ಯದ ನಾಲ್ಕು ಆಸ್ಪತ್ರೆಗಳಲ್ಲಿ ಸೌಲಭ್ಯ ಬೆಂಗಳೂರು: ರಾಜ್ಯದ ಮೈಸೂರು, ಕಲಬುರಗಿ, ಹುಬ್ಬಳ್ಳಿ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಅಸ್ಥಿಮಜ್ಜೆ ಕಸಿ (ಬೋನ್ ಮ್ಯಾರೊ) ಚಿಕಿತ್ಸಾ ಸೌಲಭ್ಯ ಒದಗಿಸಲು ಸರ್ಕಾರ ತೀರ್ಮಾನಿಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸುತ್ತಾ, ಸಚಿವರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಸೇರಿಸಲಾಗಿದೆ ಎಂದು ವಿವರಿಸಿದರು. Join WhatsApp Group ಇದನ್ನು ಓದಿ -ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ ಈ ಯೋಜನೆಯಡಿ BPL ಕುಟುಂಬಗಳಿಗೆ ಉಚಿತವಾಗಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಲಭ್ಯವಾಗಲಿದೆ. ಈ ಸೇವೆಯನ್ನು ಮೈಸೂರು, ಕಲಬುರಗಿ, ಹುಬ್ಬಳ್ಳಿ ಹಾಗೂ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗಳಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Free bone marrow transplant treatment for BPL families: Facility in four hospitals in the state

Address


Alerts

Be the first to know and let us send you an email when The Newsnap posts news and promotions. Your email address will not be used for any other purpose, and you can unsubscribe at any time.

Contact The Business

Send a message to The Newsnap:

  • Want your business to be the top-listed Media Company?

Share