ಪ್ರಜಾವಾಣಿ ಕಲಬುರಗಿ

  • Home
  • ಪ್ರಜಾವಾಣಿ ಕಲಬುರಗಿ

ಪ್ರಜಾವಾಣಿ ಕಲಬುರಗಿ Prajavani: ಕಲಬುರಗಿ ಜಿಲ್ಲೆಯ ಸುದ್ದಿ-ಮಾಹಿತಿ
A .net Initiative

05/10/2025
04/10/2025

ಭೀಮಾ ನದಿ ಪ್ರವಾಹ ಬಂದು ಹೋದ ಬಳಿಕವೂ ಕಲಬುರಗಿ ತಾಲ್ಲೂಕಿನ ಹಾಗರಗುಂಡಗಿ ಗ್ರಾಮದ ಜನರ ಬದುಕು ಇನ್ನೂ ಹಳಿಗೆ ಮರಳಿಲ್ಲ.
‘ಪ್ರಜಾವಾಣಿ’ ಬಳಿ ತಮ್ಮ ಬವಣೆ ತೋಡಿಕೊಂಡ ಅಜ್ಜಿ ಇಮಾಮ್‌ಬಿ.

ವಿಡಿಯೊ ಮಾಹಿತಿ: ಮನೋಜಕುಮಾರ ಗುದ್ದಿ

30/09/2025

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿ ಪ್ರವಾಹ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಚಿವರಾದ ಪ್ರಿಯಾಂಕ್‌ ಖರ್ಗೆ, ಎಂ.ಬಿ. ಪಾಟೀಲ ಅವರೂ ಮುಖ್ಯಮಂತ್ರಿ ಜೊತೆಗೆ ವೈಮಾನಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿದ್ದರು. ಭೀಮಾ ನದಿಯ ಪ್ರವಾಹದಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿಗೆ ಮಾಹಿತಿ ನೀಡಿದರು...

29/09/2025
29/09/2025

ರಾಜ್ಯದ ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿಹೋಗಿವೆ. ಮಹಾರಾಷ್ಟ್ರದ ಜಲಾಶಯಗಳಿಂದ...

28/09/2025

ಸೇಡಂನಲ್ಲಿ ಗಮನ ಸೆಳೆದ ಗರ್ಬಾ ನೃತ್ಯ

ಶಿವಸೇನಾ ದಸರಾ ಉತ್ಸವ ಸಮಿತಿ ಆಯೋಜಿಸಿದ್ದ 31 ನೇ ದಸರಾ ಉತ್ಸವದಲ್ಲಿ ಮಹಿಳೆಯರಿಂದ ಸಾಮೂಹಿಕ ಗರ್ಬಾ ನೃತ್ಯ ಪ್ರದರ್ಶಿಸಲಾಯಿತು. ಯುವತಿಯರು, ಮಹಿಳೆಯರು ಗರ್ಬಾ ನೃತ್ಯ ಪ್ರದರ್ಶಿಸಿದರು. ಜನರು ಮೊಬೈಲ್ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಂಡು, ವಿಡಿಯೋ ಮಾಡಿ ಸಂತಸಪಟ್ಟರು.

ವಿಡಿಯೊ: ಅವಿನಾಶ ಬೋರಂಚಿ

28/09/2025

ಕಲಬುರ್ಗಿ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಾಗೂ ಕೃಷ್ಣಾ ನದಿಗೆ ಮಹಾರಾಷ್ಟ್ರದ ಉಜನಿ ಹಾಗೂ ನೀರ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಟ್ಟಿರುವುದರಿಂದ ಭೀಮಾ ನದಿ ತೀರದಲ್ಲಿ ಹಾಗೂ ಬೆಣ್ಣೆತೋರಾದಲ್ಲಿ ಪ್ರವಾಹದ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಮೇಲೆ ತೀವ್ರ ನಿಗಾವಹಿಸಿ, ಅಗತ್ಯ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ಮತ್ತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ಕಲಬುರ್ಗಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಲೆದೋರಿರುವ ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನೀಡಿದ ಸೂಚನೆಗಳು ಹೀಗಿವೆ;

* ಜಿಲ್ಲಾಧಿಕಾರಿಗಳು ಮತ್ತು ಸಿಇಒ ಗಳು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ತುರ್ತು ಕ್ರಮ ಕೈಗೊಳ್ಳಬೇಕು.

* ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಕ್ಷಣ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು.

* ಗ್ರಾಮೀಣಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು, ಜಲ ಸಂಪನ್ಮೂಲ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳು ಸ್ಥಳಕ್ಕೆ ಭೇಟಿ ನೀಡಬೇಕು.

* ಜನ ಮತ್ತು ಜಾನವಾರುಗಳ ಪ್ರಾಣ ರಕ್ಷಣೆಗೆ ಪ್ರಥಮ ಆದ್ಯತೆ ನೀಡಿ, ಅಗತ್ಯವಿರುವ ಎಲ್ಲಾ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

* ಸಂತ್ರಸ್ಥರಿಗೆ ಕಾಳಜಿ ಕೇಂದ್ರಗಳು, ಜಾನುವಾರುಗಳಿಗೆ ಅಗತ್ಯ ಮೇವು ಸೇರಿದಂತೆ ತಾತ್ಕಾಲಿಕ ಸೂರು ಕಲ್ಪಿಸಬೇಕು.

28/09/2025

ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಕಣಸೂರ ಗ್ರಾಮದಲ್ಲಿ ಬೆಣ್ಣೆತೊರಾ ಜಲಾಶಯದ ಪ್ರವಾಹದಿಂದಾಗಿ ಮನೆಗಳಿಗೆ ನೀರು ನುಗ್ಗಿದೆ. ಪ್ರವಾಹದ ನೀರಿನಲ್ಲೇ ಜನ ಬಟ್ಟೆ ತೊಳೆಯುತ್ತಿದ್ದಾರೆ. ಗ್ರಾಮದ ಜನರ ಬದುಕು ನೀರುಪಾಲಾಗಿದೆ...

ವಿಡಿಯೊ ಮಾಹಿತಿ: ಗುಂಡಪ್ಪ ಕರೆಮನೋರ

28/09/2025

ಕಲ್ಯಾಣ–ಉತ್ತರ ಕರ್ನಾಟಕದ ಸಂಪರ್ಕ ಕಡಿತ

27/09/2025

ನವರಾತ್ರಿ ಉತ್ಸವ ಅಂಗವಾಗಿ ಕಲಬುರಗಿ ಜಸ್ಟ್‌ ಕ್ಲಬ್‌ನಲ್ಲಿ ‌ಶನಿವಾರ ನಡೆದ ದಾಂಡಿಯಾ ನೃತ್ಯದಲ್ಲಿ ನಟಿ ರಾಗಿಣಿ ದ್ವಿವೇದಿ ಪಾಲ್ಗೊಂಡಿದ್ದರು.

ವಿಡಿಯೊ: ತಾಜುದ್ದೀನ್‌ ಆಜಾದ್‌

Address


Website

Alerts

Be the first to know and let us send you an email when ಪ್ರಜಾವಾಣಿ ಕಲಬುರಗಿ posts news and promotions. Your email address will not be used for any other purpose, and you can unsubscribe at any time.

Contact The Business

Send a message to ಪ್ರಜಾವಾಣಿ ಕಲಬುರಗಿ:

  • Want your business to be the top-listed Media Company?

Share