
17/09/2025
*ದೆಹಲಿಯಲ್ಲಿ ಅಡ್ಡಪಲ್ಲಕ್ಕಿ ಉತ್ಸವ ಮತ್ತು ವೀರಭದ್ರೇಶ್ವರ ಜಯಂತಿ ಇತಿಹಾಸ ನಿರ್ಮಿಸಿದೆ*
*ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ನವದೆಹಲಿಯಲ್ಲಿ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಕೇದಾರ್ ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ ಮತ್ತು ಶ್ರೀ ವೀರಭದ್ರೇಶ್ವರ ಸ್ವಾಮೀಯ ಜಯಂತ್ಯೋತ್ಸವ 2025 ಮತ್ತು ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ ಕಾರ್ಯಕ್ರಮ* ಅದ್ದೂರಿಯಾಗಿ ಜರುಗಿತು.
ಈ ಕಾರ್ಯಕ್ರಮದಲ್ಲಿ ನಾಡಿನ ಬಹುತೇಕ ಪ್ರಮುಖ ಮಠಾಧೀಶರು ಮತ್ತು ಗಣ್ಯರು ಭಾಗವಹಿಸಿದರು. *ಈ ವರ್ಷದ ಪ್ರಶಸ್ತಿಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯ ಮಂತ್ರಿಗಳು ಮತ್ತು ರಾಜ್ಯ ಸಭಾ ಸದಸ್ಯರಾದ ಶ್ರೀ ಅಶೋಕ ಶಂಕರರಾವ ಚವ್ಹಾಣ* ರವರಿಗೆ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಮತ್ತು ಮಹಾರಾಷ್ಟ್ರ ರಾಜ್ಯಸಭಾ ಸದಸ್ಯರಾದ ಶ್ರೀ ಅಜೀತ್ ಗೋಪಿಚಡೆ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಪ್ರದೀಪ್ ಕಂಕಣವಾಡಿ. ರಾಷ್ಟ್ರೀಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಖುಭಾ, ಮಹಿಳಾ ಘಟಕದ ರಾಷ್ಟ್ರೀಯ ಉಪಾಧ್ಯಕ್ಷೆ ದಿವ್ಯಾ ಹಾಗರಗಿ, ಕರ್ನಾಟಕ ರಾಜ್ಯಾಧ್ಯಕ್ಷ ರವಿ ಬಿರಾದಾರ, ವಿರುಪಣ್ಣ ಅಂಗಡಿ, ಬಸವನಗೌಡ ಪಾಟೀಲ್, ಸುಮಲತಾ ಬಾದಾಮಿ, ಬೀರೂರು ಶಿವು ಸ್ವಾಮಿ ಶಿವಯ್ಯ್ ಸ್ವಾಮಿ, ದೆಹಲಿ ವೀರಶೈವ ಲಿಂಗಾಯತ ಸಮಾಜ ಅಧ್ಯಕ್ಷ ಸೋಮಲಿಂಗ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಸಂಘ ಸಂಸ್ಥೆಗಳು ಹಾಗೂ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದರು.